ಹರಿಯಾಣ: ಒಂದೇ ಕುಟುಂಬದ ಮೂವರ ಸಾವು; ಸರ್ಕಾರಿ ಶಿಕ್ಷಕ, ಪತ್ನಿ, ಮಗಳ ಶವ ಹಾಸಿಗೆ ಮೇಲೆ ಪತ್ತೆ

ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ.

ಹರಿಯಾಣ: ಒಂದೇ ಕುಟುಂಬದ ಮೂವರ ಸಾವು; ಸರ್ಕಾರಿ ಶಿಕ್ಷಕ, ಪತ್ನಿ, ಮಗಳ ಶವ ಹಾಸಿಗೆ ಮೇಲೆ ಪತ್ತೆ
ಎಸ್​ಪಿ ಅಜಿತ್ ಸಿಂಗ್ ಶೇಖಾವತ್
Follow us
TV9 Web
| Updated By: ಆಯೇಷಾ ಬಾನು

Updated on:Jan 28, 2023 | 7:47 AM

ಚಂಡಿಗಢ: ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಸರ್ಕಾರಿ ಶಿಕ್ಷಕ, ಆತನ ಪತ್ನಿ ಹಾಗೂ ಮಗಳ ಶವ ಪತ್ತೆಯಾಗಿದೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ, ಮಗಳು ಹಿಮಾನಿ ಮೃತರು.

ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ. ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.

‘ಸರ್ಕಾರಿ ಶಿಕ್ಷಕ ಜಿತೇಂದ್ರ, ಅವರ ಪತ್ನಿ ಸುಶೀಲಾ ಹಾಗೂ ಅವರ ಪುತ್ರಿ ಹಿಮಾನಿ ಅವರ ಶವಗಳು ಅವರ ಮನೆಯ ಹಾಸಿಗೆಯ ಮೇಲೆ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಸಾವು ಸಂಭವಿಸಿರಬೇಕು ಎಂದು ತೋರುತ್ತದೆ. ಯಾವುದೇ ಗಾಯಗಳು ಅಥವಾ ದೇಹದ ಮೇಲೆ ಯಾವುದೇ ರೀತಿಯ ಮಾರ್ಕ್​ಗಳು ಪತ್ತೆಯಾಗಿಲ್ಲ” ಎಂದು ಭಿವಾನಿ ಎಸ್ಪಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:47 am, Sat, 28 January 23

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ