Bomb Threat: ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್​ ಬೆದರಿಕೆ ಹಾಕಿರುವ ಘಟನೆಗಳು ಹೆಚ್ಚಾಗುತ್ತಿವೆ. ಬಾಂಬ್​ ಇಟ್ಟಿರುವುದಾಗಿ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ ಇ-ಮೇಲ್​ ಬಂದಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Bomb Threat: ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ
ದೆಹಲಿ ಏರ್​ಪೋರ್ಟ್​

Updated on: Jun 18, 2024 | 9:48 AM

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್​ ಇರಿಸಲಾಗಿದೆ ಎಂದು ಬೆಳಗ್ಗೆ ಇ-ಮೇಲ್ ಬಂದಿದೆ.

ಮಾಹಿತಿ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ ನೀಡಲಾಗಿದೆ. ಭದ್ರತಾ ಸಂಸ್ಥೆ ಮತ್ತು ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಶೋಧಿಸಿದೆ. ಶೋಧ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೇಲ್ ಕಳುಹಿಸಿದವರನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ.

 ದೆಹಲಿ-ಟೊರೊಂಟೊ ಏರ್​ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ

ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್​ ಬೆದರಿಕೆ(Bomb Threat) ಹೆಚ್ಚಾಗುತ್ತಿದೆ. ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ  ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಚಂಡೀಗಢದ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ವಿಮಾನದಲ್ಲಿ 306 ಪ್ರಯಾಣಿಕರಿದ್ದರು.

ಪ್ಯಾರಿಸ್​-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಫ್ರಾನ್ಸ್ ರಾಜಧಾನಿ ಪ್ಯಾರಿಸ್(Paris)ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿತ್ತು.

ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us