ಭಾರತದ ಎಲ್ಲ ಮಾಜಿ ಪ್ರಧಾನಮಂತ್ರಿಗಳ ಮ್ಯೂಸಿಯಂ ಉದ್ಘಾಟನೆ ಏಪ್ರಿಲ್​ 14ಕ್ಕೆ; ತಾರತಮ್ಯ ಇಲ್ಲವೇ ಇಲ್ಲವೆಂದ ಪ್ರಧಾನಿ ಮೋದಿ

ಏಪ್ರಿಲ್​ 6-14ರವರೆಗೆ ಸಾಮಾಜಿಕ ಸಾಮರಸ್ಯ ನ್ಯಾಯ ದಿನ ಆಚರಿಸಲಾಗುವುದು. ಏಪ್ರಿಲ್​ 6ರಂದು ಪಕ್ಷದ ಸಂಸ್ಥಾಪನಾ ದಿನ. ಅಂದು ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಭಾರತದ ಎಲ್ಲ ಮಾಜಿ ಪ್ರಧಾನಮಂತ್ರಿಗಳ ಮ್ಯೂಸಿಯಂ ಉದ್ಘಾಟನೆ ಏಪ್ರಿಲ್​ 14ಕ್ಕೆ; ತಾರತಮ್ಯ ಇಲ್ಲವೇ ಇಲ್ಲವೆಂದ ಪ್ರಧಾನಿ ಮೋದಿ
ಬಿಜಪಿ ಸಂಸದೀಯ ಸಭೆ
Follow us
| Updated By: Lakshmi Hegde

Updated on: Mar 29, 2022 | 1:11 PM

ಇಂದು ದೆಹಲಿಯ ಅಂಬೇಡ್ಕರ್​ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆ (BJP Parliamentary Meet) ನಡೆದಿತ್ತು. ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗೃಹ ಸಚಿವ ಅಮಿತ್​ ಶಾ ಇತರರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಏಪ್ರಿಲ್​ 6ರಿಂದ 14ರವರೆಗೆ ಸಾಮಾಜಿಕ ಸಾಮರಸ್ಯ ನ್ಯಾಯ ದಿನವನ್ನಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭಾರತದ ಮಾಜಿ ಪ್ರಧಾನಮಂತ್ರಿಗಳ ಮ್ಯೂಸಿಯಂಯೊಂದನ್ನು ನಿರ್ಮಾಣ ಮಾಡಲಾಗಿದ್ದು, ಅದನ್ನು ಏಪ್ರಿಲ್​ 14ರಂದು ಉದ್ಘಾಟಿಸಲಾಗುತ್ತದೆ ಎಂದೂ ತಿಳಿಸಿದ್ದಾರೆ. ಅಂದಹಾಗೇ, ಈ ಮ್ಯೂಸಿಯಂ ತೀನ್​ ಮೂರ್ತಿ ಭವನ್​​ದಲ್ಲಿ ನಿರ್ಮಾಣವಾಗಿದ್ದು, ಮಾಜಿ ಪ್ರಧಾನಮಂತ್ರಿಗಳಿಗೆ ಸಂಬಂಧಪಟ್ಟ ಮಹತ್ವದ ವಿಚಾರಗಳ ಸಂಗ್ರಹವಾಗಿದೆ. ನಾವು ಎಲ್ಲರನ್ನೂ ಒಂದೇ ರೀತಿ ನೋಡುತ್ತೇವೆ, ಗೌರವಿಸುತ್ತೇವೆ. ಯಾರ ಬಗ್ಗೆಯೂ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಫೆಬ್ರವರಿ-ಮಾರ್ಚ್​​ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳನ್ನು ಗೆದ್ದು, ಸರ್ಕಾರ ರಚನೆ ಮಾಡಿದ ಬಳಿಕ ಬಿಜೆಪಿ ಇದೇ ಮೊದಲ ಬಾರಿಗೆ ಸಂಸದೀಯ ಸಭೆ ನಡೆಸಿದೆ. ಇದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಅರ್ಜುನ್​ ರಾಮ್​ ಮೇಘ್ವಾಲ್​, ಈ ಸಭೆಯಲ್ಲಿ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ್​  ಯೋಜನೆ ಬಗ್ಗೆ ವ್ಯಾಪಕ ಚರ್ಚೆ ನಡೆದಿದೆ. ಯೋಜನೆಯ ಅವಧಿಯನ್ನು ಇನ್ನೂ ಆರು ತಿಂಗಳು ವಿಸ್ತರಿಸಿದ್ದಕ್ಕೆ ನಾವೆಲ್ಲರೂ ಪ್ರಧಾನಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಏಪ್ರಿಲ್​ 6-14ರವರೆಗೆ ಸಾಮಾಜಿಕ ಸಾಮರಸ್ಯ ನ್ಯಾಯ ದಿನ ಆಚರಿಸಲಾಗುವುದು. ಏಪ್ರಿಲ್​ 6ರಂದು ಪಕ್ಷದ ಸಂಸ್ಥಾಪನಾ ದಿನ. ಅಂದು ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾರೆ. ನಂತರ 14ರವರೆಗೂ ಅಂದರೆ ಅಂಬೇಡ್ಕರ್ ಜಯಂತಿಯವರೆಗೂ ಪ್ರತಿ ರಾಜ್ಯದಲ್ಲಿ ಬ್ಲಾಕ್​ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಂದರೆ ಕೆರೆಗಳನ್ನು ಸ್ವಚ್ಛಗೊಳಿಸುವುದು, ಆರೋಗ್ಯ ಶಿಬಿರದಂತಹ ಸಾಮಾಜಿಕ ಕೆಲಸಗಳನ್ನು ಮಾಡಲಾಗುವುದು.  ಇನ್ನು 6ನೇ ತಾರೀಖಿನಂದು ಬೆಳಗ್ಗೆ ಪಕ್ಷದ ಧ್ವಜ ಹಾರಿಸಲಾಗುವುದು. 9.45ಕ್ಕೆ ಪ್ರಧಾನಿ ಮೋದಿ ಭಾಷಣ ಇದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯನ್ನೇ ಕೊಂದ ಪತ್ನಿ; ಪ್ರಿಯಕರ ನಾಗೇಶ್, ಅಣ್ಣ ನಾರಾಯಣಸ್ವಾಮಿ ಬಂಧನ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್