ವಡೋದರ: ದೀಪಕ್ ನೈಟ್ರೇಟ್​​ ಕಂಪನಿಯ ರಾಸಾಯನಿಕ ಘಟಕದಲ್ಲಿ ಸ್ಫೋಟ, 8 ಮಂದಿಗೆ ಗಾಯ

ಈ ಬಗ್ಗೆ ಹೇಳಿಕೆ ನೀಡಿರುವ ದೀಪಕ್ ನೈಟ್ರೈಟ್ ಕಂಪನಿ, ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಮ್ಮ ಎಲ್ಲಾ ಉದ್ಯೋಗಿಗಳ ಮತ್ತು ಸುತ್ತಮುತ್ತಲಿನ ಸಮುದಾಯಗಳ ಸುರಕ್ಷತೆ ಮತ್ತು ಯೋಗಕ್ಷೇಮವು ನಮಗೆ ಅಗ್ರಗಣ್ಯ ಆದ್ಯತೆಯಾಗಿದೆ.

ವಡೋದರ: ದೀಪಕ್ ನೈಟ್ರೇಟ್​​ ಕಂಪನಿಯ ರಾಸಾಯನಿಕ ಘಟಕದಲ್ಲಿ ಸ್ಫೋಟ, 8 ಮಂದಿಗೆ ಗಾಯ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 02, 2022 | 9:58 PM

ವಡೋದರ: ಗುಜರಾತಿನ ವಡೋದರದ (Vadodara) ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ವಡೋದರದ ನಂದೇಸರಿ ಪ್ರದೇಶದ ದೀಪಕ್ ನೈಟ್ರೈಟ್‌ (Dipak Nitrite) ಕಂಪನಿಯಲ್ಲಿ ಸಂಜೆ 5 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು ನಂತರ ಬೆಂಕಿ ಕಾಣಿಸಿಕೊಂಡಿದೆ. ಆವರಣದೊಳಗಿದ್ದ ಎಂಟು ನೌಕರರಿಗೆ ಗಾಯಗಳಾಗಿವೆ. ರಾಸಾಯನಿಕ ಘಟಕದ (chemical plant) ಬಾಯ್ಲರ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಪ್ರಾಥಮಿಕ ವರದಿಗಳ ಪ್ರಕಾರ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಬಂದಿವೆ. ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಐದರಿಂದ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಎಂಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮೂವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ದಿವ್ಯಾ ಭಾಸ್ಕರ್ ಪತ್ರಿಕೆ ವರದಿ ಮಾಡಿದೆ. ಕಂಪನಿಯ ಹೊರಗೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಯ ಹೊರಗೆ ಸ್ಟ್ರೆಚರ್‌ಗಳನ್ನು ಸಹ ಸ್ಥಾಪಿಸಲಾಗಿದ್ದು, 15 ವೈದ್ಯರು ಸೇರಿದಂತೆ 25 ಜನರ ತಂಡವನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ
Image
ನಾಲ್ಕು ವರ್ಷಗಳಿಂದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿಲ್ಲ: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್
Image
ಕಾಶ್ಮೀರಿ ಪಂಡಿತರು ಮತ್ತೊಮ್ಮೆ ವಲಸೆ ಹೋಗುತ್ತಿದ್ದಾರೆ, ತಪ್ಪು ಪುನರಾವರ್ತನೆ ಆಗುತ್ತಿದೆ: ಮೋದಿ ಸರ್ಕಾರಕ್ಕೆ ಓವೈಸಿ ಎಚ್ಚರಿಕೆ
Image
Breaking ಸಂತೂರ್ ಮಾಂತ್ರಿಕ ಪಂಡಿತ್ ಭಜನ್ ಸೊಪೊರಿ ನಿಧನ

ಈ ಬಗ್ಗೆ ಹೇಳಿಕೆ ನೀಡಿರುವ ದೀಪಕ್ ನೈಟ್ರೈಟ್ ಕಂಪನಿ, ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಮ್ಮ ಎಲ್ಲಾ ಉದ್ಯೋಗಿಗಳ ಮತ್ತು ಸುತ್ತಮುತ್ತಲಿನ ಸಮುದಾಯಗಳ ಸುರಕ್ಷತೆ ಮತ್ತು ಯೋಗಕ್ಷೇಮವು ನಮಗೆ ಅಗ್ರಗಣ್ಯ ಆದ್ಯತೆಯಾಗಿದೆ. ನಮ್ಮ ಎಲ್ಲಾ ಉತ್ಪಾದನಾ ಸೌಲಭ್ಯಗಳು ಪರಿಸರಕ್ಕೆ ಸಮರ್ಥನೀಯ ಉತ್ಪಾದನೆಯನ್ನು ಖಾತ್ರಿಪಡಿಸುವ ಅತ್ಯುತ್ತಮ-ವರ್ಗದ ವ್ಯವಸ್ಥೆಗಳು ಮತ್ತು ಸಲಕರಣೆಗಳೊಂದಿಗೆ ಸುಸಜ್ಜಿತವಾಗಿವೆ. ನಮ್ಮ ತಂಡಗಳು ಈಗಾಗಲ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುತ್ತಿವೆ. ನಮ್ಮ ಸಂವಹನ ಚಾನಲ್‌ಗಳು 24×7 ತೆರೆದಿದ್ದು ಅಪ್ಡೇಟ್ ಕೊಡುತ್ತಿರುತ್ತೇವೆ ಎಂದು ಹೇಳಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:33 pm, Thu, 2 June 22

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ