ಯುವಕನಿಗೆ ಮನಬಂದಂತೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ಮಾಡಿದ ಬಿಜೆಪಿ ಕಾರ್ಯಕರ್ತರು; ಅದಕ್ಕೂ ಮೊದಲು ಅಲ್ಲಿ ಆಗಿದ್ದೇನು?

ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್​ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ.

ಯುವಕನಿಗೆ ಮನಬಂದಂತೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ಮಾಡಿದ ಬಿಜೆಪಿ ಕಾರ್ಯಕರ್ತರು; ಅದಕ್ಕೂ ಮೊದಲು ಅಲ್ಲಿ ಆಗಿದ್ದೇನು?
ವ್ಯಕ್ತಿಯೋರ್ವನಿಗೆ ಆವಾಜ್​ ಹಾಕುತ್ತಿರುವ ದೃಶ್ಯ (ಚಿತ್ರಕೃಪೆ-ಇಂಡಿಯಾಟುಡೆ)
Follow us
TV9 Web
| Updated By: Lakshmi Hegde

Updated on:Jan 08, 2022 | 8:21 AM

ಬಿಜೆಪಿ ಕಾರ್ಯಕರ್ತರು ಸೇರಿ ಯುವಕನಿಗೆ ಮನಬಂದಂತೆ ಥಳಿಸಿ, ತಮ್ಮ ಉಗುಳನ್ನು ನೆಕ್ಕುವಂತೆ ಪೀಡಿಸಿದ್ದಾರೆ. ಅಷ್ಟೇ ಅಲ್ಲ ಜೈ ಶ್ರೀರಾಮ್​ ಎಂದು ಘೋಷಣೆ ಕೂಗುವಂತೆ ಬಲವಂತ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್​​ದ ಧನ್​ಬಾದ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅದೂ ಕೂಡ ಬಿಜೆಪಿ ಸಂಸದ ಪಿ.ಎನ್​.ಸಿಂಗ್​ ಮತ್ತು ಬಿಜೆಪಿ ಎಂಎಲ್​ಎ ರಾಜ್ ಸಿನ್ಹಾ ಸಮ್ಮುಖದಲ್ಲಿಯೇ ಆ ಯುವಕನಿಗೆ ಥಳಿಸಲಾಗಿದೆ ಎಂದೂ ವರದಿಯಾಗಿದೆ.  ಪಂಜಾಬ್​​ನಲ್ಲಿ  ಪ್ರಧಾನಿ ಮೋದಿ ಭದ್ರತೆ ಲೋಪವಾಗಿದ್ದನ್ನು ವಿರೋಧಿಸಿ ಧನ್​ಬಾದ್​ ಜಿಲ್ಲೆಯ ಗಾಂಧಿ ಚೌಕದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿ ಹಾದುಹೋದವನೊಬ್ಬ ಪ್ರಧಾನಿ ಮೋದಿ ಮತ್ತು ಬಿಜೆಪಿ ಜಾರ್ಖಂಡ್ ಮುಖ್ಯಸ್ಥ ದೀಪಕ್​ ಪ್ರಕಾಶ್​ ವಿರುದ್ಧ ಅಸಂಸದೀಯ, ಅವಹೇಳನಕಾರಿ ಮಾತುಗಳನ್ನಾಡಿದ್ದಾನೆ. ಇದೇ ಕಾರಣಕ್ಕೆ ಸಿಟ್ಟಾದ ಬಿಜೆಪಿ ಕಾರ್ಯಕರ್ತರು ಆತನನ್ನು ಥಳಿಸಿದ್ದಾನೆ ಎಂದು ಸ್ಥಳದಲ್ಲಿದ್ದ ಬಿಜೆಪಿ ನಾಯಕರು ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಈ ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಬಿಜೆಪಿ ಕಾರ್ಯಕರ್ತರು ಥಳಿಸುತ್ತಿದ್ದಾಗ ಅಲ್ಲಿಯೇ ಇದ್ದ ಟ್ರಾಫಿಕ್​ ಪೊಲೀಸರು ಮೂಕ ಪ್ರೇಕ್ಷಕರಂತೆ ನೋಡುತ್ತ ನಿಂತಿದ್ದರು ಎಂದು ಹೇಳಲಾಗಿದ್ದು, ಆತನಿಗೆ ಹೊಡೆದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ನೋಡಿದ ಜಾರ್ಖಂಡ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ಕೂಡ ಟ್ವೀಟ್ ಮಾಡಿದ್ದಾರೆ. ವಿಡಿಯೋವನ್ನು ಶೇರ್ ಮಾಡಿಕೊಂಡು, ಇಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಗೇ, ಧನ್​ಬಾದ್ ಜಿಲ್ಲಾಧಿಕಾರಿ, ಧನ್​ಬಾದ್ ಪೊಲೀಸ್ ಮತ್ತು ಜಾರ್ಖಂಡ ಪೊಲೀಸ್ ಟ್ವಿಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ. ಜನರು ಶಾಂತಿಯುತವಾಗಿ ಬದುಕುವ ಈ ಜಾರ್ಖಂಡ್ ರಾಜ್ಯದಲ್ಲಿ ದ್ವೇಷಕ್ಕೆ ಜಾಗವಿಲ್ಲ. ಅದರಲ್ಲೂ ಕೋಮು ಸೌಹಾರ್ದತೆ ಕದಡುವ ಯಾರೇ ಆದರೂ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ವೈರಲ್ ಆದ ವಿಡಿಯೋ ಆಧಾರದ ಮೇಲೆ, ಥಳಿತಕ್ಕೊಳಗಾದ ವ್ಯಕ್ತಿಯ ಸೋದರ ರೇಹನ್​ ದೂರು ನೀಡಿದ್ದಾರೆ. ಪೊಲೀಸರು ಈಗಾಗಲೇ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ. ತಪ್ಪಿತಸ್ಥರಾದ ಯಾರನ್ನೂ ಬಿಡುವುದಿಲ್ಲ ಎಂದು ಎಸಿಪಿ ಮನೋಜ್​ ಸ್ವರ್ಗೀಯರಿ ತಿಳಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕ ಸಿಪಿ ಸಿಂಗ್​ ಕೂಡ ಪ್ರತಿಕ್ರಿಯೆ ನೀಡಿದ್ದು, ನಾವೂ ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಯುವಕನ ಮೇಲೆ ದೌರ್ಜನ್ಯ ಎಸಗಿದವರು ಬಿಜೆಪಿ ಕಾರ್ಯಕರ್ತರು ಹೌದೋ, ಅಲ್ಲವೋ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ: Petrol Rate: ಇಂಧನ ದರದಲ್ಲಿ ಇಲ್ಲ ಯಾವುದೇ ಬದಲಾವಣೆ; ಮಹಾನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಹೀಗಿದೆ

Published On - 7:52 am, Sat, 8 January 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ