AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ, ಓರ್ವ ಶಂಕಿತನ ಬಂಧನ

ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರೊಬ್ಬನನ್ನು ಬಂಧಿಸಲಾಗಿದೆ. ಗಡ್ಕರಿಯವರ ನಾಗ್ಪುರ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಭಾನುವಾರ ಬೆಳಗ್ಗೆ 8.46 ಕ್ಕೆ ಬಂದ ಬಾಂಬ್ ಬೆದರಿಕೆ ಬಂದಿತ್ತು, ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ಪೊಲೀಸರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪ್ರತಾಪ್ ನಗರ ಪೊಲೀಸರಿಗೆ ಮಾಹಿತಿಯನ್ನು ರವಾನಿಸಲಾಯಿತು.

ಮಹಾರಾಷ್ಟ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ, ಓರ್ವ ಶಂಕಿತನ ಬಂಧನ
ಬಾಂಬ್ ಬೆದರಿಕೆImage Credit source: India TV
ನಯನಾ ರಾಜೀವ್
|

Updated on: Aug 03, 2025 | 2:24 PM

Share

ಮುಂಬೈ, ಆಗಸ್ಟ್​ 03: ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರೊಬ್ಬನನ್ನು ಬಂಧಿಸಲಾಗಿದೆ. ಗಡ್ಕರಿಯವರ ನಾಗ್ಪುರ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಭಾನುವಾರ ಬೆಳಗ್ಗೆ 8.46 ಕ್ಕೆ ಬಂದ ಬಾಂಬ್ ಬೆದರಿಕೆ ಬಂದಿತ್ತು, ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.

ಪೊಲೀಸರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಪ್ರತಾಪ್ ನಗರ ಪೊಲೀಸರಿಗೆ ಮಾಹಿತಿಯನ್ನು ರವಾನಿಸಲಾಯಿತು. ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಬೆದರಿಕೆ ಹಾಕಿದ ಸ್ವಲ್ಪ ಸಮಯದ ನಂತರ ಶಂಕಿತ ಉಮೇಶ್ ವಿಷ್ಣು ರಾವತ್​​ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಈಗ ದೃಢಪಡಿಸಿದ್ದಾರೆ.

ಮಹಲ್‌ನ ತುಳಸಿ ಬಾಗ್ ರಸ್ತೆಯ ನಿವಾಸಿಯಾದ ರಾವತ್, ಮೆಡಿಕಲ್ ಚೌಕ್ ಬಳಿಯ ಮದ್ಯದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆತ ತನ್ನ ಮೊಬೈಲ್ ಫೋನ್‌ನಿಂದ ಕರೆ ಮಾಡಿ, ಗಡ್ಕರಿ ಅವರ ನಿವಾಸವನ್ನು 10 ನಿಮಿಷಗಳಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರು ಶಂಕಿತನನ್ನು ಪತ್ತೆಹಚ್ಚಿ ನಾಗ್ಪುರದ ಬಿಮಾ ದವಾಖಾನಾ ಬಳಿ ಬಂಧಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಮತ್ತಷ್ಟು ಓದಿ: ಸಿಗಂದೂರು ಸೇತುವೆ ಉದ್ಘಾಟನೆ; ನಿತಿನ್ ಗಡ್ಕರಿ ವಿರುದ್ಧ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಆಗಸ್ಟ್ 2 ರಂದು, ಗಡ್ಕರಿ ಆಂಧ್ರಪ್ರದೇಶದ ಮಂಗಳಗಿರಿಯಲ್ಲಿ 29 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಒಟ್ಟು 272 ಕಿ.ಮೀ. ಉದ್ದದ ಈ ಯೋಜನೆಗಳು 5,233 ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆಯನ್ನು ಪ್ರತಿನಿಧಿಸುತ್ತವೆ ಮತ್ತು ಈ ಪ್ರದೇಶದ ಮೂಲಸೌಕರ್ಯವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿವೆ.

ಅಧಿಕಾರಿಗಳು ಗಡ್ಕರಿ ಅವರ ನಿವಾಸದ ಸುತ್ತಲೂ ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ ಮತ್ತು ಬೆದರಿಕೆಯ ಹಿಂದಿನ ಉದ್ದೇಶದ ಕುರಿತು ಹೆಚ್ಚಿನ ವಿವರಗಳನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿದ್ದಾರೆ. ಬಾಂಬ್ ಬೆದರಿಕೆ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದರೂ, ಸಚಿವರ ಸುರಕ್ಷತೆಯನ್ನು ಖಾತರಿಪಡಿಸುವುದು ಮತ್ತು ಇಂತಹ ಆತಂಕಕಾರಿ ಘಟನೆಗಳಿಂದ ಉಂಟಾಗುವ ಭದ್ರತಾ ಕಾಳಜಿಗಳನ್ನು ಪರಿಹರಿಸುವತ್ತ ಗಮನ ಹರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ