ಮಹಾರಾಷ್ಟ್ರದ ವರದಾ ನದಿಯಲ್ಲಿ ದೋಣಿ ಮಗುಚಿ ಮೂರು ಸಾವು; ಹಲವರು ನಾಪತ್ತೆಯಾಗಿರುವ ಶಂಕೆ, ಮುಂದುವರಿದ ಶೋಧ

TV9 Digital Desk

| Edited By: Rashmi Kallakatta

Updated on:Sep 14, 2021 | 4:28 PM

Maharashtra: ಬೆನೊಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ರಾಣ ಗ್ರಾಮದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೂರು ಕುಟುಂಬಗಳ 11 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರದ ವರದಾ ನದಿಯಲ್ಲಿ ದೋಣಿ ಮಗುಚಿ ಮೂರು ಸಾವು; ಹಲವರು ನಾಪತ್ತೆಯಾಗಿರುವ ಶಂಕೆ, ಮುಂದುವರಿದ ಶೋಧ
ಪ್ರಾತಿನಿಧಿಕ ಚಿತ್ರ (ಕೃಪೆ: ಟ್ವಿಟರ್)

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 11 ಜನರು ನೀರಿನಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ತಂಡ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಲ್ಲಿಯವರೆಗೆ ಅಪ್ರಾಪ್ತ ಬಾಲಕಿ ಸೇರಿದಂತೆ ಮೂರು ಮೃತದೇಹಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆನೊಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ರಾಣ ಗ್ರಾಮದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೂರು ಕುಟುಂಬಗಳ 11 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ ಎಂದು ಅವರು ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅಮರಾವತಿ ಜಿಲ್ಲೆಯ ಎಸ್​​ಪಿ ಹರಿ ಬಾಲಾಜಿ, “ವಾರ್ಧಾ ನದಿಯಲ್ಲಿ ದೋಣಿ ಮಗುಚಿದ ಘಟನೆಯಲ್ಲಿ 3 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಮರಾವತಿಯ ಬೆನೋಡಾ ಶಹೀದ್ ಪೊಲೀಸ್ ಠಾಣೆ ಅಡಿಯಲ್ಲಿ ಶ್ರೀ ಕ್ಷೇತ್ರ ಜುಂಜ್ ನಲ್ಲಿ ನಡೆದಿದೆ. ದೋಣಿಯಲ್ಲಿದ್ದ 11 ಜನರು ಒಂದೇ ಕುಟುಂಬಕ್ಕೆ ಸೇರಿದವರು.

ಪ್ರಾಥಮಿಕ ವರದಿ ಪ್ರಕಾರ ದೋಣಿ ತನ್ನ ಪ್ರಯಾಣಿಕರ ಭಾರದಿಂದ ಮುಳುಗಿರುವ ಸಾಧ್ಯತೆ ಇದೆ. ದೋಣಿಯಲ್ಲಿದ್ದ ಜನರು ನದಿಯ ದಡದಲ್ಲಿ ಧಾರ್ಮಿಕ ಕ್ರಿಯೆಯನ್ನು ಮಾಡಿದ ನಂತರ ದೋಣಿಯಲ್ಲಿ ಹೋಗುತ್ತಿದ್ದರು. ಇಲ್ಲಿಯವರೆಗೆ ಮೂರು ಶವಗಳನ್ನು ಹೊರತೆಗೆಯಲಾಗಿದ್ದು, ಇತರರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಳುಗುಗಾರರ ತಂಡಗಳು ಮತ್ತು ಗ್ರಾಮಸ್ಥರು ಸೇರಿ ಪೊಲೀಸರು ನಾಲ್ಕು ಗಂಟೆಗಳ ನಂತರ ನೀರಿನಲ್ಲಿ ಮುಳುಗಿ  ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಭಾರೀ ಮಳೆಯಿಂದಾಗಿ, ವಾರ್ಧಾ, ಅಮರಾವತಿ, ಚಂದ್ರಾಪುರ ಮತ್ತು ಗಡ್ಚಿರೋಲಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವಾರ್ಧಾ ನದಿ ಉಕ್ಕಿ ಹರಿಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ದೋಣಿ ದುರ್ಘಟನೆಯಲ್ಲಿ ಸಾವಿಗೀಡಾದವರಿಗೆ ಫಡಣವಿಸ್  ಸಂತಾಪ

ಅಮರಾವತಿಯಲ್ಲಿ ದೋಣಿ ಮುಳುಗಿದ ಘಟನೆಯಲ್ಲಿ ಜೀವಹಾನಿಯಾದ ಬಗ್ಗೆ ಕೇಳಿ ನೋವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ  ಸಂತಾಪಗಳು ಎಂದು ಮಹಾರಾಷ್ಟ್ರದ ವಿಪಕ್ಷ ನಾಯಕ  ದೇವೇಂದ್ರ ಫಡಣವಿಸ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ನೀಟ್ ಪರೀಕ್ಷೆಯಲ್ಲಿ ಸೋಲುವ ಭಯದಿಂದ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ

ಇದನ್ನೂ ಓದಿ: Narendra Modi in Aligarh ಉತ್ತರ ಪ್ರದೇಶದ ಡಬಲ್ ಎಂಜಿನ್ ಸರ್ಕಾರವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

(Boat capsized in Varada river in Maharashtra’s Amravati district 3 Dead at least 11 people are feared drowned)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada