AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Assembly Polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಜನ ವಿಶ್ವಾಸ ಯಾತ್ರೆ ಇಂದಿನಿಂದ ಪ್ರಾರಂಭ; ಕೇಂದ್ರ ಸಚಿವರುಗಳಿಂದ ಚಾಲನೆ

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಸಾಲುಸಾಲು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಾಗುತ್ತಿದೆ.

Uttar Pradesh Assembly Polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಜನ ವಿಶ್ವಾಸ ಯಾತ್ರೆ ಇಂದಿನಿಂದ ಪ್ರಾರಂಭ; ಕೇಂದ್ರ ಸಚಿವರುಗಳಿಂದ ಚಾಲನೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Dec 19, 2021 | 1:24 PM

Share

ಲಖನೌ: ಉತ್ತರ ಪ್ರದೇಶದಲ್ಲಿ 2022ರಲ್ಲಿ ವಿಧಾನಸಭೆ ಚುನಾವಣೆ (Uttar Pradesh Assembly Election 2022) ನಡೆಯಲಿದ್ದು,  ಅದರ ಬೆನ್ನಲ್ಲೇ ಬಿಜೆಪಿ ಇಂದಿನಿಂದ (ಡಿ.19) ರಾಜ್ಯದ ಒಟ್ಟು  ಆರು ಪ್ರದೇಶಗಳಲ್ಲಿ ಜನ ವಿಶ್ವಾಸ ಯಾತ್ರೆ(Jan Vishwas Yatra) ಹಮ್ಮಿಕೊಂಡಿದೆ.  ಈ ಯಾತ್ರೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಸಚಿವರುಗಳು ಇದನ್ನು ಉದ್ಘಾಟಿಸಲಿದ್ದಾರೆ. ಅಂದಹಾಗೆ, ಇವತ್ತು ಜನ ವಿಶ್ವಾಸ ಯಾತ್ರೆ ಬಿಜ್ನೋರ್​, ಮಥುರಾ, ಝಾನ್ಸಿ ಘಾಜಿಪುರ್​, ಅಂಬೇಡ್ಕರ್​ ನಗರ, ಬಲ್ಲಿಯಾದಿಂದ ಪ್ರಾರಂಭವಾಗಲಿದೆ. 

ಇಂದು ಅಂಬೇಡ್ಕರ್​ ನಗರದಲ್ಲಿ ಜನವಿಶ್ವಾಸ ಯಾತ್ರೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸುವರು. ಹಾಗೇ, ಮಥುರಾದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​,  ಝಾನ್ಸಿಯಲ್ಲಿ ಪ್ರಾರಂಭವಾಗಿ ಕಾನ್ಪುರದಲ್ಲಿ ಮುಕ್ತಾಯವಾಗುವ ಯಾತ್ರೆಯನ್ನು ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಬಿಜ್ನೊರ್​​ನ ಬಿಡುರ್​ಕೋಟಿಯಲ್ಲಿ ಶುರುವಾಗಿ, ರಾಂಪುರದಲ್ಲಿ ಕೊನೆಗೊಳ್ಳುವ ಯಾತ್ರೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಮತ್ತು ಬಲ್ಲಿಯಾದಿಂದ ಪ್ರಾರಂಭವಾಗಿ, ಬಸ್ತಿಯಲ್ಲಿ ಮುಕ್ತಾಯಗೊಳ್ಳುವ ಯಾತ್ರೆಯನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಉದ್ಘಾಟನೆ ಮಾಡಲಿದ್ದಾರೆ.   ಹಾಗೇ, ಕೊನೇ ಯಾತ್ರೆ ಘಾಜಿಪುರ್​ದಲ್ಲಿ ಪ್ರಾರಂಭವಾಗಲಿದ್ದು, ಅಮೇಠಿಯಲ್ಲಿ ಮುಕ್ತಾಯಗೊಳ್ಳಲಿದೆ. ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಚಾಲನೆ ನೀಡಲಿದ್ದಾರೆ.

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಸಾಲುಸಾಲು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಾಗುತ್ತಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಕಾಶಿ ವಿಶ್ವನಾಥ ಕಾರಿಡಾರ್​, ಸರಯೂ ನದಿ ರಾಷ್ಟ್ರೀಯ ನಾಲೆ, ರಸಗೊಬ್ಬರ ಕಾರ್ಖಾನೆಯಂಥ ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಹಾಗೇ ಇನ್ನೊಂದೆಡೆ ಕಾಂಗ್ರೆಸ್​ ಕೂಡ ಚುನಾವಣೆ ಗೆಲ್ಲಲು ಸಿದ್ಧತೆ ನಡೆಸುತ್ತಿದೆ. ಕಾಂಗ್ರೆಸ್​ ನಾಯಕರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಈಗಾಗಲೇ ಪ್ರಚಾರ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ರಾಹುಲ್ ಗಾಂಧಿ ತಮ್ಮ ಹಳೇ ಕ್ಷೇತ್ರ ಅಮೇಠಿಗೆ ಭೇಟಿ ನೀಡಿ, ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ ಎಂಬ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.    ಉತ್ತರಪ್ರದೇಶದಲ್ಲಿ 2017ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 403 ಕ್ಷೇತ್ರಗಳಲ್ಲಿ ಬಿಜೆಪಿ 312 ಕ್ಷೇತ್ರಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47, ಬಹುಜನ ಸಮಾಜವಾದಿ ಪಾರ್ಟಿ 19 ಮತ್ತು ಕಾಂಗ್ರೆಸ್ ಕೇವಲ 7 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ

Published On - 1:22 pm, Sun, 19 December 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ