ವಡೋದರ: ಗುಜರಾತಿನ ವಡೋದರದ (Vadodara) ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ವಡೋದರದ ನಂದೇಸರಿ ಪ್ರದೇಶದ ದೀಪಕ್ ನೈಟ್ರೈಟ್ (Dipak Nitrite) ಕಂಪನಿಯಲ್ಲಿ ಸಂಜೆ 5 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು ನಂತರ ಬೆಂಕಿ ಕಾಣಿಸಿಕೊಂಡಿದೆ. ಆವರಣದೊಳಗಿದ್ದ ಎಂಟು ನೌಕರರಿಗೆ ಗಾಯಗಳಾಗಿವೆ. ರಾಸಾಯನಿಕ ಘಟಕದ (chemical plant) ಬಾಯ್ಲರ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಪ್ರಾಥಮಿಕ ವರದಿಗಳ ಪ್ರಕಾರ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಬಂದಿವೆ. ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಐದರಿಂದ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಎಂಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮೂವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ದಿವ್ಯಾ ಭಾಸ್ಕರ್ ಪತ್ರಿಕೆ ವರದಿ ಮಾಡಿದೆ. ಕಂಪನಿಯ ಹೊರಗೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಯ ಹೊರಗೆ ಸ್ಟ್ರೆಚರ್‌ಗಳನ್ನು ಸಹ ಸ್ಥಾಪಿಸಲಾಗಿದ್ದು, 15 ವೈದ್ಯರು ಸೇರಿದಂತೆ 25 ಜನರ ತಂಡವನ್ನು ನಿಯೋಜಿಸಲಾಗಿದೆ.
#WATCH | Huge explosion, followed by fire, occurs at Deepak Nitrite Company in Nandesari GIDC in Vadodara, Gujrat. Details awaited. pic.twitter.com/xNd55HJv9P
— ANI (@ANI) June 2, 2022
ಈ ಬಗ್ಗೆ ಹೇಳಿಕೆ ನೀಡಿರುವ ದೀಪಕ್ ನೈಟ್ರೈಟ್ ಕಂಪನಿ, ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಮ್ಮ ಎಲ್ಲಾ ಉದ್ಯೋಗಿಗಳ ಮತ್ತು ಸುತ್ತಮುತ್ತಲಿನ ಸಮುದಾಯಗಳ ಸುರಕ್ಷತೆ ಮತ್ತು ಯೋಗಕ್ಷೇಮವು ನಮಗೆ ಅಗ್ರಗಣ್ಯ ಆದ್ಯತೆಯಾಗಿದೆ. ನಮ್ಮ ಎಲ್ಲಾ ಉತ್ಪಾದನಾ ಸೌಲಭ್ಯಗಳು ಪರಿಸರಕ್ಕೆ ಸಮರ್ಥನೀಯ ಉತ್ಪಾದನೆಯನ್ನು ಖಾತ್ರಿಪಡಿಸುವ ಅತ್ಯುತ್ತಮ-ವರ್ಗದ ವ್ಯವಸ್ಥೆಗಳು ಮತ್ತು ಸಲಕರಣೆಗಳೊಂದಿಗೆ ಸುಸಜ್ಜಿತವಾಗಿವೆ. ನಮ್ಮ ತಂಡಗಳು ಈಗಾಗಲ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುತ್ತಿವೆ. ನಮ್ಮ ಸಂವಹನ ಚಾನಲ್‌ಗಳು 24×7 ತೆರೆದಿದ್ದು ಅಪ್ಡೇಟ್ ಕೊಡುತ್ತಿರುತ್ತೇವೆ ಎಂದು ಹೇಳಿದೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 9:33 pm, Thu, 2 June 22