Bomb Threat: ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ದೆಹಲಿ ಬಳಿಕ ಇದೀಗ ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಎರಡು ಆಸ್ಪತ್ರೆಗಳು ಮತ್ತು ದೆಹಲಿ ಐಜಿಐ ವಿಮಾನ ನಿಲ್ದಾಣಕ್ಕೆ ಭಾನುವಾರ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ, ಜೈಪುರದ ನಾಲ್ಕು ಶಾಲೆಗಳಿಗೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

Bomb Threat: ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

Updated on: May 13, 2024 | 9:54 AM

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ(Bomb Threat)ಯ ಇ-ಮೇಲ್ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎರಡು ಆಸ್ಪತ್ರೆಗಳು ಮತ್ತು ದೆಹಲಿ ಐಜಿಐ ವಿಮಾನ ನಿಲ್ದಾಣಕ್ಕೆ ಭಾನುವಾರ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ, ಜೈಪುರದ ನಾಲ್ಕು ಶಾಲೆಗಳಿಗೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ ಮತ್ತು ಬಾಂಬ್ ಮತ್ತು ಶ್ವಾನ ದಳದೊಂದಿಗೆ ಪೊಲೀಸ್ ತಂಡಗಳು ಶಾಲೆಗಳನ್ನು ತಲುಪಿವೆ. ಕಳೆದ ವಾರ ದೆಹಲಿ ಮತ್ತು ಅಹಮದಾಬಾದ್‌ನಲ್ಲಿ ಇದೇ ರೀತಿಯ ಘಟನೆ ನಡೆದಿದೆ. ದೆಹಲಿಯ 131 ಶಾಲೆಗಳು, ಗುರುಗ್ರಾಮ್‌ನಲ್ಲಿ ಐದು ಮತ್ತು ನೋಯ್ಡಾದ ಮೂರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದವು.

ನಾಲ್ಕು-ಐದು ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ, ಪೊಲೀಸರು ಶಾಲೆಗಳನ್ನು ತಲುಪಿದ್ದಾರೆ. ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದವರನ್ನು ಗುರುತಿಸಲು ಪೊಲೀಸರು ಈಗ ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಬಿಜು ಜಾರ್ಜ್​ ಹೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು

ಭಾನುವಾರ ದೆಹಲಿಯ ಬುರಾರಿ ಆಸ್ಪತ್ರೆ ಹಾಗೂ ಮಂಗೋಲ್​ಪುರಿಯಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆಗೆ ಬಾಂಬ್​ ಬೆದರಿಕೆ ಕರೆಗಳು ಬಂದಿವೆ.

ಶಾಲಾ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ಪ್ರಾಂಶುಪಾಲರಿಗೆ ಇ-ಮೇಲ್ ಕಳುಹಿಸಿದ್ದಾರೆ. ಈ ಮಾಹಿತಿ ಬಂದ ತಕ್ಷಣ ಶಾಲೆಗಳಲ್ಲಿ ಆತಂಕ ಮನೆ ಮಾಡಿತ್ತು ತಕ್ಷಣವೇ  ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಶಾಲೆಗಳಿಂದ ಸ್ಥಳಾಂತರಿಸಲಾಯಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us