AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ನಂತರವೇ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ: ಮೂಲಗಳು

ನಾಲ್ಕು ರಾಜ್ಯಗಳಿಗೆ ಪಕ್ಷದ ಹಿರಿಯ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಉತ್ತರ ಪ್ರದೇಶಕ್ಕೆ ಗೃಹ ಸಚಿವ ಅಮಿತ್ ಶಾ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ನೇಮಿಸಲಾಗಿದೆ.

ಹೋಳಿ ಹಬ್ಬದ ನಂತರವೇ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ: ಮೂಲಗಳು
ಬಿಜೆಪಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 14, 2022 | 7:14 PM

Share

ದೆಹಲಿ: ಹೋಳಿ ಹಬ್ಬದ (ಮಾರ್ಚ್ 18) ನಂತರ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ (BJP) ಸರಕಾರ ರಚಿಸಲಿದೆ ಎಂದು ಮೂಲಗಳು  ತಿಳಿಸಿವೆ. ಹಬ್ಬದ ನಂತರ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರಕ್ಕೆ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ನಾಲ್ಕು ರಾಜ್ಯಗಳಿಗೆ ಪಕ್ಷದ ಹಿರಿಯ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಉತ್ತರ ಪ್ರದೇಶಕ್ಕೆ ಗೃಹ ಸಚಿವ ಅಮಿತ್ ಶಾ  (Amit Shah)ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ನೇಮಿಸಲಾಗಿದೆ ಎಂದು ಪಕ್ಷದ ಹೇಳಿಕೆ ತಿಳಿಸಿದೆ. ಉತ್ತರಾಖಂಡಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ವಿದೇಶಾಂಗ ಸಚಿವೆ ಮೀನಾಕ್ಷಿ ಲೇಖಿ ಅವರನ್ನು ನೇಮಕ ಮಾಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರಿಗೆ ಮಣಿಪುರದ ಹೊಣೆ ನೀಡಲಾಗಿದೆ. ಗೋವಾಕ್ಕೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರಾಜ್ಯ ಸಚಿವ ಎಲ್.ಮುರುಗನ್ ಅವರನ್ನು ನೇಮಿಸಲಾಗಿದೆ.  ಎಲ್ಲಾ ನಾಲ್ಕು ರಾಜ್ಯಗಳಲ್ಲಿ ಹಿರಿಯ ನಾಯಕರು ಆರಾಮವಾಗಿ ಪಾಲ್ಗೊಳ್ಳುವ ರೀತಿಯಲ್ಲಿ ಪ್ರಮಾಣವಚನ ಸಮಾರಂಭಗಳನ್ನು ಆಯೋಜಿಸಲು ಪಕ್ಷವು ರಾಜ್ಯಗಳ ನಡುವೆ ಸಮನ್ವಯ ಸಾಧಿಸುತ್ತಿದೆ.

ಪಕ್ಷದ ಹಿರಿಯ ನಾಯಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಪಿಯೂಷ್ ಗೋಯಲ್ ಅವರ ಮೇಲ್ವಿಚಾರಣೆಯಲ್ಲಿ ಶಾಸಕರ ಸಭೆಯನ್ನು ಹೋಳಿ ಮರುದಿನ ಉತ್ತರಾಖಂಡದಲ್ಲಿ ಕರೆಯಲಾಗಿದೆ. ಇಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮಾರ್ಚ್ 20 ರಂದು ನಡೆಯಲಿದೆ.

ಮಣಿಪುರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಗೋವಾದಲ್ಲಿರುವವರು ನಾಳೆ ಮಾಡುತ್ತಾರೆ. ಈ ಎರಡೂ ರಾಜ್ಯಗಳಲ್ಲಿ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲಾಗಿದೆ.ವಿಧಾನಸಭೆಯ ಹಂಗಾಮಿ ಸ್ಪೀಕರ್‌ಗಳು ಪ್ರಮಾಣ ವಚನ ಬೋಧಿಸಲಿದ್ದಾರೆ.

ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಮುಖ್ಯಮಂತ್ರಿಗಳ ಅನಿಶ್ಚಿತತೆಯು ವಿವಿಧ ಕಾರಣಗಳಿಗಾಗಿ ಇನ್ನೂ ಮುಂದುವರೆದಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಗೂ ಮುನ್ನ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಯಿತು ಆದರೆ ಈಶಾನ್ಯ ರಾಜ್ಯದಲ್ಲಿ ಮತ್ತೊಬ್ಬ ನಾಯಕ ಉನ್ನತ ಹುದ್ದೆಯ ರೇಸ್‌ನಲ್ಲಿದ್ದಾರೆ ಎಂದು ವರದಿಯಾಗಿದೆ.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಎರಡನೇ ಅವಧಿಗೆ ಮರಳಲಿದ್ದಾರೆ. ಆದರೆ ಇತರ ಹಲವು ಅಭ್ಯರ್ಥಿಗಳು ಈಗ ಉನ್ನತ ಹುದ್ದೆಯ ಆಕಾಂಕ್ಷಿಗಳು ಎಂದು ಮೂಲಗಳು ತಿಳಿಸಿವೆ.ಉತ್ತರ  ಪ್ರದೇಶದ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿದ್ದು, ತಮ್ಮ ಸಚಿವ ಸಂಪುಟ ರಚನೆ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ.

ನಾಳೆ ಬೆಳಗ್ಗೆ 9:30ಕ್ಕೆ ಬಿಜೆಪಿ ಸಂಸದೀಯ ಪಕ್ಷದ ಸಭೆ ಕರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆ ಅಂಬೇಡ್ಕರ್ ಕೇಂದ್ರದಲ್ಲಿ ನಡೆಯಲಿದೆ.

ಇದನ್ನೂ ಓದಿ: ಪ್ರಧಾನಿಗೆ ಭಾರೀ ಚೈತನ್ಯ ಇದೆ, ಯುಪಿ ಚುನಾವಣೆ ಗೆಲುವಿನ ಶ್ರೇಯ ಮೋದಿಗೆ: ಶಶಿ ತರೂರ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ