ಕೃಷಿ ಕಾನೂನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಪರಿಣಾಮಗಳ ಬಗ್ಗೆ ಬಿಜೆಪಿಗೆ ಎಚ್ಚರಿಕೆ ನೀಡಿದ ಸಚಿನ್ ಪೈಲಟ್

Sachin Pilot ಕೇಂದ್ರವು ಎಮ್‌ಎಸ್‌ಪಿಗೆ ಕಾನೂನುಬದ್ಧವಾಗಿ ಖಾತರಿಪಡಿಸುವುದು ಮಾತ್ರವಲ್ಲದೆ ಖರೀದಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವ ನಿಯಂತ್ರಣವನ್ನು ಒದಗಿಸಬೇಕು. ರೈತ ಸಮುದಾಯದ ಇಂತಹ ಸುದೀರ್ಘ ಆಂದೋಲನವನ್ನು ಭಾರತದ ಇತಿಹಾಸದಲ್ಲಿ ನೋಡಿಲ್ಲ ಎಂದು ಎಂದು ಸಚಿನ್ ಪೈಲಟ್ ಮಂಗಳವಾರ ಹೇಳಿದ್ದಾರೆ.

ಕೃಷಿ ಕಾನೂನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಪರಿಣಾಮಗಳ ಬಗ್ಗೆ ಬಿಜೆಪಿಗೆ ಎಚ್ಚರಿಕೆ ನೀಡಿದ ಸಚಿನ್ ಪೈಲಟ್
ಸಚಿನ್ ಪೈಲಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 23, 2021 | 3:45 PM

ದೆಹಲಿ: ಇತ್ತೀಚಿನ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (BJP) ಸೋಲು ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆಟ್ಟ ಪ್ರದರ್ಶನಕ್ಕೆ ಕಾರಣವಾಗಬಾರದೆಂದು ನರೇಂದ್ರ ಮೋದಿ (Narendra Modi) ಸರ್ಕಾರ ಮೂರು ಕೃಷಿ ಕಾನೂನುಗಳನ್ನು(Farm Laws) ರದ್ದುಗೊಳಿಸುವ ಘೋಷಣೆ ಮಾಡಲು ಕಾರಣವಾಯಿತು ಎಂದು ಕಾಂಗ್ರೆಸ್ ನಾಯಕ ಮತ್ತು ರಾಜಸ್ಥಾನದ (Rajasthan) ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ (Sachin Pilot) ಮಂಗಳವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಪೈಲಟ್ ಕೇಂದ್ರದ ಮೇಲಿನ ರೈತರ ಅಪನಂಬಿಕೆ ಈ ನಿರ್ಧಾರದಿಂದ(ಕೃಷಿ ಕಾನೂನು ರದ್ದುಗೊಳಿಸುವ) ಹೋಗುವುದಿಲ್ಲವಾದ್ದರಿಂದ ಚುನಾವಣೆಯಲ್ಲಿ ಬಿಜೆಪಿಗೆ ಪರಿಣಾಮಗಳು ಉಂಟಾಗುತ್ತವೆ ಎಂದು ಹೇಳಿದರು. ನವೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ನಂತರ, ರೈತ ಸಂಘಗಳು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಖಾತರಿಪಡಿಸುವ ಕಾನೂನು, ಗಾಳಿಯ ಗುಣಮಟ್ಟದ ಸುಗ್ರೀವಾಜ್ಞೆ, ವಿದ್ಯುತ್ ಬಿಲ್ 2020 ರ ಹಿಂಪಡೆಯುವವರೆಗೆ ತಮ್ಮ ಬಾಕಿ ಇರುವ ಬೇಡಿಕೆಗಳವರೆಗೆ ಆಂದೋಲನವನ್ನು ಮುಂದುವರಿಸುವುದಾಗಿ ಹೇಳಿವೆ.

ಕೇಂದ್ರವು ಎಮ್‌ಎಸ್‌ಪಿಗೆ ಕಾನೂನುಬದ್ಧವಾಗಿ ಖಾತರಿಪಡಿಸುವುದು ಮಾತ್ರವಲ್ಲದೆ ಖರೀದಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವ ನಿಯಂತ್ರಣವನ್ನು ಒದಗಿಸಬೇಕು. ರೈತ ಸಮುದಾಯದ ಇಂತಹ ಸುದೀರ್ಘ ಆಂದೋಲನವನ್ನು ಭಾರತದ ಇತಿಹಾಸದಲ್ಲಿ ನೋಡಿಲ್ಲ ಎಂದು ಎಂದು ಸಚಿನ್ ಪೈಲಟ್  ಹೇಳಿದ್ದಾರೆ.

“ಮೋದಿ ಅವರು (ಕಾನೂನು) ಹಿಂದೆಗೆದುಕೊಳ್ಳಬೇಕಾದರೆ, ಜೀವನ ಮತ್ತು ಜೀವನೋಪಾಯವನ್ನು ವ್ಯರ್ಥ ಮಾಡುವ ಅವಶ್ಯಕತೆ ಏನಿತ್ತು, ಎಷ್ಟು ಹಾನಿಯಾಯಿತು, ರೈತರನ್ನು ನಕ್ಸಲೀಯರು, ಪ್ರತ್ಯೇಕತಾವಾದಿಗಳು, ಭಯೋತ್ಪಾದಕರು ಮತ್ತು ಕೆಲವು ಮಂತ್ರಿಗಳ ಸಂಬಂಧಿಕರು ಜನರ ಮೇಲೆ ವಾಹನವನ್ನು ಹರಿಸಿದ್ದರು ಎಂದು ಪೈಲಟ್ ಹೇಳಿದರು.

ಕೃಷಿ ಕಾನೂನುಗಳನ್ನು ಘೋಷಿಸುವ ಮೊದಲು ರೈತ ಗುಂಪುಗಳೊಂದಿಗೆ ಯಾವುದೇ ಚರ್ಚೆ ನಡೆಸಲಿಲ್ಲ ಎಂದು ಅವರು ಆರೋಪಿಸಿದರು. “ಸರ್ಕಾರ ಮತ್ತು ರೈತರ ನಡುವೆ “ವಿಶ್ವಾಸದ ವಿಘಟನೆ” ಕಂಡುಬಂದಿದೆ. ಇದು ಭವಿಷ್ಯದ ವಿತರಣೆಗಳಿಗೆ “ಹಾನಿಕಾರಕ” ಎಂದು ಪೈಲಟ್ ಹೇಳಿದ್ದಾರೆ.

ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದು,ಬುಧವಾರ ಕೇಂದ್ರ ಸಚಿವ ಸಂಪುಟವು ಕಾನೂನುಗಳ ರದ್ದತಿ ಅನುಮೋದಿಸುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಏತನ್ಮಧ್ಯೆ, ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಈ ಭಾನುವಾರದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಸಂದರ್ಭದಲ್ಲಿ ಕೃಷಿ ಕಾನೂನುಗಳ ಪರಿಣಾಮಗಳ ಬಗ್ಗೆ ಪೂರ್ಣ ಪ್ರಮಾಣದ ಚರ್ಚೆಗೆ ಒತ್ತಾಯಿಸಲಿವೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್ ಟಿಎಂಸಿ ಸೇರುವ ಸಾಧ್ಯತೆ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ