ಬಿಹಾರದಲ್ಲಿ ಬಾಂಬ್ ಸ್ಪೋಟ(Bomb Blast) ಸಂಭವಿಸಿದ್ದು, ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ಜಿಲ್ಲಾ ಕೇಂದ್ರ ಸಸಾರಾಮ್‌ನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶೇರ್‌ಗಂಜ್ ಪ್ರದೇಶದಿಂದ ಶನಿವಾರ ಸಂಜೆ ಬಾಂಬ್ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಜಿಲ್ಲೆಯಲ್ಲಿ ಘರ್ಷಣೆಯ ಹಿನ್ನೆಲೆಯಲ್ಲಿ ಸೆಕ್ಷನ್ 144 ಇರುವ ಕಾರಣ ಬಿಹಾರದ ರೋಹ್ತಾಸ್‌ನಲ್ಲಿರುವ ಸಸಾರಾಮ್‌ಗೆ ಅಮಿತ್ ಶಾ ಅವರ ಭೇಟಿಯನ್ನು ರದ್ದುಗೊಳಿಸಲಾಗಿದೆ.
ರಾಮನವಮಿಯಂದು ಬಿಹಾರದ ನಳಂದಾ ಮತ್ತು ರೋಹ್ತಾಸ್ ಜಿಲ್ಲೆಗಳಲ್ಲಿ ರಾಮನವಮಿ ಮೆರವಣಿಗೆ ವೇಳೆ ಹಿಂದೂ-ಮುಸ್ಲಿಮರ ನಡುವೆ ಘರ್ಷಣೆ ಸಂಭವಿಸಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 13 ಜನರು ಗಾಯಗೊಂಡಿದ್ದರು.
ನಳಂದದ ಬಿಹಾರ ಷರೀಫ್ ಪಟ್ಟಣದಲ್ಲಿ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಿಶ್ರಾ ತಿಳಿಸಿದ್ದರು.
ಮತ್ತಷ್ಟು ಓದಿ: ರಾಮನವಮಿ ಮೆರವಣಿಗೆಯಲ್ಲಿ ಕೋಮುಗಲಭೆ; ಬಿಹಾರದ ಸಸಾರಾಮ್‌ನಲ್ಲಿ ಅಮಿತ್ ಶಾ ಕಾರ್ಯಕ್ರಮ ರದ್ದು
ಶುಕ್ರವಾರ ನಡೆದ ಘರ್ಷಣೆಯಲ್ಲಿ ಮೂವರಿಗೆ ಗುಂಡು ತಗುಲಿದ್ದು, 11 ಜನರು ಗಾಯಗೊಂಡಿದ್ದಾರೆ. ಹಲವು ವಾಹನಗಳು ಮತ್ತು ಅಂಗಡಿಗಳು ಸುಟ್ಟು ಕರಕಲಾಗಿವೆ. ಆ ಬಳಿಕ ಪೊಲೀಸರು ಸೆಕ್ಷನ್ 144ರ ಸೆಕ್ಷನ್ ಜಾರಿ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಜನರಿಗೆ ಶಾಂತವಾಗಿರಲು ನಾವು ಮನವಿ ಮಾಡುತ್ತೇವೆ. ತೊಂದರೆ ಉಂಟುಮಾಡುವವರನ್ನು ಗುರುತಿಸಲು ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸುತ್ತಿದ್ದೇವೆ” ಎಂದು ನಳಂದಾ ಮ್ಯಾಜಿಸ್ಟ್ರೇಟ್ ಶಶಾಂಕ್ ಶುಭಂಕರ್ ಎಚ್ಚರಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡುವುದನ್ನು ತಡೆಯಲು ತೀವ್ರ ನಿಗಾ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೋಹ್ತಾಸ್‌ನ ಸಸಾರಾಮ್‌ನಲ್ಲಿ, ಗುರುವಾರ ಸಂಜೆ ರಾಮನವಮಿ ಮೆರವಣಿಗೆಯಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಘರ್ಷಣೆ ನಡೆಯಿತು. ಮರುದಿನ ಬೆಳಗ್ಗೆ ಶುಕ್ರವಾರ ಮತ್ತೆ ಘರ್ಷಣೆ ನಡೆದಿದ್ದು, ಎರಡೂ ಸಮುದಾಯಗಳ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ