ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್, ಮೋದಿ ಮೋದಿ ಘೋಷಣೆಗಳನ್ನು ಕೂಗುವುದನ್ನು ನೋಡಿರುತ್ತೀರಿ. ಹೀಗೆ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆ ರಾಹುಲ್ ಗಾಂಧಿ ಹಸ್ತಲಾಘವ ಮಾಡಿದ್ದರು. ಆದರೆ, ಈ ಬಾರಿ ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಬಟಾಟೆ (ಆಲೂಗಡ್ಡೆ) ನೀಡಿದ್ದಾರೆ.

ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು
ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಆಲುಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು
Follow us
Rakesh Nayak Manchi
|

Updated on:Mar 05, 2024 | 8:04 PM

ಭೋಪಾಲ್, ಮಾ.5: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು (BJP Workers) ಜೈ ಶ್ರೀರಾಮ್, ಮೋದಿ ಮೋದಿ ಘೋಷಣೆಗಳನ್ನು ಕೂಗುವುದನ್ನು ನೋಡಿರುತ್ತೀರಿ. ಹೀಗೆ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆ ರಾಹುಲ್ ಗಾಂಧಿ ಹಸ್ತಲಾಘವ ಮಾಡಿದ್ದರು. ಆದರೆ, ಈ ಬಾರಿ ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಬಟಾಟೆ (ಆಲೂಗಡ್ಡೆ/ Potato) ನೀಡಿದ್ದಾರೆ.

ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಇರುವಂತೆ, ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಎದುರಾದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ಕೂಡಲೇ ವಾಹನವನ್ನು ನಿಲ್ಲಿಸುವಂತೆ ಹೇಳಿದ ರಾಹುಲ್ ಗಾಂಧಿ, ವಾಹನದಿಂದ ಇಳಿದು ನೇರವಾಗಿ ಬಿಜೆಪಿ ಕಾರ್ಯಕರ್ತರಿದ್ದಲ್ಲಿಗೆ ಹೋದರು.

ಇದನ್ನೂ ಓದಿ: WITT Satta Sammelan: 10 ವರ್ಷ ಅಧಿಕಾರದಲ್ಲಿದ್ದರೂ ಎಂಎಸ್​ಪಿ ಗ್ಯಾರಂಟಿ ಯಾಕೆ ಕೊಡಲಿಲ್ಲ? ರಾಹುಲ್ ಗಾಂಧಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಶ್ನೆ

ಈ ವೇಳೆ ಕಾರ್ಯಕರ್ತರು ಜೈ ಶ್ರೀರಾಮ್, ಜೈ ಶ್ರೀರಾಮ್, ಮೋದಿ-ಮೋದಿ ಎಂದು ಘೋಷಣೆಗಳನ್ನು ಕೂಗಿದರು. ಈ ನಡುವೆಯೂ ರಾಹುಲ್ ಗಾಂಧಿ ಅವರು ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ ಮಾಡಿದರು. ಈ ವೇಳೆ ಕೆಲವು ಕಾರ್ಯಕರ್ತರು ರಾಹುಲ್ ಗಾಂಧಿಗೆ ಚಿನ್ನ ತಯಾರಿಸಲು ಆಲೂಗಡ್ಡೆಯನ್ನು ನೀಡಿದರು. ರಾಹುಲ್ ಗಾಂಧಿ ಒಡಿಶಾ ಪ್ರವಾಸದ ವೇಳೆ ನಡೆದ ಘಟನೆ ಇದಾಗಿದೆ ಎನ್ನಲಾಗುತ್ತಿದೆ.

ಆಲೂಗಡ್ಡೆಯಿಂದ ಚಿನ್ನ ತಯಾರಿಸುವ ಮೆಷೀನ್ ಬಗ್ಗೆ ಹೇಳಿದ್ದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು 2017 ರಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಗುಜರಾತ್ ಭಾಷಣ ಮಾಡಿದ ರಾಹುಲ್ ಗಾಂಧಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ವಿಡಿಯೋದಲ್ಲಿ, “ಮೆಷೀನ್​ನ ಈ ಕಡೆಯಿಂದ ಆಲೂಗಡ್ಡೆ ಹಾಕಿದರೆ ಆಕಡೆಯಿಂದ ಚಿನ್ನ ಬರುತ್ತದೆ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೋ ವೈರಲ್ ನಂತರ ಬಿಜೆಪಿ ನಾಯಕರು, ಕಾರ್ಯಕರ್ತರು ರಾಹುಲ್ ಗಾಂಧಿ ಅವರನ್ನು ವ್ಯಂಗ್ಯವಾಡಲು ಆರಂಭಿಸಿದ್ದರು. ಅದಾಗ್ಯೂ, ಆಲೂಗಡ್ಡೆ ಹೇಳಿಕೆಯ ವಿಡಿಯೋ ಅರ್ಧ ಮಾತ್ರ ವೈರಲ್ ಆಗಿದೆ ಎನ್ನಲಾಗುತ್ತಿದೆ. ಆಲೂಗಡ್ಡೆಯಿಂದ ಚಿನ್ನ ತಯಾರಿಸುವ ಮೆಷೀನ್ ಬಗ್ಗೆ ಮೋದಿ ರೈತರಿಗೆ ಹೇಳಿದ ಮಾತನ್ನು ರಾಹುಲ್ ಹೇಳಿದ್ದಾರಷ್ಟೆ ಎಂಬ ವಾದವೂ ಇದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Tue, 5 March 24

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ