Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​

ದೆಹಲಿ ಹೈಕೋರ್ಟ್​​ಗೆ ಬಾಂಬ್​​ ಬೆದರಿಕೆ ಹಾಕಿದ್ದು, ಹೈಕೋರ್ಟ್​​​​​ ಮುಂದೆ ಪೊಲೀಸ್​​​ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಈ ಹಿಂದೆ ದೆಹಲಿ ಶಾಲೆಯೊಂದಕ್ಕೆ ಇಂತಹ ಬಾಂಬ್​​​ ಬೆದರಿಕೆ ಹಾಕಲಾಗಿತ್ತು. ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Feb 15, 2024 | 12:59 PM

ದೆಹಲಿ, ಫೆ.15: ದೆಹಲಿ ಹೈಕೋರ್ಟ್​​ಗೆ (Delhi High Court) ಬಾಂಬ್​​​ ಬೆದರಿಕೆ (bomb threat) ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್​​ನಲ್ಲಿ ಹೈ ಅಲರ್ಟ್​​ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ರಿಜಿಸ್ಟ್ರಾರ್ ಜನರಲ್‌ಗೆ ಮೇಲ್​​ ಮೂಲಕ ಬಾಂಬ್​​​ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್​​​ ಮುಂದೆ ಬಾಂಬ್​​​ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ. ದೆಹಲಿಯ ನಗರದ ಒಳಗೆ ಬರುವ ಪ್ರತಿಜ್ಞೆ ಮಾಡಿರುವ ರೈತರನ್ನು ಪೊಲೀಸರು ತಡೆದಿದ್ದು, ದೊಡ್ಡ ಭದ್ರತೆಯನ್ನು ನೀಡಲಾಗಿದೆ. ಇದರ ಜತೆಗೆ ದೆಹಲಿಯ ಸಚಿವರು ಈ ಬೆದರಿಕೆ ಮೇಲ್​​​ ಬಂದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಹೇಳಿದೆ.

ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಹೈಕೋರ್ಟ್ ಆವರಣವನ್ನು ಕೂಲಂಕುಷವಾಗಿ ಶೋಧಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಶಾಲೆಗೆ ಬಾಂಬ್​ ಬೆದರಿಕೆ ಕರೆ, ಮಕ್ಕಳ ಸ್ಥಳಾಂತರ

ದಕ್ಷಿಣ ದೆಹಲಿಯ ಶಾಲೆಯಲ್ಲಿ ಬಾಂಬ್ ಬೆದರಿಕೆ

ದೆಹಲಿಯ ಸಾಕೇತ್‌ನಲ್ಲಿರುವ ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಬಾಂಬ್​​​ ಬೆದರಿಕೆ ಬಂದಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಯಭೀತರಾಗಿದ್ದರು. ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿತ್ತು. ಈ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್​​ನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಫೆ.13ಕ್ಕೆ ಬಾಂಬ್​​​ ಸ್ಫೋಟಿಸುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್