ಅಮಿತಾಭ್​ ಬಚ್ಚನ್​ ಮನೆ ಹಾಗೂ ಮುಂಬೈನ 3 ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇರಿಸಿರುವುದಾಗಿ ಪೊಲೀಸರಿಗೆ ಕರೆ ಮಾಡಿದ ಅನಾಮಿಕ

ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಮಾಡಿ ಮಾತನಾಡಿದ ಅನಾಮಿಕ ವ್ಯಕ್ತಿ ಈ ರೀತಿಯ ಬೆದರಿಕೆಯೊಡ್ಡಿದ್ದು, ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್ ಮನೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಬೈಕುಲಾ, ದಾದರ್ ರೈಲ್ವೇ ನಿಲ್ದಾಣಗಳಲ್ಲಿ ಸ್ಫೋಟಕ ಇರಿಸಿರುವುದಾಗಿ ಹೇಳಿದ್ದಾನೆ.

ಅಮಿತಾಭ್​ ಬಚ್ಚನ್​ ಮನೆ ಹಾಗೂ ಮುಂಬೈನ 3 ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇರಿಸಿರುವುದಾಗಿ ಪೊಲೀಸರಿಗೆ ಕರೆ ಮಾಡಿದ ಅನಾಮಿಕ
ಅಮಿತಾಭ್ ಬಚ್ಚನ್
Follow us
| Updated By: Digi Tech Desk

Updated on:Aug 07, 2021 | 10:54 AM

ಮುಂಬೈ: ಮುಂಬೈ ಪೊಲೀಸರಿಗೆ ನಿನ್ನೆ (ಆಗಸ್ಟ್ 06, ಶುಕ್ರವಾರ) ರಾತ್ರಿ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಜುಹುನಲ್ಲಿರುವ ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮುಂಬೈನ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಆಗಂತುಕರು ತಿಳಿಸಿದ್ದಾರೆ. ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಮಾಡಿ ಮಾತನಾಡಿದ ಅನಾಮಿಕ ವ್ಯಕ್ತಿ ಈ ರೀತಿಯ ಬೆದರಿಕೆಯೊಡ್ಡಿದ್ದು, ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್ ಮನೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಬೈಕುಲಾ, ದಾದರ್ ರೈಲ್ವೇ ನಿಲ್ದಾಣಗಳಲ್ಲಿ ಸ್ಫೋಟಕ ಇರಿಸಿರುವುದಾಗಿ ಹೇಳಿದ್ದಾನೆ.

ತಕ್ಷಣ ಎಚ್ಚೆತ್ತ ಮುಂಬೈ ಪೊಲೀಸರು ಕರೆಯನ್ನಾಧರಿಸಿ ಹುಡುಕಾಟ ನಡೆಸಿದರಾದರೂ ಯಾವುದೇ ಸ್ಫೋಟಕ, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಮಟ್ಟದ ಅಧಿಕಾರಿಯೊಬ್ಬರು, ಬೆದರಿಕೆ ಕರೆ ಬಂದ ತಕ್ಷಣವೇ ರೈಲ್ವೇ ಪೊಲೀಸ್, ರೈಲ್ವೇ ರಕ್ಷಣಾ ಸಿಬ್ಬಂದಿ ಹಾಗೂ ಬಾಂಬ್​ ಪತ್ತೆ ಮತ್ತು ನಿಷ್ಕ್ರಿಯ ದಳಕ್ಕೆ ಮಾಹಿತಿ ನೀಡಿದೆವು. ಶ್ವಾನದಳ ಹಾಗೂ ಸ್ಥಳೀಯ ಪೊಲೀಸರು ಕೂಡಾ ತಕ್ಷಣವೇ ಸ್ಥಳಕ್ಕಾಗಮಿಸಿ ಹುಡುಕಾಟ ನಡೆಸಿದರು ಎಂದು ಹೇಳಿದ್ದಾರೆ.

ಯಾವ ಸ್ಥಳಗಳಲ್ಲೂ ಅನುಮಾನಸ್ಪದ ವಸ್ತು ಅಥವಾ ಸ್ಫೋಟಕ ಇಟ್ಟ ಕುರುಹು ಕಂಡುಬಂದಿಲ್ಲವಾದರೂ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

(Bomb threat call causes scare at 3 Mumbai railway stations and Amitabh Bachchan bungalow)

ಇದನ್ನೂ ಓದಿ: ಬಿಜೆಡಿ ಶಾಸಕಿಯ ಎರಡು ಮನೆಗಳ ಮೇಲೆ ಕಚ್ಚಾ ಬಾಂಬ್​ ದಾಳಿ; ನಾಲ್ವರಿಗೆ ಗಾಯ 

Naxals Attack: ಛತ್ತೀಸ್​ಗಢದಲ್ಲಿ ನಕ್ಸಲರಿಂದ ಎಸ್​ಯುವಿ ಕಾರು ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

Published On - 9:39 am, Sat, 7 August 21

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ