ಅರವಿಂದ ಕೇಜ್ರಿವಾಲ್ ವಿರುದ್ಧ ಘೋಷಣೆ ಕೂಗಿ ದೆಹಲಿ ವಿಧಾನಸಭೆಯ ಹೊರಗಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ದೆಹಲಿ ವಿಧಾನಸಭೆ ಆವರಣದ ಹೊರಗೆ ಹಾಜರಿದ್ದ ಪಕ್ಷದ ಕಾರ್ಯಕರ್ತರು ಎಎಪಿ ಮುಖ್ಯಸ್ಥರ ವಿರುದ್ಧ ಘೋಷಣೆಗಳನ್ನು ಕೂಗಿದ್ದು ಭದ್ರತಾ ಸಿಬ್ಬಂದಿ ಹಾಕಿದ್ದ ಬ್ಯಾರಿಕೇಡ್ ಅನ್ನು ಭೇದಿಸಲು ಪ್ರಯತ್ನಿಸಿದರು.

ಅರವಿಂದ ಕೇಜ್ರಿವಾಲ್ ವಿರುದ್ಧ ಘೋಷಣೆ ಕೂಗಿ ದೆಹಲಿ ವಿಧಾನಸಭೆಯ ಹೊರಗಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Follow us
|

Updated on:Apr 17, 2023 | 3:20 PM

ಅಬಕಾರಿ ನೀತಿ ಪ್ರಕರಣಕ್ಕೆ (Excise policy case)ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಸಿಬಿಐ (CBI) ವಿಚಾರಣೆಗೊಳಪಡಿಸಿದ ನಂತರ ಬಿಜೆಪಿ (BJP) ಕಾರ್ಯಕರ್ತರು ಸೋಮವಾರ ದೆಹಲಿ ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ದೆಹಲಿ ವಿಧಾನಸಭೆ ಆವರಣದ ಹೊರಗೆ ಹಾಜರಿದ್ದ ಪಕ್ಷದ ಕಾರ್ಯಕರ್ತರು ಎಎಪಿ ಮುಖ್ಯಸ್ಥರ ವಿರುದ್ಧ ಘೋಷಣೆಗಳನ್ನು ಕೂಗಿದ್ದು ಭದ್ರತಾ ಸಿಬ್ಬಂದಿ ಹಾಕಿದ್ದ ಬ್ಯಾರಿಕೇಡ್ ಅನ್ನು ಭೇದಿಸಲು ಪ್ರಯತ್ನಿಸಿದರು. ಬೆಳಗ್ಗೆ 11 ಗಂಟೆಯ ನಂತರ ಆರಂಭವಾದ ವಿಧಾನಸಭೆಯ ಅಧಿವೇಶನದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಕೇಜ್ರಿವಾಲ್ ಅವರು ಸಂಜೆ 4 ಗಂಟೆಗೆ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದು, ತನಿಖಾ ಸಂಸ್ಥೆಗಳು ತಮ್ಮ ಕುಣಿಕೆಯನ್ನು ಬಿಗಿಗೊಳಿಸುತ್ತಿರುವುದರಿಂದ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.

ನಾನು ಇಂದು ಸಂಜೆ 4 ಗಂಟೆಗೆ ದೆಹಲಿ ವಿಧಾನಸಭೆಯಲ್ಲಿ ಮಾತನಾಡುತ್ತೇನೆ. ವೀಕ್ಷಿಸಿ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ವಿಧಾನಸಭೆ ಅಧಿವೇಶನವನ್ನು ಕರೆಯುವುದಕ್ಕೆ ಆಕ್ಷೇಪ ಎತ್ತಿದ್ದಕ್ಕಾಗಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ವಿರುದ್ಧ ಆಡಳಿತಾರೂಢ ಎಎಪಿ ಶಾಸಕರು ಸೋಮವಾರ ವಾಗ್ದಾಳಿ ನಡೆಸಿ, ಸದನಕ್ಕೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ. ಸದನದ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುವ ಯತ್ನಗಳು ನಡೆಯುತ್ತಿವೆ ಎಂದು ಉಪಸಭಾಪತಿ ರಾಖಿ ಬಿರ್ಲಾ ಆರೋಪಿಸಿದ್ದು, ಈ ವಿಷಯವನ್ನು ವಿಶೇಷಾಧಿಕಾರಗಳ ಸಮಿತಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್ 17 ರಂದು ದೆಹಲಿ ಅಸೆಂಬ್ಲಿಯ ಒಂದು ದಿನದ ಅವಧಿಯ ಅಧಿವೇಶನವನ್ನು ಕರೆಯುವುದಕ್ಕೆ ಸಕ್ಸೇನಾ ಆಕ್ಷೇಪಿಸಿದ್ದರು.

ಜಿಎನ್‌ಸಿಟಿಡಿ ಕಾಯಿದೆ, GNCTD ಕಾಯಿದೆ, 1991 ರ ಯಾವ ಸಂದರ್ಭಗಳಲ್ಲಿ ಮತ್ತು ಯಾವ ನಿಬಂಧನೆಯ ಅಡಿಯಲ್ಲಿ ಏಳನೇ ವಿಧಾನಸಭೆಯ ನಾಲ್ಕನೇ ಅಧಿವೇಶನದ (ಬಜೆಟ್ ಅಧಿವೇಶನ) ಎರಡನೇ ಭಾಗವನ್ನು ಬಜೆಟ್ ಬಜೆಟ್ ಅಧಿವೇಶನವನ್ನು ಮುಂದೂಡುವ ಮತ್ತು ‘ಸಚಿವ ಸಂಪುಟದ ನಿರ್ಧಾರದ ಪ್ರಕಾರ ಒಂದು ದಿನದ ಅಧಿವೇಶನ’ವನ್ನು ಕರೆಯುವ ಪ್ರಸ್ತಾವನೆಯನ್ನು ಮಂಡಿಸುವ ಬದಲು ಸಭೆ ನಡೆಸಲಾಯಿತುಎಂದು ಸಕ್ಸೇನಾ ತಮ್ಮ ಟಿಪ್ಪಣಿಯಲ್ಲಿ ಹೇಳಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಎಲ್ ಜಿ ಮತ್ತೊಮ್ಮೆ ಸಂವಿಧಾನವನ್ನು ಅಧ್ಯಯನ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Bathinda: ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ: ತಪ್ಪೊಪ್ಪಿಕೊಂಡ ಯೋಧನ ಬಂಧನ

ನಾಳೆ ಅಧಿವೇಶನ ನಡೆಯಲಿದೆ. ಎಲ್‌ಜಿ ಸಾಹಿಬ್ ಅವರು ಸಂವಿಧಾನವನ್ನು ಮತ್ತೊಮ್ಮೆ ಅಧ್ಯಯನ ಮಾಡಬೇಕೆಂದು ನಾನು ಬಯಸುತ್ತೇನೆ ಅಥವಾ ಕನಿಷ್ಠ ಸುಶಿಕ್ಷಿತ ಮತ್ತು ಅದರ ಬಗ್ಗೆ ಜ್ಞಾನವಿರುವ ಕೆಲವು ಸಲಹೆಗಾರರನ್ನು ಹೊಂದಿರಬೇಕು ಎಂದು ಭಾನುವಾರ ಸಿಬಿಐ ಕಚೇರಿಯಿಂದ ಹೊರಬಂದ ನಂತರ ಮುಖ್ಯಮಂತ್ರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 17 April 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ