ದೆಹಲಿ: ಹರ್ಯಾಣದ ಸೋನಿಪತ್ ಜಿಲ್ಲೆಯ ಗೊಹಾನಾ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಬಾಂಬ್ (Bomb Threat) ಇರುವ ಬಗ್ಗೆ ಮಾಹಿತಿ ಲಭಿಸಿದ್ದು, ಪೊಲೀಸರು ಈಗ ಶೋಧ ಕಾರ್ಯ ನಡೆಸುತ್ತಿದ್ದಾರೆ. ರೈಲು ಜಿಂದ್‌ನಿಂದ ರೋಹ್ಟಕ್‌ಗೆ ಪ್ರಯಾಣಿಸುತ್ತಿದ್ದು, ಬಾಂಬ್‌ನ ಬಗ್ಗೆ ಮಾಹಿತಿ ಪಡೆದ ನಂತರ ಗೊಹಾನಾ ನಿಲ್ದಾಣದಲ್ಲಿ ನಿಲ್ಲಿಸಲಾಯಿತು. ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಲಾಗಿದ್ದು, ರೈಲಿನಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.