ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಪ್ರಲ್ಹಾದ್ ಜೋಷಿ

|

Updated on: Jul 14, 2023 | 7:36 PM

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸುಳ್ಳು ಹೇಳುವುದು ಬಹಳ ಸುಲಭವಾಗಿದೆ. ಇದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಇಡೀ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಎಂಬುದೇ ಇಲ್ಲ. ನಾವು ಮಹಿಳೆಯರ ಅಭದ್ರತೆಯ ಬಗ್ಗೆ ಮಾತನಾಡಿದರೆ, ಇಡೀ ದೇಶದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ. ಈ ಎಲ್ಲಾ ವಿಚಾರಗಳನ್ನು ಬಿಜೆಪಿ ತನ್ನ ಪ್ರಚಾರದ ವೇಳೆ ಬಿಂಬಿಸಲಿದೆ ಎಂದು ಸಚಿವರು ಹೇಳಿದರು

ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಪ್ರಲ್ಹಾದ್ ಜೋಷಿ
ಪ್ರಲ್ಹಾದ್ ಜೋಶಿ
Follow us on

ಜೈಪುರ, ಜುಲೈ 14: ಅಶೋಕ್ ಗೆಹ್ಲೋಟ್  (Ashok Gehlot)ಸರ್ಕಾರವು ಸಂಪೂರ್ಣ ಕೃಷಿ ಮನ್ನಾ ಸೇರಿದಂತೆ ಚುನಾವಣಾ ಪೂರ್ವ ಭರವಸೆಗಳನ್ನು ಈಡೇರಿಸಿಲ್ಲ ಎಂದು ಹೇಳಿದ ರಾಜಸ್ಥಾನದ (Rajasthan) ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಲ್ಹಾದ್ ಜೋಶಿ, ಮುಂಬರುವ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ (BJP) ಮೂರನೇ ಎರಡರಷ್ಟು ಬಹುಮತದಿಂದ ಗೆಲ್ಲುತ್ತದೆ ಎಂದಿದ್ದಾರೆ. ಬಿಜೆಪಿ ಈ ಬಾರಿ ರಾಜಸ್ಥಾನದಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತದೆ ಎಂದು ನಾನು ಸಂಪೂರ್ಣ ಭರವಸೆ ಮತ್ತು ವಿಶ್ವಾಸದಿಂದ ಹೇಳುತ್ತೇನೆ ಎಂದು ರಾಜಸ್ಥಾನದ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಜೈಪುರಕ್ಕೆ ಬಂದಿದ್ದ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳಾ ದೌರ್ಜನ್ಯದ ಘಟನೆಗಳು ಹೆಚ್ಚಾಗಿವೆ ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ  ಕುಸಿದಿದೆ ಎಂದು ಅವರು ಆರೋಪಿಸಿದ್ದಾರೆ.


ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸುಳ್ಳು ಹೇಳುವುದು ಬಹಳ ಸುಲಭವಾಗಿದೆ. ಇದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಇಡೀ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಎಂಬುದೇ ಇಲ್ಲ. ನಾವು ಮಹಿಳೆಯರ ಅಭದ್ರತೆಯ ಬಗ್ಗೆ ಮಾತನಾಡಿದರೆ, ಇಡೀ ದೇಶದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ. ಈ ಎಲ್ಲಾ ವಿಚಾರಗಳನ್ನು ಬಿಜೆಪಿ ತನ್ನ ಪ್ರಚಾರದ ವೇಳೆ ಬಿಂಬಿಸಲಿದೆ ಎಂದು ಸಚಿವರು ಹೇಳಿದರು.

ಬಿಜೆಪಿಯ ರಾಜಸ್ಥಾನ ಘಟಕವು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ. ಅದೇ ವೇಳೆ ಜನರಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಪ್ರತಿಭಟಿಸಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಎಲ್ಲ ವಿಷಯಗಳನ್ನು ಇನ್ನಷ್ಟು ವ್ಯವಸ್ಥಿತವಾಗಿ ಜನರ ಮಧ್ಯೆ ಕೊಂಡೊಯ್ಯುತ್ತೇವೆ.

ಇದನ್ನೂ ಓದಿ: Chandrayaan-3: ರಾಷ್ಟ್ರದ ಭರವಸೆಯನ್ನು ಹೊತ್ತು ಚಂದಿರನೂರಿಗೆ ಪಯಣ, ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡ್ಡಯನ

ಭರವಸೆಗಳನ್ನು ನೀಡಿದ ನಂತರ ಅದನ್ನು ಮರೆತುಬಿಡುವುದು ಕಾಂಗ್ರೆಸ್‌ನ ಡಿಎನ್‌ಎಯಲ್ಲಿದೆ ಎಂದು ಜೋಶಿ ಆರೋಪಿಸಿದರು.ಇಲ್ಲಿಯೂ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರೂ ಅದು ಇನ್ನೂ ಈಡೇರಿಲ್ಲ ಎಂದು ಜೋಶಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Fri, 14 July 23