AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಕೇಳಿ ಬಂತು ಭಾರೀ ಸದ್ದು; ಏನೂ ಪತ್ತೆಯಾಗಿಲ್ಲ ಎಂದ ಪೊಲೀಸ್

ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು ಅಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗೆ ಇಂದು ಸಂಜೆ ಚಾಣಕ್ಯಪುರಿ ಪ್ರದೇಶದಲ್ಲಿ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ನಡೆದಿರುವುದಾಗಿ ಕರೆ ಬಂದಿದೆ. "ಇಲ್ಲಿಯವರೆಗೆ ಸ್ಥಳದಲ್ಲಿ ಏನೂ ಪತ್ತೆಯಾಗಿಲ್ಲ" ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.

ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಕೇಳಿ ಬಂತು ಭಾರೀ ಸದ್ದು; ಏನೂ ಪತ್ತೆಯಾಗಿಲ್ಲ ಎಂದ ಪೊಲೀಸ್
ದೆಹಲಿ ಪೊಲೀಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 26, 2023 | 8:17 PM

Share

ದೆಹಲಿ ಡಿಸೆಂಬರ್  26: ಇಸ್ರೇಲ್ ರಾಯಭಾರ ಕಚೇರಿ (Israeli Embassy) ಬಳಿ ಬಾಂಬ್ ಸ್ಫೋಟ (Bomb Blast) ಸಂಭವಿಸಿದೆ ಎಂಬ ಕರೆ ಬಂದ ಹಿನ್ನಲೆಯಲ್ಲಿ ದೆಹಲಿ ಪೊಲೀಸರು (Delhi Police) ಮತ್ತು ಅಗ್ನಿಶಾಮಕ ಸೇವೆಗಳು ತಕ್ಷಣವೇ ದೌಡಾಯಿಸಿವೆ. ಆದರೆ ಅಲ್ಲಿ ಯಾವುದೇ  ಸ್ಫೋಟಕ ಪತ್ತೆಯಾಗಿಲ್ಲ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗೆ ಇಂದು ಸಂಜೆ ಚಾಣಕ್ಯಪುರಿ ಪ್ರದೇಶದಲ್ಲಿ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ನಡೆದಿರುವುದಾಗಿ ಕರೆ ಬಂದಿದೆ. “ಇಲ್ಲಿಯವರೆಗೆ ಸ್ಥಳದಲ್ಲಿ ಏನೂ ಪತ್ತೆಯಾಗಿಲ್ಲ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.

ರಾಯಭಾರ ಕಚೇರಿಯ  ಸಿಬ್ಬಂದಿಗಳಿಗೆ ಏನೂ ಆಗಿಲ್ಲ. ಅವರು ಪ್ರಕರಣದ ತನಿಖೆಗೆ ಸ್ಥಳೀಯ ಅಧಿಕಾರಿಗಳೊಂದಿಗೆ ಸಹಕರಿಸುತ್ತಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಸುತ್ತಮುತ್ತಲಿನ ಜನರು ದೊಡ್ಡ ಶಬ್ದವನ್ನು ಕೇಳಿದರು. ಅಗ್ನಿಶಾಮಕ ದಳದ ಮಾಹಿತಿಯಂತೆ ಅವರ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ. ಅಧಿಕಾರಿಗಳು ಇನ್ನೂ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾರೆ.

ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಮಧ್ಯೆ ಇದು ಸಂಭವಿಸುತ್ತದೆ.  ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಿಂದ ಶುರುವಾದ ಯುದ್ಧದಲ್ಲಿ, 1200 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್​​ಗೆ 2 ಕೋಟಿ ಚಂದಾದಾರರು

2021 ರಲ್ಲಿ, ದೆಹಲಿಯ ಇಸ್ರೇಲಿ ರಾಯಭಾರ ಕಚೇರಿಯ ಹೊರಗೆ ಕಡಿಮೆ ತೀವ್ರತೆಯ ಸ್ಫೋಟವು ಪ್ರಪಂಚದಾದ್ಯಂತ ಆಘಾತವನ್ನು ಉಂಟುಮಾಡಿತು. ರಾಷ್ಟ್ರೀಯ ತನಿಖಾ ಸಂಸ್ಥೆ ಇನ್ನೂ ಪ್ರಕರಣದ ತನಿಖೆ ನಡೆಸುತ್ತಿದೆ.

ಕಡಿಮೆ-ತೀವ್ರತೆಯ ಸುಧಾರಿತ ಸಾಧನವು ಜನವರಿ 29, 2021 ರಂದು ಜಿಂದಾಲ್ ಹೌಸ್ ಬಳಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯ ಬಂಗಲೆ ಸಂಖ್ಯೆ 5 ರ ಸಮೀಪ ಸಂಜೆ 5 ಗಂಟೆಯ ಸುಮಾರಿಗೆ ಸ್ಫೋಟವಾಗಿತ್ತು. ಈ ಸ್ಫೋಟದಲ್ಲಿ ಯಾವುದೇ ಸಾವು ನೋವು ಸಂಭವಿಸದೇ ಇದ್ದರೂ ,  ಹತ್ತಿರದಲ್ಲಿ ನಿಲ್ಲಿಸಿದ್ದ ಮೂರು ಕಾರುಗಳಿಗೆ ಹಾನಿಯಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:41 pm, Tue, 26 December 23

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್