ಕೊರೊನಾ ಲಸಿಕೆ ಪಡೆದ ಅಮಿತಾಬ್ ಬಚ್ಚನ್ ಮತ್ತು ಕುಟುಂಬ

ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದು, ಅವರನ್ನು ಬಿಟ್ಟು ಕುಟುಂಬದ ಎಲ್ಲರೂ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದೇವೆ ಎಂದು ಅಮಿತಾಬ್ ಬಚ್ಚನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ಲಸಿಕೆ ಪಡೆದ ಅಮಿತಾಬ್ ಬಚ್ಚನ್ ಮತ್ತು ಕುಟುಂಬ
ಅಮಿತಾಭ್​ ಬಚ್ಚನ್​
Follow us
guruganesh bhat
| Updated By: shruti hegde

Updated on: Apr 02, 2021 | 12:08 PM

ಮುಂಬೈ: ಬಾಲಿವುಡ್ ಮೆಗಾಸ್ಟಾರ್  ಅಮಿತಾಬ್ ಬಚ್ಚನ್ ಕೊರೊನಾ ಲಸಿಕೆ ಪಡೆದಿದ್ದಾರೆ. ಅವರಷ್ಟೇ ಅಲ್ಲದೇ ಅವರ ಕುಟುಂಬದಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ಹೊರತುಪಡಿಸಿ ಮಿಕ್ಕೆಲ್ಲರೂ ಕೊರೊನಾ ಲಸಿಕೆ ಪಡೆದಿದ್ದಾರೆ. ಮಗ ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದು, ಅವರನ್ನು ಬಿಟ್ಟು ಕುಟುಂಬದ ಎಲ್ಲರೂ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದೇವೆ ಎಂದು ಅಮಿತಾಬ್ ಬಚ್ಚನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್‌ ಶೆಹನ್‌ಶಾ ಅಮಿತಾಬ್‌ ಬಚ್ಚನ್‌ ಅವರಿಗೆ  2020ರ ಜುಲೈ 11ರಂದು ಕೊರೊನಾ ಸೋಂಕು ತಗುಲಿತ್ತು. ಈ ಸಂಬಂಧ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದ ಬಿಗ್‌ ಬಿ ತಮಗೆ ಕೊರೋನಾ ಪಾಸಿಟಿವ್‌ ಇರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಬಿಗ್‌ ಬಿ ಚಿಕಿತ್ಸೆ ಪಡೆದಿದ್ದರು.  ತಮ್ಮ ಜತೆ ಸಂಪರ್ಕಕ್ಕೆ ಬಂದ ಹಿತೈಷಿಗಳು ಮತ್ತ ಸ್ನೇಹಿತರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದರು.

ಇಷ್ಟೇ ಅಲ್ಲದೇ  ಹಿಂದಿನ ವರ್ಷ ಬಿಗ್‌ ಬಿ ಪುತ್ರ ಅಭಿಷೇಕ್‌ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಪುಟಾಣಿ ಆರಾಧ್ಯಾಳಿಗೂ ‌ಕೂಡಾ ಕೊರೊನಾ ಸೋಂಕು ತಗುಲಿತ್ತು.  ನಾನು ಮತ್ತು ನಮ್ಮ ತಂದೆ ಅಮಿತಾಬ್‌ ಬಚ್ಚನ್‌ ಅವರ ಕೊರೊನಾ ಟೆಸ್ಟ್‌ ಪಾಸಿಟಿವ್‌ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಬಿಎಂಸಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದರು. ಈ ಅಭಿಷೇಕ್ ಬಚ್ಚನ್ ಹೊರತುಪಡಿಸಿ ಮಿಕ್ಕವರೆಲ್ಲರೂ ಕೊರೊನಾ ಲಸಿಕೆ ಪಡೆದಂತಾಗಿದೆ.

ಇದನ್ನೂ ಓದಿ: ಸರ್ಕಾರಿ ರಜಾ ದಿನಗಳಲ್ಲೂ ಕೊರೊನಾ ಲಸಿಕೆ ಪಡೆಯಲು ಅವಕಾಶ ಕಲ್ಪಿಸಿದ ಕೇಂದ್ರ ಸರ್ಕಾರ

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ: ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ

(Bollywood Big B Amitabh Bachchan get Corona vaccine along with family)

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ