Breaking News: ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ; ಕಿಟಕಿ ಗಾಜುಗಳು ಪುಡಿಪುಡಿ
ಇಂದು ಮುಂಜಾನೆ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ.
ಕಣ್ಣೂರು: ಕೇರಳದ ಕಣ್ಣೂರು (Kannur) ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌ಎಸ್‌ಎಸ್ ಕಚೇರಿ (RSS Office) ಮೇಲೆ ಬಾಂಬ್ ದಾಳಿ ನಡೆದಿದೆ. ಈ ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಮುರಿದು ಬಿದ್ದಿದೆ. ಇಂದು ಮುಂಜಾನೆ ಬಾಂಬ್ ದಾಳಿ ನಡೆದಿದೆ ಎಂದು ಪಯ್ಯನ್ನೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಂಬ್ ದಾಳಿ ನಡೆಸಿದವರು ಯಾರು? ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಲಾಗಿದೆ? ಎಂಬಿತ್ಯಾದಿ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kerala | Bomb hurled at RSS office in Payyannur, Kannur district. The incident happened early this morning with window glasses of the building broken in the attack, as per Payyannur police
— ANI (@ANI) July 12, 2022
ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದೆ. ಬಾಂಬ್ ದಾಳಿಯ ಪರಿಣಾಮವಾಗಿ ಯಾವುದೇ ಗಾಯಗಳು ವರದಿಯಾಗಿಲ್ಲ. ಈ ಬಗ್ಗೆ ಮಾತನಾಡಿರುವ ಬಿಜೆಪಿ ನಾಯಕ ಟಾಮ್ ವಡಕ್ಕನ್, ಇಂತಹ ದಾಳಿಗಳನ್ನು ತಡೆಯುವಲ್ಲಿ ವಿಫಲವಾದ ಕೇರ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ.
Kerala | Visuals from RSS office in Payyannur, Kannur which was allegedly bombed early this morning, leaving the window glass broken pic.twitter.com/ALjpuXNH2K
— ANI (@ANI) July 12, 2022
ಪೊಲೀಸರ ಕುಮ್ಮಕ್ಕು ತುಂಬಾ ಅಪಾಯಕಾರಿ. ಪೊಲೀಸ್ ಠಾಣೆ 100 ಮೀಟರ್ ದೂರವಿದ್ದರೂ ಅವರಿಂದ ಏನೂ ಮಾಡಲಾಗದ ಹಲವು ಉದಾಹರಣೆಗಳಿವೆ. ಕೇರಳದಲ್ಲಿ ಯಾವುದೇ ರಾಜಕೀಯ ಕಚೇರಿಗೆ ಹಾನಿಯಾದರೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಅವರು ಹೇಳಿದ್ದಾರೆ.
Published On - 9:23 am, Tue, 12 July 22