AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕನ ಹತ್ಯೆ; ಮನೆ ಎದುರು ನಿಂತಿದ್ದ ಮುಖಂಡನಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು

ಈ ದುರ್ಘಟನೆ ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ನಡೆದಿದೆ. ರಾಜ್​ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಮಿಥುನ್ ಘೋಷ್​​ ನಿಂತಿದ್ದರು. ಮೋಟಾರ್​ ಬೈಕ್​ನಲ್ಲಿ ಅಲ್ಲಗೆ ಬಂದ ಕೆಲವರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕನ ಹತ್ಯೆ; ಮನೆ ಎದುರು ನಿಂತಿದ್ದ ಮುಖಂಡನಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು
ಮಿಥುನ್​ ಘೋಷ್​
TV9 Web
| Edited By: |

Updated on:Oct 18, 2021 | 12:33 PM

Share

ಕೋಲ್ಕತ್ತ: ಪಶ್ಚಿಮಬಂಗಾಳದ ಉತ್ತರ ದಿನಾಜ್​ಪುರ ಜಿಲ್ಲೆಯ ಇಟಾಹಾರ್​​ನ ಬಿಜೆಪಿ ಯುವ ನಾಯಕನ ಹತ್ಯೆಯಾಗಿದೆ. ಮಿಥುನ್​ ಘೋಷ್​ ಮೃತ ಯುವ ನಾಯಕರು. ರಾಜ್​ಗ್ರಾಮ ಹಳ್ಳಿಯಲ್ಲಿರುವ ಇವರ ಮನೆಯ ಮುಂದೆಯೇ ದುಷ್ಕರ್ಮಿಗಳು ಮಿಥುನ್​ಗೆ ಗುಂಡಿಕ್ಕಿ ಕೊಂದಿದ್ದಾರೆ. ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಆಗಿದೆ ಎಂದು ಬಿಜೆಪಿ ಆರೋಪಿಸಿದೆ.  ಬಿಜೆಪಿ ನಾಯಕ ಸುವೇಂದು ಅಧಿಕಾರಿ ಟ್ವೀಟ್ ಮಾಡಿ, ಮಿಥುನ್​ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್​​ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್​ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನನ ಆಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗೇ, ಮಿಥುನ್​ ಘೋಷ್ ಸದಾ ನೆನಪಿರುತ್ತಾರೆ ಎಂದು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಈ ದುರ್ಘಟನೆ ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ನಡೆದಿದೆ. ರಾಜ್​ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಮಿಥುನ್ ಘೋಷ್​​ ನಿಂತಿದ್ದರು. ಮೋಟಾರ್​ ಬೈಕ್​ನಲ್ಲಿ ಅಲ್ಲಗೆ ಬಂದ ಕೆಲವರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ. ತುಂಬ ಹತ್ತಿರದಿಂದಲೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಮಿಥುನ್​ ಘೋಷ್​​ರನ್ನು ಕೂಡಲೇ ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಮೃತರಾಗಿದ್ದರು.  ಈ ದುರ್ಘಟನೆ ಬೆನ್ನಲ್ಲೇ ಬಿಜೆಪಿ ಟಿಎಂಸಿ ವಿರುದ್ಧ ಆರೋಪ ಮಾಡಿದೆ. ಆದರೆ ಟಿಎಂಸಿ ತಾವೇನೂ ಮಾಡಿಲ್ಲ. ಬಿಜೆಪಿ ವೃಥಾ ಆರೋಪ ಮಾಡುತ್ತಿದೆ ಎಂದು ಹೇಳಿದೆ. ಇನ್ನು ಮಿಥುನ್​ ಘೋಷ್​ಗೆ ಈಗಾಗಲೇ ಹಲವು ಬಾರಿ ಜೀವ ಬೆದರಿಕೆ ಹಾಕಲಾಗಿತ್ತು. ಕೆಲವು ಬಾರಿ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು. ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೆವು. ಆದರೆ ಪೊಲಿಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಜ್​​ಪುರ ಬಿಜೆಪಿ ಅಧ್ಯಕ್ಷ ವಸುದೇವ್​ ಸರ್ಕಾರ್​ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್​ ಶಾಸಕ ಮೊಹಾರಾಫ್​ ಹುಸ್ಸೇನ್​, ನಮ್ಮ ತೃಣಮೂಲ ಕಾಂಗ್ರೆಸ್​ಗೂ, ಮಿಥುನ್​ ಘೋಷ್​​ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಬೇರೆ ಯಾರಾದರೂ, ಇನ್ಯಾವುದೇ ದ್ವೇಷದ ಕಾರಣಕ್ಕೆ ಈ ಹತ್ಯೆ ಮಾಡಿಬಹುದು. ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದಿದ್ದಾರೆ.  ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಪ್ರಚಾರ; ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ರಾಜಕೀಯ ನಾಯಕರ ಹೋರಾಟ

ನಕಲಿ ಬಿಎಂಟಿಸಿ ಅಧಿಕಾರಿ ನೂರ್ ಅಹ್ಮದ್ ಬಂಧನ; ಆರೋಪಿ ಸ್ಟೈಲ್​ಗೆ ದಂಗಾದ ಅಸಲಿ ಅಧಿಕಾರಿಗಳು

Published On - 12:33 pm, Mon, 18 October 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?