ಮುಂಬೈ: ಮುಂಬೈ ಪೊಲೀಸರಿಗೆ ನಿನ್ನೆ (ಆಗಸ್ಟ್ 06, ಶುಕ್ರವಾರ) ರಾತ್ರಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜುಹುನಲ್ಲಿರುವ ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮುಂಬೈನ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಆಗಂತುಕರು ತಿಳಿಸಿದ್ದಾರೆ. ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಮಾತನಾಡಿದ ಅನಾಮಿಕ ವ್ಯಕ್ತಿ ಈ ರೀತಿಯ ಬೆದರಿಕೆಯೊಡ್ಡಿದ್ದು, ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್ ಮನೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಬೈಕುಲಾ, ದಾದರ್ ರೈಲ್ವೇ ನಿಲ್ದಾಣಗಳಲ್ಲಿ ಸ್ಫೋಟಕ ಇರಿಸಿರುವುದಾಗಿ ಹೇಳಿದ್ದಾನೆ.
ತಕ್ಷಣ ಎಚ್ಚೆತ್ತ ಮುಂಬೈ ಪೊಲೀಸರು ಕರೆಯನ್ನಾಧರಿಸಿ ಹುಡುಕಾಟ ನಡೆಸಿದರಾದರೂ ಯಾವುದೇ ಸ್ಫೋಟಕ, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಮಟ್ಟದ ಅಧಿಕಾರಿಯೊಬ್ಬರು, ಬೆದರಿಕೆ ಕರೆ ಬಂದ ತಕ್ಷಣವೇ ರೈಲ್ವೇ ಪೊಲೀಸ್, ರೈಲ್ವೇ ರಕ್ಷಣಾ ಸಿಬ್ಬಂದಿ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಕ್ಕೆ ಮಾಹಿತಿ ನೀಡಿದೆವು. ಶ್ವಾನದಳ ಹಾಗೂ ಸ್ಥಳೀಯ ಪೊಲೀಸರು ಕೂಡಾ ತಕ್ಷಣವೇ ಸ್ಥಳಕ್ಕಾಗಮಿಸಿ ಹುಡುಕಾಟ ನಡೆಸಿದರು ಎಂದು ಹೇಳಿದ್ದಾರೆ.
ಯಾವ ಸ್ಥಳಗಳಲ್ಲೂ ಅನುಮಾನಸ್ಪದ ವಸ್ತು ಅಥವಾ ಸ್ಫೋಟಕ ಇಟ್ಟ ಕುರುಹು ಕಂಡುಬಂದಿಲ್ಲವಾದರೂ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Bomb threat call causes scare at 3 Mumbai railway stations, Amitabh Bachchan’s bungalow; security beefed up at these locations: Police
— Press Trust of India (@PTI_News) August 7, 2021
(Bomb threat call causes scare at 3 Mumbai railway stations and Amitabh Bachchan bungalow)
ಇದನ್ನೂ ಓದಿ:
ಬಿಜೆಡಿ ಶಾಸಕಿಯ ಎರಡು ಮನೆಗಳ ಮೇಲೆ ಕಚ್ಚಾ ಬಾಂಬ್ ದಾಳಿ; ನಾಲ್ವರಿಗೆ ಗಾಯ
Naxals Attack: ಛತ್ತೀಸ್ಗಢದಲ್ಲಿ ನಕ್ಸಲರಿಂದ ಎಸ್ಯುವಿ ಕಾರು ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ
Published On - 9:39 am, Sat, 7 August 21