Akhilesh Yadav: ಪುಷ್ಪರಾಜ್ ಜೈನ್ ಮೇಲಿನ ಐಟಿ ದಾಳಿ ಹಿಂದೆ ಬಿಜೆಪಿ ಕೈವಾಡ; ಅಖಿಲೇಶ್ ಯಾದವ್ ಆರೋಪ

| Updated By: ಸುಷ್ಮಾ ಚಕ್ರೆ

Updated on: Dec 31, 2021 | 4:05 PM

ಪುಷ್ಪರಾಜ್ ಜೈನ್​ಗೆ ಸಂಬಂಧಿಸಿದ ಒಟ್ಟು 50 ಸ್ಥಳಗಳಲ್ಲಿ ಇಂದು ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಸುಗಂಧ ದ್ರವ್ಯದ ಉದ್ಯಮಿಯಾಗಿರುವ ಪುಷ್ಪರಾಜ್ ಜೈನ್ ಸಮಾಜವಾದಿ ಪಕ್ಷದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.

Akhilesh Yadav: ಪುಷ್ಪರಾಜ್ ಜೈನ್ ಮೇಲಿನ ಐಟಿ ದಾಳಿ ಹಿಂದೆ ಬಿಜೆಪಿ ಕೈವಾಡ; ಅಖಿಲೇಶ್ ಯಾದವ್ ಆರೋಪ
ಅಖಿಲೇಶ್ ಯಾದವ್
Follow us on

ಕನೌಜ್: ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ವಿಧಾನ ಪರಿಷತ್ ಸದಸ್ಯ ಪುಷ್ಪರಾಜ್ ಜೈನ್ ಮನೆ ಮೇಲೆ ಇಂದು ಐಟಿ ದಾಳಿ ನಡೆಸಲಾಗಿದೆ. ಚುನಾವಣೆ ಬೆನ್ನಲ್ಲೇ ತೆರಿಗೆ ವಂಚನೆಯ ಆರೋಪದಲ್ಲಿ ಇಂದು ಎಸ್​ಪಿ ಶಾಸಕ ಪುಷ್ಪರಾಜ್ ಜೈನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಸ್ಥ ಅಖಿಲೇಶ್ ಯಾದವ್ ಎಸ್‌ಪಿ ಶಾಸಕ ಪುಷ್ಪರಾಜ್ ಜೈನ್ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷವನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಪುಷ್ಪರಾಜ್ ಜೈನ್​ಗೆ ಸಂಬಂಧಿಸಿದ ಒಟ್ಟು 50 ಸ್ಥಳಗಳಲ್ಲಿ ಇಂದು ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಸುಗಂಧ ದ್ರವ್ಯದ ಉದ್ಯಮಿಯಾಗಿರುವ ಪುಷ್ಪರಾಜ್ ಜೈನ್ ಸಮಾಜವಾದಿ ಪಕ್ಷದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಬಿಜೆಪಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದು ರಾಜಕೀಯ ಪ್ರೇರಿತ ದಾಳಿ ಎಂದಿದ್ದಾರೆ.

ಈ ಮೊದಲು ಪಿಯೂಷ್​ ಜೈನ್​ ಮನೆ ಮೇಲೆ ಐಟಿ ದಾಳಿ ನಡೆಸಲು ಬಿಜೆಪಿ ಮುಂದಾಗಿತ್ತು. ಆದರೆ, ಆ ವ್ಯಕ್ತಿ ಬಿಜೆಪಿಯವನೇ ಎಂದು ಗೊತ್ತಾದ ಬಳಿಕ ಬಿಜೆಪಿಗೆ ನಿರಾಸೆಯಾಯಿತು. ಪಿಯೂಷ್ ಜೈನ್ ಬಂಧನಕ್ಕೆ ಕಾರಣವಾದ ಶಿಕಾರ್ ಪಾನ್ ಮಸಾಲಾ ಸಾಗಣೆಗೂ ಪ್ರಧಾನಿ ಮೋದಿಗೂ ಸಂಬಂಧವಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನವೆಂಬರ್ 9ರಂದು ಪುಷ್ಪರಾಜ್ ಜೈನ್ ತಯಾರಿಸಿದ ಸಮಾಜವಾದಿ ಪರ್​ಫ್ಯೂಮ್ ಅನ್ನು ಅಖಿಲೇಶ್ ಯಾದವ್ ಬಿಡುಗಡೆ ಮಾಡಿದ್ದರು. ತಮ್ಮ ಪಕ್ಷದ ವಿಧಾನ ಪರಿಷತ್ ಸದಸ್ಯರೂ ಆಗಿರುವ ಸುಗಂಧ ದ್ರವ್ಯ ವ್ಯಾಪಾರಿ ಪುಷ್ಪರಾಜ್ ಜೈನ್ ಅವರಿಗೆ ಸೇರಿದ 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಯ ಕುರಿತು ಅಖಿಲೇಶ್ ಯಾದವ್ ಕಿಡಿ ಕಾರಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾನ್ಪುರ ಮೂಲದ ಸುಗಂಧ ದ್ರವ್ಯದ ಉದ್ಯಮಿ ಪಿಯೂಷ್ ಜೈನ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು 197 ಕೋಟಿ ರೂ.ಗೂ ಹೆಚ್ಚು ನಗದು, 20 ಕೆಜಿಗೂ ಹೆಚ್ಚು ಚಿನ್ನ ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಪುಷ್ಪರಾಜ್ ಜೈನ್ ಮತ್ತು ಪಿಯೂಷ್ ಜೈನ್ ನೆರೆಹೊರೆಯವರಾಗಿದ್ದು, ಒಂದೇ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಐಟಿ ದಾಳಿ: ಬರೋಬ್ಬರಿ ₹257 ಕೋಟಿ ಜಪ್ತಿ; ಉತ್ತರ ಪ್ರದೇಶದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನ

ತೆರಿಗೆ ವಂಚನೆ: ಉತ್ತರ ಪ್ರದೇಶ ಮತ್ತು ಇತರ ಸ್ಥಳಗಳಲ್ಲಿ ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ