
ಮುಂಬೈ, ಆಗಸ್ಟ್ 03: ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರೊಬ್ಬನನ್ನು ಬಂಧಿಸಲಾಗಿದೆ. ಗಡ್ಕರಿಯವರ ನಾಗ್ಪುರ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಭಾನುವಾರ ಬೆಳಗ್ಗೆ 8.46 ಕ್ಕೆ ಬಂದ ಬಾಂಬ್ ಬೆದರಿಕೆ ಬಂದಿತ್ತು, ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.
ಪೊಲೀಸರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಪ್ರತಾಪ್ ನಗರ ಪೊಲೀಸರಿಗೆ ಮಾಹಿತಿಯನ್ನು ರವಾನಿಸಲಾಯಿತು. ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಬೆದರಿಕೆ ಹಾಕಿದ ಸ್ವಲ್ಪ ಸಮಯದ ನಂತರ ಶಂಕಿತ ಉಮೇಶ್ ವಿಷ್ಣು ರಾವತ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಈಗ ದೃಢಪಡಿಸಿದ್ದಾರೆ.
ಮಹಲ್‌ನ ತುಳಸಿ ಬಾಗ್ ರಸ್ತೆಯ ನಿವಾಸಿಯಾದ ರಾವತ್, ಮೆಡಿಕಲ್ ಚೌಕ್ ಬಳಿಯ ಮದ್ಯದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆತ ತನ್ನ ಮೊಬೈಲ್ ಫೋನ್‌ನಿಂದ ಕರೆ ಮಾಡಿ, ಗಡ್ಕರಿ ಅವರ ನಿವಾಸವನ್ನು 10 ನಿಮಿಷಗಳಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರು ಶಂಕಿತನನ್ನು ಪತ್ತೆಹಚ್ಚಿ ನಾಗ್ಪುರದ ಬಿಮಾ ದವಾಖಾನಾ ಬಳಿ ಬಂಧಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
ಮತ್ತಷ್ಟು ಓದಿ: ಸಿಗಂದೂರು ಸೇತುವೆ ಉದ್ಘಾಟನೆ; ನಿತಿನ್ ಗಡ್ಕರಿ ವಿರುದ್ಧ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಆಗಸ್ಟ್ 2 ರಂದು, ಗಡ್ಕರಿ ಆಂಧ್ರಪ್ರದೇಶದ ಮಂಗಳಗಿರಿಯಲ್ಲಿ 29 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಒಟ್ಟು 272 ಕಿ.ಮೀ. ಉದ್ದದ ಈ ಯೋಜನೆಗಳು 5,233 ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆಯನ್ನು ಪ್ರತಿನಿಧಿಸುತ್ತವೆ ಮತ್ತು ಈ ಪ್ರದೇಶದ ಮೂಲಸೌಕರ್ಯವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿವೆ.
ಅಧಿಕಾರಿಗಳು ಗಡ್ಕರಿ ಅವರ ನಿವಾಸದ ಸುತ್ತಲೂ ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ ಮತ್ತು ಬೆದರಿಕೆಯ ಹಿಂದಿನ ಉದ್ದೇಶದ ಕುರಿತು ಹೆಚ್ಚಿನ ವಿವರಗಳನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿದ್ದಾರೆ.
ಬಾಂಬ್ ಬೆದರಿಕೆ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದರೂ, ಸಚಿವರ ಸುರಕ್ಷತೆಯನ್ನು ಖಾತರಿಪಡಿಸುವುದು ಮತ್ತು ಇಂತಹ ಆತಂಕಕಾರಿ ಘಟನೆಗಳಿಂದ ಉಂಟಾಗುವ ಭದ್ರತಾ ಕಾಳಜಿಗಳನ್ನು ಪರಿಹರಿಸುವತ್ತ ಗಮನ ಹರಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ