UP Accident: ದಟ್ಟ ಮಂಜಿನಿಂದ ಹತ್ರಾಸ್ ಬಳಿ ಕಾರು ಮತ್ತು ಟ್ರ್ಯಾಕ್ಟರ್ ಡಿಕ್ಕಿ, ಮೂವರು ಸಾವು
ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಿ ವೃಂದಾವನದಿಂದ ಹಿಂದಿರುಗುತ್ತಿದ್ದ ಆರು ಮಂದಿ ಪ್ರಯಾಣಿಸುತ್ತಿದ್ದ ಬೊಲೆರೊ ಕಾರು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.
ಲಖನೌ: ಉತ್ತರಪ್ರದೇಶದ ಹತ್ರಾಸ್ ಬಳಿ ಭಾನುವಾರ ಮಾರುತಿ ಬೊಲೆರೊ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ(UP Accident) ಸಂಭವಿಸಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಅಲಿಗಢ ವೈದ್ಯಕೀಯ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಿ ವೃಂದಾವನದಿಂದ ಹಿಂದಿರುಗುತ್ತಿದ್ದ ಆರು ಮಂದಿ ಪ್ರಯಾಣಿಸುತ್ತಿದ್ದ ಬೊಲೆರೊ ಕಾರು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಹರ್ಷ ಚೌಧರಿ (20), ದೀಪಕ್ (18) ಮತ್ತು ಕೃಷ್ಣ (22) ಎಂದು ಗುರುತಿಸಲಾಗಿದೆ.
ಮಾರುತಿ ಬೊಲೆರೋ ಕಾರು ಮತ್ತು ಟ್ರಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 3 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಲಿಗಢ ವೈದ್ಯಕೀಯ ಕಾಲೇಜಿಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರನ್ನು ಗುರುತಿಸಿ ಅವರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ದಟ್ಟ ಮಂಜು ಆವರಿಸಿದ್ದರಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.
Hathras, UP | 3 people died & 3 were injured after a collision b/w a Maruti Bolero car & a tractor. The injured were referred to Aligarh Medical college. The deceased were identified & their families have been informed. The accident might have happened due to fog:A Verma, DM(1.1) pic.twitter.com/vyyvh0MzHg
— ANI UP/Uttarakhand (@ANINewsUP) January 1, 2023
ಇದನ್ನೂ ಓದಿ: Mexico: ನಯಾರಿತ್‌ನಲ್ಲಿ ಭೀಕರ ಅಪಘಾತಕ್ಕೆ 15 ಮಂದಿ ದುರ್ಮರಣ, 47 ಮಂದಿಗೆ ಗಾಯ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹತ್ರಾಸ್ ರಸ್ತೆ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಹಾಗೂ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದರೊಂದಿಗೆ ಸ್ಥಳದಲ್ಲೇ ಪರಿಹಾರ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
मुख्यमंत्री जी ने घायलों को तत्काल अस्पताल पहुंचाकर जिला प्रशासन के अधिकारियों को उनके समुचित उपचार के निर्देश दिए हैं और उनके शीघ्र स्वस्थ होने की भी कामना की है।
साथ ही जिलाधिकारी एवं पुलिस के वरिष्ठ अधिकारियों को मौके पर जाकर राहत कार्य कराने के निर्देश दिए हैं।
— CM Office, GoUP (@CMOfficeUP) January 1, 2023
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:19 am, Mon, 2 January 23