ಓರ್ವ ಮಹಿಳೆಯಾಗಿ ನಾನು…: ಕುಸ್ತಿಪಟುಗಳ ಪ್ರತಿಭಟನೆಗೆ ಮಹಾರಾಷ್ಟ್ರದ ಬಿಜೆಪಿ ಸಂಸದೆ ಬೆಂಬಲ

ಬಿಜೆಪಿಗೆ ದೇಶ ಮೊದಲು, ನಂತರ ಪಕ್ಷ, ನಂತರ ವೈಯಕ್ತಿಕ ಸಂಗತಿ. ಆದರೆ ಅದು ಕೊನೆಯದಾಗಿದ್ದರೂ, ಒಬ್ಬರ ವೈಯಕ್ತಿಕ ಆಲೋಚನೆಗಳು ಮುಖ್ಯ, ಯಾವುದೇ ರಾಜ್ಯದ ಯಾವುದೇ ಪಕ್ಷದ ಸರ್ಕಾರವಾಗಿರಬಹುದು, ಗಮನ ಹರಿಸಬೇಕು ಎಂದು ನಾನು ನಂಬುತ್ತೇನೆ. ಈ ಮಟ್ಟದ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಇದಕ್ಕೆ ಬೆಲೆ ತೆರಬೇಕಾಗಿ ಬರುತ್ತದೆ ಎಂದಿದ್ದಾರೆ

ಓರ್ವ ಮಹಿಳೆಯಾಗಿ ನಾನು...: ಕುಸ್ತಿಪಟುಗಳ ಪ್ರತಿಭಟನೆಗೆ ಮಹಾರಾಷ್ಟ್ರದ ಬಿಜೆಪಿ ಸಂಸದೆ ಬೆಂಬಲ
ಪ್ರೀತಂ ಮುಂಡೆ
Follow us
ರಶ್ಮಿ ಕಲ್ಲಕಟ್ಟ
|

Updated on: Jun 02, 2023 | 7:20 PM

ದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ (BJP MP) ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಬಿಜೆಪಿ ಮೌನದ ನಡುವೆಯೇ, ಯಾರೇ ಮಹಿಳೆ ನೀಡಿದ ದೂರಿನ ಬಗ್ಗೆಯೂ ಗಮನಹರಿಸಬೇಕು ಎಂದು ಬಿಜೆಪಿಯ ಮಹಾರಾಷ್ಟ್ರ ಸಂಸದೆ ಪ್ರೀತಮ್‌ ಮುಂಡೆ (Pritam Munde) ಹೇಳಿದ್ದಾರೆ. ದೂರಿನ ಬಗ್ಗೆ ಗಮನ ಹರಿಸಿದ ನಂತರ ದೂರು ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಅಧಿಕಾರಿಗಳು ನಿರ್ಧರಿಸಬಹುದು ಎಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಂಡೆ ಹೇಳಿದ್ದಾರೆ. ಅದೇ ವೇಳೆ ಪ್ರಸ್ತುತ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ನಾನು ಸಂಸತ್ತಿನ ಸದಸ್ಯಳಾಗಿ ಅಲ್ಲ. ಆದರೆ ಮಹಿಳೆಯಾಗಿ, ಯಾವುದೇ ಮಹಿಳೆಯಿಂದ ಅಂತಹ ದೂರು ಬಂದರೆ, ಅದನ್ನು ಸ್ವೀಕರಿಸಬೇಕು. ಅದನ್ನು ಪರಿಶೀಲಿಸಬೇಕು ಎಂದು ಮುಂಡೆ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪರಿಶೀಲನೆಯ ನಂತರ, ಅಧಿಕಾರಿಗಳು ಇದು ಸರಿಯಾಗಿದೆಯೇ ಅಥವಾ ಅಸಮರ್ಪಕವಾಗಿದೆಯೇ ಎಂದು ನಿರ್ಧರಿಸಬೇಕು. ದೂರನ್ನು ಸ್ವೀಕರಿಸದೇ ಇದ್ದರೆ ಪ್ರಜಾಪ್ರಭುತ್ವದಲ್ಲಿ ಅದು ಸರಿಯಲ್ಲ ಎಂದಿದಾರೆ.

ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಫೆಡರೇಶನ್, ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ತನಿಖೆಗಳ ಫಲಿತಾಂಶಗಳ ಕೊರತೆಯ ಬಗ್ಗೆ ನಿರಾಶೆ  ಮತ್ತು 45 ದಿನಗಳಲ್ಲಿ ಅದರ ಚುನಾವಣೆಗಳನ್ನು ನಡೆಸದಿದ್ದರೆ ಭಾರತೀಯ ಒಕ್ಕೂಟವನ್ನು ಅಮಾನತುಗೊಳಿಸುವ ಬೆದರಿಕೆಯನ್ನು ಉಲ್ಲೇಖಿಸಿದ ಮುಂಡೆ, ಈ ಪ್ರಕರಣದ ಬಗ್ಗೆ ತನಿಖಾ ಸಮಿತಿಗೆ ನಾನು ಬೇಡಿಕೆಯೊಡ್ಡಿದರೆ ಅದು ಪ್ರಚಾರ ಎಂದು ಬಾಕಿ ಇರುವವರು ಹೇಳಬಹುದು. ನಾನು ಈ ಸರ್ಕಾರದ ಭಾಗವಾಗಿದ್ದರೂ, ಕುಸ್ತಿಪಟುಗಳೊಂದಿಗೆ ಸರ್ಕಾರ ಸಂವಹನ ನಡೆಸಬೇಕಾದ ರೀತಿಯಲ್ಲಿ ನಡೆದಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಮುಂಡೆ ಹೇಳಿದರು.

ಬಿಜೆಪಿಗೆ ದೇಶ ಮೊದಲು, ನಂತರ ಪಕ್ಷ, ನಂತರ ವೈಯಕ್ತಿಕ ಸಂಗತಿ. ಆದರೆ ಅದು ಕೊನೆಯದಾಗಿದ್ದರೂ, ಒಬ್ಬರ ವೈಯಕ್ತಿಕ ಆಲೋಚನೆಗಳು ಮುಖ್ಯ, ಯಾವುದೇ ರಾಜ್ಯದ ಯಾವುದೇ ಪಕ್ಷದ ಸರ್ಕಾರವಾಗಿರಬಹುದು, ಗಮನ ಹರಿಸಬೇಕು ಎಂದು ನಾನು ನಂಬುತ್ತೇನೆ. ಈ ಮಟ್ಟದ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಇದಕ್ಕೆ ಬೆಲೆ ತೆರಬೇಕಾಗಿ ಬರುತ್ತದೆ ಎಂದಿದ್ದಾರೆ. ಪ್ರೀತಮ್‌ ಮುಂಡೆ 2014 ರಲ್ಲಿ ಕಾರು ಅಪಘಾತದಲ್ಲಿ ನಿಧನರಾದ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಪುತ್ರಿಯರಾಗಿದ್ದಾರೆ.

ಇದನ್ನೂ ಓದಿ: ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ನೇತೃತ್ವದ 1983 ಚಾಂಪಿಯನ್ಸ್ ತಂಡದ ಸದಸ್ಯರ ಕಿವಿಮಾತು

 ಪ್ರತಿಭಟಿಸುವ ಕುಸ್ತಿಪಟುಗಳಿಗೆ ನ್ಯಾಯ ಸಿಗುತ್ತದೆ: ಬಿಜೆಪಿ ಸಂಸದೆ ಮೇನಕಾ ಗಾಂಧಿ

ಲೈಂಗಿಕ ಕಿರುಕುಳ ಆರೋಪದ ಮೇಲೆ ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಕೋರಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಬಿಜೆಪಿ ಸಂಸದೆ ಮೇನಕಾ ಗಾಂಧಿ ಗುರುವಾರ ಹೇಳಿದ್ದಾರೆ. ಹಂಚಿಕೊಂಡ ಗ್ರಹದಲ್ಲಿ ಬದುಕುವ ಮತ್ತು ಅಭಿವೃದ್ಧಿ ಹೊಂದುವ ಮನೋಭಾವವನ್ನು ಆಚರಿಸಲು “Let’s Co-exist” ಭಾಗವಹಿಸಲು ಶ್ರೀಮತಿ ಗಾಂಧಿ ಶ್ರೀನಗರಕ್ಕೆ ಬಂದಿದ್ದರು.

ಅವರಿಗ ನ್ಯಾಯ ಸಿಗುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಲೋಕಸಭಾ ಸಂಸದರು ಕುಸ್ತಿಪಟುಗಳ ಸಮಸ್ಯೆಯ ಬಗ್ಗೆ ತಮ್ಮ ನಿಲುವಿನ ಬಗ್ಗೆ ಕೇಳಿದಾಗ ಸುದ್ದಿಗಾರರಿಗೆ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ