Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ಬಿಜೆಪಿಯಿಂದ ಭಾರತದಾದ್ಯಂತ ‘ಹರ್ ಘರ್ ತಿರಂಗ’ ಅಭಿಯಾನ

Har Ghar Tiranga Campaign: ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ 'ಹರ್ ಘರ್ ತಿರಂಗ' ಅಭಿಯಾನಕ್ಕೆ ಬಿಜೆಪಿ ವ್ಯಾಪಕ ಸಿದ್ಧತೆ ನಡೆಸಿದ್ದು, ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಅದರ ಯಶಸ್ಸಿಗಾಗಿ ಎಲ್ಲಾ ಪದಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರ ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಬಿಜೆಪಿ ಸರ್ಕಾರ ಮನವಿ ಮಾಡಿದೆ.

ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ಬಿಜೆಪಿಯಿಂದ ಭಾರತದಾದ್ಯಂತ 'ಹರ್ ಘರ್ ತಿರಂಗ' ಅಭಿಯಾನ
ರಾಷ್ಟ್ರಧ್ವಜ
Follow us
ಸುಷ್ಮಾ ಚಕ್ರೆ
|

Updated on: Aug 08, 2024 | 10:32 PM

ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 1 ವಾರವಷ್ಟೇ ಬಾಕಿ ಉಳಿದಿದೆ. ಇದಕ್ಕೂ ಮುಂಚಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ಅನುಸರಿಸಿ ಮುಂದಿನ ವಾರ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಷ್ಟ್ರದಾದ್ಯಂತ ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸಲು ಸಿದ್ಧವಾಗಿದೆ.

ಜುಲೈ 28ರಂದು ತಮ್ಮ ‘ಮನ್ ಕಿ ಬಾತ್’ ರೇಡಿಯೋ ಪ್ರಸಾರದಲ್ಲಿ ಪಿಎಂ ನರೇಂದ್ರ ಮೋದಿ ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾತನಾಡಿದ್ದರು. harghartiranga.com ವೆಬ್‌ಸೈಟ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಸೆಲ್ಫಿಗಳನ್ನು ಅಪ್‌ಲೋಡ್ ಮಾಡುವಂತೆ ಜನರ ಬಳಿ ಮನವಿ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಗೃಹ ಸಚಿವ ಅಮಿತ್ ಶಾ ವಿನಂತಿಸಿದ್ದರು.

ಇದನ್ನೂ ಓದಿ: Har Ghar Tiranga Campaign: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್​ಲೋಡ್ ಮಾಡಲು ಅಮಿತ್ ಶಾ ಮನವಿ

ಪ್ರಧಾನಿ ನರೇಂದ್ರ ಮೋದಿ ಅವರು ಜುಲೈನಲ್ಲಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ 112ನೇ ಆವೃತ್ತಿಯಲ್ಲಿ ಹರ್ ಘರ್ ತಿರಂಗ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲು ಕರೆ ನೀಡಿದ್ದರು.

ಆಗಸ್ಟ್ 11ರಿಂದ ಆಗಸ್ಟ್ 13ರವರೆಗೆ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ನಡೆಸಲಿದೆ. ಆಗಸ್ಟ್ 12, 13 ಮತ್ತು 14ರಂದು ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಯುದ್ಧ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸಲಾಗುವುದು. ಆಗಸ್ಟ್ 14ರಂದು ವಿಭಜನೆಯ ಸ್ಮರಣಾರ್ಥ ದಿನವನ್ನು ಎಲ್ಲಾ ಜಿಲ್ಲೆಗಳಲ್ಲಿ ಮೌನ ಮೆರವಣಿಗೆಯೊಂದಿಗೆ ಆಚರಿಸಲಾಗುವುದು.

ಆಗಸ್ಟ್ 13, 14 ಮತ್ತು 15 ರಂದು, ಎಲ್ಲಾ ಮನೆಗಳು ಮತ್ತು ವ್ಯಾಪಾರ ಸಂಸ್ಥೆಗಳಲ್ಲಿ ‘ತಿರಂಗ’ (ರಾಷ್ಟ್ರಧ್ವಜ) ಹಾರಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ