Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಕೊಲೆ, ಶವ ಪತ್ತೆ

ಪಶ್ಚಿಮ ಬಂಗಾಳದಲ್ಲಿ ಸಂಘರ್ಷದ ಕಿಚ್ಚು ಹೆಚ್ಚಾಗುತ್ತಲೇ ಇದ್ದು ಮತ್ತೋರ್ವ ಬಿಜೆಪಿ ಕಾರ್ಯಕರ್ತನನ್ನು ಕೊಲೆ ಮಾಡಲಾಗಿದೆ. ಬುರ್ದ್ವಾನ್ ಜಿಲ್ಲೆಯ ಬಿಜೆಪಿ ಕಾರ್ಯಕರ್ತರೊಬ್ಬರು ಭಾನುವಾರ ತಮ್ಮ ನಿವಾಸದ ಬಳಿ ಶವವಾಗಿ ಪತ್ತೆಯಾಗಿದ್ದು, ಈ ಕೊಲೆಯನ್ನು ಆಡಳಿತಾರೂಢ ಟಿಎಂಸಿ ಸದಸ್ಯರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪಶ್ಚಿಮ ಬಂಗಾಳ: ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಕೊಲೆ, ಶವ ಪತ್ತೆ
ಬಿಜೆಪಿ ಕಾರ್ಯಕರ್ತನ ಕೊಲೆ
Follow us
ಆಯೇಷಾ ಬಾನು
|

Updated on: Dec 14, 2020 | 7:28 AM

ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಯ ಬಿಜೆಪಿ ಕಾರ್ಯಕರ್ತರೊಬ್ಬರು ಭಾನುವಾರ ತಮ್ಮ ನಿವಾಸದ ಬಳಿ ಶವವಾಗಿ ಪತ್ತೆಯಾಗಿದ್ದು, ಈ ಕೊಲೆಯನ್ನು ಆಡಳಿತಾರೂಢ ಟಿಎಂಸಿ ಸದಸ್ಯರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿಯ ರಾಜ್ಯ ಘಟಕ ಟ್ವೀಟ್ ಮಾಡಿದೆ.

ಈ ಹಿಂದೆ ಪಶ್ಚಿಮ ಬಂಗಾಳದ ಪರ್ಬಾ ಮೆದಿನಾಪುರ ಜಿಲ್ಲೆಯ ದಟ್ಟಾರಣ್ಯದಲ್ಲಿ ಗೋಕುಲ್‌ ಜಾನಾ ಎಂಬ ಬಿಜೆಪಿ ಕಾರ್ಯಕರ್ತರೊಬ್ಬರ ಕೊಲೆಯಾಗಿದ್ದು, ಇದರ ಹಿಂದೆ ಆಡಳಿತಾರೂಢ ಟಿಎಂಸಿ ಗೂಂಡಾಗಳ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿತ್ತು. ಬಳಿಕ ಟಿಎಂಸಿ ಕಾರ್ಯಕರ್ತ ಆಕಾಶ್ ಪ್ರಸಾದ್ (22) ಎಂಬುವವರನ್ನು ಹರಿತ ಆಯುಧಗಳಿಂದ ತಿವಿದು ಕೊಂದು ಹಾಕಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಸಂಘರ್ಷದ ಕಿಚ್ಚು ಹೆಚ್ಚಾಗುತ್ತಲೇ ಇದ್ದು ಮತ್ತೋರ್ವ ಬಿಜೆಪಿ ಕಾರ್ಯಕರ್ತನನ್ನು ಕೊಲೆ ಮಾಡಲಾಗಿದೆ.

ಬಿಜೆಪಿ ರ್ಯಾಲಿಗೆ ಹೋದವ ಶವವಾಗಿ ಪತ್ತೆ: ಕೆಲ ದಿನಗಳ ಹಿಂದೆ ಬಿಜೆಪಿಯ ರ್ಯಾಲಿಯಲ್ಲಿ ಭಾಗಿಯಾಗಿದ್ದ ಸುಖದೇಬ್ ಪ್ರಮಣಿಕ್ ಅವರಿಗೆ ರಾಜಕೀಯ ಸಂಬಂಧವಿತ್ತು ಎಂದು ದೃಢವಾಗಿದೆ. ಹಾಗೂ ಕುಟುಂಬ ಮತ್ತು ಬಿಜೆಪಿ ಪಕ್ಷ ಸುಖದೇಬ್​ಗೆ ಪಕ್ಷದೊಂದಿಗೆ ಸಂಬಂಧ ಹೊಂದಿದ್ದರು ಎಂದು ಸ್ಪಷ್ಟಪಡಿಸಿದೆ. ಸದ್ಯ ಸುಖದೇಬ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಸುಖದೇಬ್ ಬಿಜೆಪಿ ರ್ಯಾಲಿಯಲ್ಲಿ ಭಾಗಿಯಾಗಿದ್ದ ಬಳಿಕ ಆತ ನಾಪತ್ತೆಯಾಗಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಜೊತೆಗೆ ಕೊಲೆಗಾರರನ್ನು ತಕ್ಷಣ ಬಂಧಿಸಿ ತಕ್ಕ ಶಿಕ್ಷೆ ನೀಡಿ ಎಂದು ಒತ್ತಾಯಿಸಿದ್ದು, ಕೊಲೆಗಾರರನ್ನು ಹಿಡಿಯದಿದ್ದರೆ ಸೋಮವಾರ ಪುರ್ಬಸ್ತಾಲಿ ಪ್ರದೇಶದಲ್ಲಿ ಬೀದಿಗಿಳಿದು ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಘೋಷಿಸಿದೆ.

ಇದು ಬಿಜೆಪಿ ಚುನಾವಣಾ ಕುತಂತ್ರ: ಆದರೆ ಸ್ಥಳೀಯ ಟಿಎಂಸಿ ನಾಯಕರು ಬಿಜೆಪಿಯನ್ನೇ ಆರೋಪಿಸಿದ್ದು ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ರಣ ತಂತ್ರ ಹೆಳೆಯುತ್ತಿದೆ. ಚುನಾವಣೆಗೆ ಮುಂಚಿತವಾಗಿಯೇ ಪ್ರತಿ ಅಸ್ವಾಭಾವಿಕ ಸಾವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಾರ್ಯಕರ್ತರ ಹಿಂಸಾಚಾರ ಮತ್ತು ಸಾವನ್ನು ಉಲ್ಲೇಖಿಸಿ ಬಿಜೆಪಿ ಭಾನುವಾರ ಮತದಾನದ ಕ್ಷೇತ್ರಗಳಲ್ಲಿ ಕೇಂದ್ರ ಪಡೆಗಳನ್ನು ತಕ್ಷಣ ನಿಯೋಜಿಸುವಂತೆ ಒತ್ತಾಯಿಸಿದೆ. ಏತನ್ಮಧ್ಯೆ, ಹಲಿಸಹಾರ್ನಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

“ಮಮತಾ ಜಿ ರಾಜ್ಯದಲ್ಲಿ ನೆಲವನ್ನು ಕಳೆದುಕೊಳ್ಳುತ್ತಿದ್ದಾರೆ ಆದರೆ ಹಿಂಸಾಚಾರವನ್ನು ಆಶ್ರಯಿಸುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳಲು ಅವರು ಬಯಸುತ್ತಾರೆ. ರಾಜ್ಯದಲ್ಲಿ ಕೇಂದ್ರ ಪಡೆಗಳನ್ನು ತಕ್ಷಣ ನಿಯೋಜಿಸಲು ನಾವು ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ”ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.