ಮಧ್ಯಪ್ರದೇಶದಲ್ಲಿ ದೋಣಿ ಮುಳುಗಿ 8 ಮಂದಿ ನಾಪತ್ತೆ; ನಾಲ್ವರ ರಕ್ಷಣೆ

|

Updated on: Jun 01, 2024 | 9:36 PM

ಮಧ್ಯಪ್ರದೇಶದ ಶಿಯೋಪುರದಲ್ಲಿ ದೋಣಿ ಮಗುಚಿದ ಪರಿಣಾಮವಾಗಿ 8 ಜನರು ನಾಪತ್ತೆಯಾಗಿದ್ದಾರೆ. ಈಗಾಗಲೇ ನಾಲ್ವರನ್ನು ರಕ್ಷಿಸಲಾಗಿದೆ.

ಮಧ್ಯಪ್ರದೇಶದಲ್ಲಿ ದೋಣಿ ಮುಳುಗಿ 8 ಮಂದಿ ನಾಪತ್ತೆ; ನಾಲ್ವರ ರಕ್ಷಣೆ
ಸಾಂದರ್ಭಿಕ ಚಿತ್ರ
Follow us on

ನವದೆಹಲಿ: ಇಂದು ಮಧ್ಯಪ್ರದೇಶದ (Madhya Pradesh) ಶಿಯೋಪುರ್ ಜಿಲ್ಲೆಯ ಸೀಪ್ ನದಿಯಲ್ಲಿ ದೋಣಿಯೊಂದು ಮುಳುಗಿ 8 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಸಂಜೆಯಿಂದಲೇ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಪತ್ತೆಯಾಗದ ಹಿನ್ನೆಲೆಯಲ್ಲಿ ಅವರು ಸಾವನ್ನಪ್ಪಿರುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಇನ್ನೂ ಮೃತದೇಹಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಭವಿಸಿದಾಗ ದೋಣಿಯಲ್ಲಿ 12ಕ್ಕೂ ಹೆಚ್ಚು ಜನರಿದ್ದರು. ರಾಜ್ಯ ವಿಪತ್ತು ತುರ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಇಆರ್‌ಎಫ್) ತಂಡದ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

ಇಂದು ಸಂಜೆ 4.45ರ ಸುಮಾರಿಗೆ ಶಿಯೋಪುರ್ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮನ್ಪುರ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಬಲವಾದ ಗಾಳಿಯಿಂದಾಗಿ ದೋಣಿ ಮಗುಚಿ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಾಪತ್ತೆಯಾದ ವ್ಯಕ್ತಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಇತರ ನಾಲ್ವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೆಯೋಪುರ್ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಮನ್‌ಪುರ್ ಪ್ರದೇಶದಲ್ಲಿ ಸಂಜೆ 4:45 ರ ಸುಮಾರಿಗೆ ಈ ದುರಂತ ಘಟನೆ ತೆರೆದುಕೊಂಡಿದೆ. ಘಟನೆ ವೇಳೆ ಜೋರಾಗಿ ಗಾಳಿ ಬೀಸಿದ್ದು ದೋಣಿ ಮುಳುಗಲು ಕಾರಣವಾಗಿರಬಹುದು ಎನ್ನಲಾಗಿದೆ.

ಇದನ್ನೂ ಓದಿ: ಹಾಸನದಲ್ಲಿ ಮತ್ತೊಂದು ದುರಂತ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ಅಪಘಾತವಾದ ತಕ್ಷಣ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸ್ಥಳಕ್ಕೆ ಬಂದಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯವು ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪರಿಶೀಲಿಸುವಂತೆ ರಾಜ್ಯದ ವಿದ್ಯುತ್ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಅವರಿಗೆ ಸರ್ಕಾರ ಸೂಚನೆ ನೀಡಿದೆ ಎಂದು ಸಿಎಂ ಯಾದವ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ