ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು

ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 11, 2022 | 10:52 AM

ಗುಜರಾತ್​ನ ಬರೂಚ್​ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಆರು ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಅಹ್ಮದಾಬಾದ್​ನಿಂದ 235 ಕಿಮೀ ದೂರದಲ್ಲಿರುವ ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ಈ ಫ್ಯಾಕ್ಟರಿಯಿದ್ದು ಮುಂಜಾನೆ 3 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಕಾರ್ಖಾನೆಯಲ್ಲಿ ದ್ರಾವಕವನ್ನು ಭಟ್ಟಿ ಇಳಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಆಗ ಒಮ್ಮೆಲೇ ರಿಯಾಕ್ಟರ್​ ಸ್ಫೋಟಗೊಂಡಿದೆ. ಅದರ ಬಳಿ ಇದ್ದ ಆರೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬರೂಚ್​ ಎಸ್​ಪಿ ಲೀನಾ ಪಾಟೀಲ್​ ತಿಳಿಸಿದ್ದಾರೆ. 

ರಾಸಾಯನಿಕ ರಿಯಾಕ್ಟರ್​​ನಿಂದಾಗಿಯೇ ಸ್ಫೋಟ ಉಂಟಾಗಿದೆ. ಮೃತ ಕಾರ್ಮಿಕರ ಮೃತದೇಹಗಳನ್ನು ಕಾರ್ಖಾನೆಯಿಂದ ಹೊರಗೆ ತೆಗೆದು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿದೆ. ಸ್ಫೋಟದಿಂದಾಗಿ ಬೆಂಕಿ ಉಂಟಾಗಿತ್ತು. ಅದನ್ನೂ ನಂದಿಸಲಾಗಿದೆ ಎಂದೂ ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಆರು ಮಂದಿ ಮೃತಪಟ್ಟಿದ್ದು ಬಿಟ್ಟರೆ ಇನ್ಯಾರೂ ಗಾಯಗೊಂಡಿಲ್ಲ. ಪೊಲೀ್​ ಕೇಸ್ ದಾಖಲಾಗಿದೆ ಎಂದೂ ಅವರು ಹೇಳಿದ್ದಾರೆ.

ದಹೇಜ್​ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕಾರ್ಖಾನೆಗಳಿದ್ದು, ಆಗಾಗ ಸ್ಫೋಟ, ಬೆಂಕಿ ದುರಂತ ನಡೆಯುತ್ತಿರುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ರಾಸಾಯನಿಕ ಉತ್ಪಾದನಾ ಘಟಕವೊಂದರಲ್ಲಿ ಸ್ಫೋಟವುಂಟಾಗಿತ್ತು. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಬ್ಬ ಕೆಲಸಗಾರ ಮೃತಪಟ್ಟಿದ್ದರು.

ಇದನ್ನೂ ಓದಿ: ‘ಇಂಥವರ ಜತೆ, ಅಂಥವರ ಜತೆ ಕೆಲಸ ಮಾಡ್ಬೇಕು ಅಂತ ನಾನು ಕನಸು ಕಂಡಿಲ್ಲ’: ಯಶ್​ ನೇರ ಮಾತು

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ