LK Advani :ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

LK Advani Hospitalised: ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರನ್ನು ನರರೋಗ ತಜ್ಞ ಡಾ., ವಿನಿತ್ ಅವರು ನೋಡಿಕೊಳ್ಳುತ್ತಿದ್ದಾರೆ.

LK Advani :ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು
ಎಲ್​ಕೆ ಅಡ್ವಾಣಿ

Updated on: Aug 06, 2024 | 2:48 PM

ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ(LK Advani) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರನ್ನು ನರರೋಗ ತಜ್ಞ ಡಾ., ವಿನಿತ್ ಅವರು ನೋಡಿಕೊಳ್ಳುತ್ತಿದ್ದಾರೆ.

ಜುಲೈನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗುವ ಮೊದಲು ಅಡ್ವಾಣಿ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕೂಡ ದಾಖಲಾಗಿದ್ದರು.
ಸುಮಾರು ಮೂರು ದಶಕಗಳ ಸಂಸದೀಯ ವೃತ್ತಿಜೀವನವನ್ನು ಪೂರ್ಣಗೊಳಿಸಿದ ಅಡ್ವಾಣಿ 1999 ರಿಂದ 2004ರವರೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಮೊದಲು ಗೃಹ ಸಚಿವರಾಗಿದ್ದರು ನಂತರ ಉಪ ಪ್ರಧಾನಿಯಾಗಿದ್ದರು.

ಮಾರ್ಚ್‌ನಲ್ಲಿ ಭಾರತ ರತ್ನ ನೀಡಿ ಗೌರವಿಸಲಾಯಿತು. ಅವರ ನಿವಾಸದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಅಡ್ವಾಣಿ ಅವರ ಕುಟುಂಬ ಉಪಸ್ಥಿತರಿದ್ದರು.

 

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:44 pm, Tue, 6 August 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us