ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಲ್​ಕೆ ಅಡ್ವಾಣಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಸಾವಿರಾರು ಸಂತರ ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ರಾಮ ಮಂದಿರ ಚಳವಳಿಯ ರೂವಾರಿ ಎಲ್​ಕೆ ಅಡ್ವಾಣಿ ಭಾಗವಹಿಲಿರುವುದು ಇದೀಗ ಅಧಿಕೃತಗೊಂಡಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಲ್​ಕೆ ಅಡ್ವಾಣಿ
ಎಲ್​​ಕೆ ಅಡ್ವಾಣಿ
Follow us
Ganapathi Sharma
|

Updated on:Jan 11, 2024 | 7:06 AM

ನವದೆಹಲಿ, ಜನವರಿ 11: ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir in Ayodhya) ಜನವರಿ 22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆಯ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್​​ಕೆ ಅಡ್ವಾಣಿ (LK Advani) ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ರಾಮ ಮಂದಿರ ಹೋರಾಟದ ರೂವಾರಿ ಆಗಿರುವ ಅಡ್ವಾಣಿ, ಅಯೋಧ್ಯೆಯ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ವಿಹೆಚ್​ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಅಡ್ವಾಣಿ ಮತ್ತು ಮತ್ತೊಬ್ಬರು ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಈ ಹಿಂದೆ ಮಾಧ್ಯಮಗಳಿಗೆ ತಿಳಿಸಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಂತರದಲ್ಲಿ ಉಭಯ ನಾಯಕರ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಫೋಟೊಗಳು ಪ್ರಕಟಗೊಂಡಿದ್ದವು.

ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಸಾವಿರಾರು ಸಂತರ ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.

ಏತನ್ಮಧ್ಯೆ, ಅದ್ದೂರಿ ಸಮಾರಂಭಕ್ಕೆ ಅಯೋಧ್ಯೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ರಾಮಮಂದಿರಕ್ಕೆ ಈಗಾಗಲೇ 1,100 ಕೆಜಿ ತೂಕದ ದೀಪ, ಎಂಟು ಲೋಹಗಳಿಂದ ಮಾಡಿದ 2,100 ಕೆಜಿ ತೂಕದ ಗಂಟೆ ಸೇರಿದಂತೆ ಭಾರತ ಮತ್ತು ವಿದೇಶಗಳಿಂದ ವಿಶೇಷ ಕೊಡುಗೆಗಳನ್ನು ಕಳುಹಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಎಲ್​ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಭಾಗಿಯಾಗುತ್ತಾರಾ?

ಕಾರ್ಯಕ್ರಮದ ಮೊದಲು, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳ ಸ್ವಯಂಸೇವಕರು ದೇಶಾದ್ಯಂತ ಜನರಿಗೆ ರಾಮ ಮಂದಿರಕ್ಕೆ ಭೇಟಿ ನೀಡುವಂತೆ ಮಂತ್ರಾಕ್ಷತೆ ಸಹಿತ ಆಹ್ವಾನ ನೀಡುತ್ತಿದ್ದಾರೆ. ಪ್ರಾಣ ಪ್ರತಿಷ್ಠೆಯ ದಿನ ಮನೆಯಲ್ಲಿ ಹಾಗೂ ನೆರೆಹೊರೆಯಲ್ಲಿರುವ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತಿದ್ದಾರೆ.

ಅಡ್ವಾಣಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಅವರಿಗಾಗಿ ಅಯೋಧ್ಯೆಯಲ್ಲಿ ವೈದ್ಯಕೀಯ ತಂಡ ನಿಯೋಜನೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ರಾಮಮಂದಿರಕ್ಕಾಗಿ ರಥಯಾತ್ರೆ ಮಾಡಿದ್ದ ಲಾಲ್ ಕೃಷ್ಣ ಅಡ್ವಾಣಿ ಅಯೋಧ್ಯೆ ಹೋರಾಟದ ಪ್ರಮುಖ ರೂವಾರಿಯಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 am, Thu, 11 January 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ