Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದೆ, 400 ದಾಟಲು ‘ಅಂಪೈರ್’ಗಳನ್ನು ಆಯ್ಕೆ ಮಾಡಿದ್ದಾರೆ ಪ್ರಧಾನಿ: ರಾಹುಲ್ ಗಾಂಧಿ

ಕಾಂಗ್ರೆಸ್ ಅತಿದೊಡ್ಡ ವಿರೋಧ ಪಕ್ಷವಾಗಿದ್ದು, ಚುನಾವಣೆಯ ಮಧ್ಯದಲ್ಲಿ ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ರದ್ದು ಮಾಡಲಾಗಿದೆ, ನಾವು ಪ್ರಚಾರಗಳನ್ನು ನಡೆಸಬೇಕು, ಕಾರ್ಯಕರ್ತರನ್ನು ರಾಜ್ಯಗಳಿಗೆ ಕಳುಹಿಸಬೇಕು, ಪೋಸ್ಟರ್‌ಗಳನ್ನು ಹಾಕಬೇಕು, ಆದರೆ ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ರದ್ದು ಮಾಡಲಾಗಿದೆ, ಯಾವ ರೀತಿಯ ಚುನಾವಣೆ ಇದು? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದೆ, 400 ದಾಟಲು 'ಅಂಪೈರ್'ಗಳನ್ನು ಆಯ್ಕೆ ಮಾಡಿದ್ದಾರೆ ಪ್ರಧಾನಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 31, 2024 | 6:26 PM

ದೆಹಲಿ ಮಾರ್ಚ್ 31: ಕಾಂಗ್ರೆಸ್ ಸಂಸದ  ರಾಹುಲ್ ಗಾಂಧಿ (Rahul Gandhi) ಭಾನುವಾರ ಬಿಜೆಪಿ (BJP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಪಕ್ಷದ 400 ಪಾರ್ ಘೋಷಣೆ ಸಾಧ್ಯವಿಲ್ಲ. “400 ಸ್ಥಾನ ದಾಟಲು” ಪ್ರಧಾನಿ “ಅಂಪೈರ್” ಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದರು.  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ವಿರೋಧ ಪಕ್ಷ ಇಂಡಿಯಾ ಬ್ಲಾಕ್‌ನ ಉನ್ನತ ನಾಯಕರು ದೆಹಲಿಯಲ್ಲಿ ಕರೆ ನೀಡಿದ್ದ ‘ಲೋಕತಂತ್ರ್ ಬಚಾವೋ’ (Loktantra Bachao) ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದರವರು.

ಇವಿಎಂಗಳು, ಮ್ಯಾಚ್ ಫಿಕ್ಸಿಂಗ್, ಸಾಮಾಜಿಕ ಮಾಧ್ಯಮಗಳು ಮತ್ತು ಪತ್ರಿಕೆಗಳ ಮೇಲೆ ಒತ್ತಡವಿಲ್ಲದೆ ಅವರು (ಬಿಜೆಪಿ) 180 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ, ”ಎಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ರಾಹುಲ್ ಭಾಷಣ

“ಇಂದು ಐಪಿಎಲ್ ಪಂದ್ಯಗಳು ನಡೆಯುತ್ತಿವೆ, ಅಂಪೈರ್‌ಗಳಿಗೆ ಒತ್ತಡ ಹೇರಿದಾಗ ಆಟಗಾರರನ್ನು ಖರೀದಿಸಿದಾಗ ಮತ್ತು ನಾಯಕರನ್ನು ಪಂದ್ಯಗಳನ್ನು ಗೆಲ್ಲಿಸಲು ಬೆದರಿಕೆ ಹಾಕಿದಾಗ ಅದನ್ನು ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ಎಂದು ಕರೆಯಲಾಗುತ್ತದೆ. ನಮ್ಮ ಮುಂದೆ ಲೋಕಸಭೆ ಚುನಾವಣೆ ಇದೆ. ಅಂಪೈರ್‌ಗಳನ್ನು ಆಯ್ಕೆ ಮಾಡಿದ್ದು ಪ್ರಧಾನಿ ಮೋದಿ. ಎರಡು ಪಂದ್ಯಕ್ಕೂ ಮುನ್ನವೇ ನಮ್ಮ ತಂಡದ ಆಟಗಾರರನ್ನು ಬಂಧಿಸಲಾಗಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಅತಿದೊಡ್ಡ ವಿರೋಧ ಪಕ್ಷವಾಗಿದ್ದು, ಚುನಾವಣೆಯ ಮಧ್ಯದಲ್ಲಿ ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ರದ್ದು ಮಾಡಲಾಗಿದೆ, ನಾವು ಪ್ರಚಾರಗಳನ್ನು ನಡೆಸಬೇಕು, ಕಾರ್ಯಕರ್ತರನ್ನು ರಾಜ್ಯಗಳಿಗೆ ಕಳುಹಿಸಬೇಕು, ಪೋಸ್ಟರ್‌ಗಳನ್ನು ಹಾಕಬೇಕು, ಆದರೆ ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ರದ್ದು ಮಾಡಲಾಗಿದೆ, ಯಾವ ರೀತಿಯ ಚುನಾವಣೆ ಇದು?” ಎಂದು ಪ್ರಶ್ನಿಸಿದರು.

“ಬಡವರಿಂದ ಸಂವಿಧಾನವನ್ನು ಕಸಿದುಕೊಳ್ಳಲು ಪ್ರಧಾನಿ ಮತ್ತು 3-4 ಕ್ರೋನಿ ಬಂಡವಾಳಶಾಹಿಗಳು ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಈ ಚುನಾವಣೆ ಸಾಮಾನ್ಯವಲ್ಲ, ದೇಶ ಮತ್ತು ಸಂವಿಧಾನವನ್ನು ಉಳಿಸಬೇಕು. ನೀವು ಪೂರ್ಣ ಬಲದಿಂದ ಮತ ಚಲಾಯಿಸದಿದ್ದರೆ, ಅವರ ಮ್ಯಾಚ್ ಫಿಕ್ಸಿಂಗ್ ಯಶಸ್ವಿಯಾಗುತ್ತದೆ. ಅದು ಯಶಸ್ವಿಯಾದರೆ ಸಂವಿಧಾನ ನಾಶವಾಗುತ್ತದೆ. ಸಂವಿಧಾನವು ಜನರ ಧ್ವನಿಯಾಗಿದೆ. ಅದು ಮುಗಿದ ದಿನ ದೇಶವೇ ಮುಗಿಯುತ್ತದೆ.

ಇದನ್ನೂ ಓದಿ: ದೆಹಲಿ ಸಿಎಂ ನಿಜವಾದ ದೇಶಭಕ್ತ; ಅವರನ್ನು ಜೈಲಿಗೆ ಹಾಕಿದ್ದು ಸರಿಯೇ?: ಸುನೀತಾ ಕೇಜ್ರಿವಾಲ್

“ನಾವು 400 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಾಗ ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ” ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ. ಇದು ಒಂದು ಕಲ್ಪನೆಯನ್ನು ಪರೀಕ್ಷಿಸಲು ಹೇಳಲಾಗಿದೆ ಎಂದಿದ್ದಾರೆ ರಾಹುಲ್.

ಭಾನುವಾರದ ರ್ಯಾಲಿಯಲ್ಲಿ ಪ್ರತಿಪಕ್ಷದ ನಾಯಕರನ್ನು ಒಗ್ಗೂಡಿದ್ದಾರೆ. ಪ್ರಸ್ತುತ ಮಹಾ ರ‍್ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಶಿವಸೇನಾ ಸಂಸದ ಸಂಜಯ್ ರಾವತ್, ಎನ್‌ಸಿಪಿ (ಎಸ್‌ಸಿಪಿ) ) ಮುಖ್ಯಸ್ಥ ಶರದ್ ಪವಾರ್, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಮತ್ತು ಇತರರು ಭಾಗವಹಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್