Breaking News: ಆರ್​ಎಸ್​ಎಸ್​ ಕಚೇರಿ ಮೇಲೆ ಬಾಂಬ್ ದಾಳಿ; ಕಿಟಕಿ ಗಾಜುಗಳು ಪುಡಿಪುಡಿ

ಇಂದು ಮುಂಜಾನೆ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ.

Breaking News: ಆರ್​ಎಸ್​ಎಸ್​ ಕಚೇರಿ ಮೇಲೆ ಬಾಂಬ್ ದಾಳಿ; ಕಿಟಕಿ ಗಾಜುಗಳು ಪುಡಿಪುಡಿ
ಕಣ್ಣೂರಿನ ಆರ್​ಎಸ್​ಎಸ್​ ಕಚೇರಿ ಮೇಲೆ ನಡೆದ ಬಾಂಬ್ ದಾಳಿಯಿಂದ ಹಾನಿಗೀಡಾದ ಕುರ್ಚಿ, ಕಿಟಕಿಗಳು
Image Credit source: ANI
Updated By: ಸುಷ್ಮಾ ಚಕ್ರೆ

Updated on: Jul 12, 2022 | 9:37 AM

ಕಣ್ಣೂರು: ಕೇರಳದ ಕಣ್ಣೂರು (Kannur) ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌ಎಸ್‌ಎಸ್ ಕಚೇರಿ (RSS Office) ಮೇಲೆ ಬಾಂಬ್ ದಾಳಿ ನಡೆದಿದೆ. ಈ ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಮುರಿದು ಬಿದ್ದಿದೆ. ಇಂದು ಮುಂಜಾನೆ ಬಾಂಬ್ ದಾಳಿ ನಡೆದಿದೆ ಎಂದು ಪಯ್ಯನ್ನೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಂಬ್ ದಾಳಿ ನಡೆಸಿದವರು ಯಾರು? ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಲಾಗಿದೆ? ಎಂಬಿತ್ಯಾದಿ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದೆ. ಬಾಂಬ್ ದಾಳಿಯ ಪರಿಣಾಮವಾಗಿ ಯಾವುದೇ ಗಾಯಗಳು ವರದಿಯಾಗಿಲ್ಲ. ಈ ಬಗ್ಗೆ ಮಾತನಾಡಿರುವ ಬಿಜೆಪಿ ನಾಯಕ ಟಾಮ್ ವಡಕ್ಕನ್, ಇಂತಹ ದಾಳಿಗಳನ್ನು ತಡೆಯುವಲ್ಲಿ ವಿಫಲವಾದ ಕೇರ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ.

 

ಪೊಲೀಸರ ಕುಮ್ಮಕ್ಕು ತುಂಬಾ ಅಪಾಯಕಾರಿ. ಪೊಲೀಸ್ ಠಾಣೆ 100 ಮೀಟರ್ ದೂರವಿದ್ದರೂ ಅವರಿಂದ ಏನೂ ಮಾಡಲಾಗದ ಹಲವು ಉದಾಹರಣೆಗಳಿವೆ. ಕೇರಳದಲ್ಲಿ ಯಾವುದೇ ರಾಜಕೀಯ ಕಚೇರಿಗೆ ಹಾನಿಯಾದರೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಅವರು ಹೇಳಿದ್ದಾರೆ.

 

Published On - 9:23 am, Tue, 12 July 22