Bomb Threat: ದೆಹಲಿ-ಟೊರೊಂಟೊ ಏರ್​ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ

ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ (AC43) ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

Bomb Threat: ದೆಹಲಿ-ಟೊರೊಂಟೊ ಏರ್​ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ
ಏರ್​ ಕೆನಡಾ

Updated on: Jun 05, 2024 | 8:42 AM

ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್​ ಬೆದರಿಕೆ(Bomb Threat) ಹೆಚ್ಚಾಗುತ್ತಿದೆ. ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ(Air Canada) ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ವಿಮಾನದಲ್ಲಿ 306 ಪ್ರಯಾಣಿಕರಿದ್ದರು.

ಪ್ಯಾರಿಸ್​-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಫ್ರಾನ್ಸ್ ರಾಜಧಾನಿ ಪ್ಯಾರಿಸ್(Paris)ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನ(Vistara Flightಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿತ್ತು.

ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು.

ಮತ್ತಷ್ಟು ಓದಿ: ಪ್ಯಾರಿಸ್​-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ

ಬೆದರಿಕೆ ಬಂದ ನಂತರ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.08 ಕ್ಕೆ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ವಿಮಾನವು ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.19 ಕ್ಕೆ ಇಳಿಯಿತು ಎಂದು ಮೂಲಗಳು ತಿಳಿಸಿವೆ.

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್
ನಿವಾರ ಚೆನ್ನೈನಿಂದ (Chennai) ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ (IndiGo flight) ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಸಿಬ್ಬಂದಿ ಪ್ರೋಟೋಕಾಲ್ ಅನ್ನು ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಕೊಂಡೊಯ್ಯಲಾಗಿದೆ ಎಂದು ವಿಮಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:42 am, Wed, 5 June 24

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us