ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಮಂಗಳವಾರ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಪಟಾಕಿ ಕಾರ್ಖಾನೆ ಸೂಕ್ತ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಮೂವರಲ್ಲಿ ಇಬ್ಬರು ಮಹಿಳೆಯರು.
ಆಂಜನೇಯ ಪಟಾಕಿ ಕಾರ್ಖಾನೆಯ ಮಾಲೀಕ ಮಣಿ ಮುಂಬರುವ ದೀಪಾವಳಿ ಹಿನ್ನೆಲೆಯಲ್ಲಿ ಆಟಮ್ ಬಾಂಬ್‌ಗಳನ್ನು ತಯಾರಿಸಲು ರಾಸಾಯನಿಕಗಳನ್ನು ಮಿಶ್ರಣ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಅವರು ಸ್ಫೋಟದಲ್ಲಿ ಸಾವನ್ನಪ್ಪಿದರು.
ಗಾಯಗೊಂಡವರಲ್ಲಿ ಮೇರಿ ಚಿತ್ರಾ, ಕಲಾ ಮತ್ತು ಕಣ್ಣನ್ ಅವರು ಸ್ಫೋಟದಿಂದ ತೀವ್ರ ಸುಟ್ಟ ಗಾಯಗಳಾಗಿವೆ. ಘಟನೆಯ ವೇಳೆ ಮಣಿ ಜತೆಯಲ್ಲಿ ಕೆಲಸ ಮಾಡುತ್ತಿದ್ದರು.
ಮತ್ತಷ್ಟು ಓದಿ: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು
ನಾಗಪಟ್ಟಣಂ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮಣಿ ಅವರು ಅಗತ್ಯ ಪರವಾನಿಗೆ ಇಲ್ಲದೇ ಕಾರ್ಖಾನೆ ನಡೆಸುತ್ತಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ