ಕೊಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರ ಟ್ವಿಟರ್ ಖಾತೆಯನ್ನು ನಿರ್ಬಂಧಿಸಿರುವುದನ್ನು ಇಂದು ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಒಪ್ಪಿಕೊಂಡಿದ್ದಾರೆ. ರಾಜ್ಯಪಾಲ ಧನಕರ್ (Jagdeep Dhankhar) ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಹಲವಾರು ಪತ್ರಗಳನ್ನು ಬರೆದಿದ್ದೇನೆ. ರಾಜ್ಯಪಾಲರು ಯಾರ ಮಾತನ್ನೂ ಕೇಳುತ್ತಿಲ್ಲ, ಅವರು ಎಲ್ಲರಿಗೂ ಬೆದರಿಕೆ ಹಾಕುತ್ತಿದ್ದಾರೆ. ನಾನೇ ಖುದ್ದಾಗಿ ರಾಜ್ಯಪಾಲರ ಬಳಿಗೆ ಹೋಗಿ, ಮಾತನಾಡಿದ್ದೆ. ಆದರೂ ಪ್ರಯೋಜನವಾಗಲಿಲ್ಲ ಎಂದು ಪ್ರಧಾನಮಂತ್ರಿಗಳಿಗೆ ತಿಳಿಸಿದ್ದೆ. ಕಳೆದ ವರ್ಷದಿಂದ ನಾವು ತಾಳ್ಮೆಯಿಂದ ಕಾಯುತ್ತಿದ್ದೇವೆ. ರಾಜ್ಯಪಾಲರು ಹಲವಾರು ಫೈಲ್‌ಗಳನ್ನು ಹಾಗೇ ಉಳಿಸಿಕೊಂಡಿದ್ದಾರೆ. ಹೀಗಿದ್ದಾಗ ಅವರು ನೀತಿ ನಿರ್ಧಾರಗಳ ಬಗ್ಗೆ ಹೇಗೆ ಮಾತನಾಡಲು ಸಾಧ್ಯ? ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ನಾಲ್ಕ್ಕೂ ಹೆಚ್ಚು ಪತ್ರಗಳನ್ನು ಬರೆದಿದ್ದೇನೆ ಎಂದು ಸಿಎಂ ಮಮತಾ ಬ್ಯಾನರ್ಜಿ ಸುದ್ದಿಗಾರರ ಬಳಿ ಆರೋಪಿಸಿದ್ದಾರೆ.
ರಾಜ್ಯಪಾಲ ಜಗದೀಪ್ ಧನಕರ್ ಅವರು “ಫೋನ್ ಟ್ಯಾಪಿಂಗ್” ಮಾಡಿದ್ದಾರೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯಪಾಲರನ್ನು ಏಕೆ ತೆಗೆದುಹಾಕಿಲ್ಲ? ಫೋನ್ ಟ್ಯಾಪಿಂಗ್ ಮಾಡುತ್ತಿದ್ದಾರೆ, ”ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ರಾಜ್ಯದಲ್ಲಿನ ತೃಣಮೂಲ ಕಾಂಗ್ರೆಸ್ ಸರ್ಕಾರವು “ಪೆಗಾಸಸ್ ಬಳಸಿ ಆಪ್ ನಾಯಕರ ಫೋನ್ ಟ್ಯಾಪಿಂಗ್ ಮಾಡುತ್ತಿದೆ” ಎಂದು ಆರೋಪಿಸಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಪಾಲರ ವಿರುದ್ಧ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದಾರೆ.
Guv WB:
CM @MamataOfficial Is constitutionally ordained to discharge “duty” under Article 167 of constitution to impart information on Pandemic Purchase Scam and other issues.
Guv conveyed that no information, once sought by him, can be screened by the Government. pic.twitter.com/Z5svPgwE2a
— Governor West Bengal Jagdeep Dhankhar (@jdhankhar1) January 30, 2022
ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್ ಅವರು ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ಟೀಕೆ ಮಾಡಿದ್ದರು. ಭಾನುವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ್ದ ರಾಜ್ಯಪಾಲ ಜಗದೀಪ್ ಧಂಖರ್, ಪಶ್ಚಿಮ ಬಂಗಾಳ ಸರ್ಕಾರವು ಫೆಬ್ರವರಿ 2021ರ ಮಧ್ಯದಲ್ಲಿ ಪ್ರಾರಂಭವಾದ ‘ಮಾ’ ಯೋಜನೆಯ ಸಂಪೂರ್ಣ ವಿವರಗಳನ್ನು ನೀಡುವುದು ಕಡ್ಡಾಯವಾಗಿದೆ. ಆದರೂ ಇದನ್ನು ಏಪ್ರಿಲ್ 1, 2021ರಿಂದ ಮಾತ್ರ ಕಾರ್ಯಗತಗೊಳಿಸಬಹುದು. ರಾಜ್ಯದ ಏಕೀಕೃತ ನಿಧಿಯಿಂದ ಹಣವನ್ನು ಬೇರೆಡೆಗೆ ತಿರುಗಿಸುವುದು ಗಂಭೀರವಾಗಿದೆ ವಿಷಯವಾಗಿದೆ ಎಂದು ರಾಜ್ಯಪಾಲರು ಟೀಕಿಸಿದ್ದರು.
ಇದನ್ನೂ ಓದಿ: ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನನ್ನ ಕರೆ ಸ್ವೀಕರಿಸುವುದಿಲ್ಲ: ರಾಜ್ಯಪಾಲರಿಂದ ಗಂಭೀರ ಆರೋಪ
ಜೆಡಿಎಸ್‌ನಿಂದ ಎಲ್.ಆರ್ ಶಿವರಾಮೇಗೌಡ ಉಚ್ಚಾಟನೆ; ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶ