Bomb Threat: ದೆಹಲಿಯ 4 ಶಾಲೆಗಳಿಗೆ ಬಾಂಬ್ ಬೆದರಿಕೆ, ವಾರದಲ್ಲಿ ಎರಡನೇ ಘಟನೆ
ದೆಹಲಿಯ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದು, ಅನುಮಾನಾಸ್ಪದವಾಗಿ ಏನೂ ಕೂಡ ಕಂಡುಬಂದಿಲ್ಲ. ಸೋಮವಾರ ದೆಹಲಿಯ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು, ಇ-ಮೇಲ್ ಮಾಡಿದವರು 30 ಸಾವಿರ ಯುಎಸ್ ಡಾಲರ್ ಬೇಡಿಕೆ ಇಟ್ಟಿದ್ದರು. ಕೂಲಂಕುಷವಾಗಿ ಪರಿಶೀಲನೆ ಮಾಡಿದ ಬಳಿಕ ಸುಳ್ಳು ಬೆದರಿಕೆ ಎಂಬುದು ತಿಳಿದುಬಂದಿದೆ.
ದೆಹಲಿಯ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ(Bomb Threat) ಬಂದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದು, ಅನುಮಾನಾಸ್ಪದವಾಗಿ ಏನೂ ಕೂಡ ಕಂಡುಬಂದಿಲ್ಲ. ಸೋಮವಾರ ದೆಹಲಿಯ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು, ಇ-ಮೇಲ್ ಮಾಡಿದವರು 30 ಸಾವಿರ ಯುಎಸ್ ಡಾಲರ್ ಬೇಡಿಕೆ ಇಟ್ಟಿದ್ದರು. ಕೂಲಂಕುಷವಾಗಿ ಪರಿಶೀಲನೆ ಮಾಡಿದ ಬಳಿಕ ಸುಳ್ಳು ಬೆದರಿಕೆ ಎಂಬುದು ತಿಳಿದುಬಂದಿದೆ.
ಮೇ ತಿಂಗಳಲ್ಲಿ, ನಗರದ 200 ಕ್ಕೂ ಹೆಚ್ಚು ಶಾಲೆಗಳು, ಆಸ್ಪತ್ರೆಗಳು ಮತ್ತು ಪ್ರಮುಖ ಸರ್ಕಾರಿ ಸ್ಥಾಪನೆಗಳು ಇದೇ ರೀತಿಯ ಬೆದರಿಕೆಯನ್ನು ಪಡೆದಿವೆ. ಮೇಲ್ ಅನ್ನು ವಿಪಿಎನ್ ಬಳಸಿ ಕಳುಹಿಸಿರುವುದರಿಂದ ಪ್ರಕರಣವನ್ನು ಇನ್ನೂ ಪರಿಹರಿಸಲಾಗಿಲ್ಲ. ಆಗ ಕಳುಹಿಸುವವರ ಐಪಿ ವಿಳಾಸವನ್ನು ಪಡೆಯಲು ಪೊಲೀಸರು ಕೇಂದ್ರ ಏಜೆನ್ಸಿಗಳ ಸಹಾಯವನ್ನೂ ಪಡೆದಿದ್ದರು.
ಅಗ್ನಿಶಾಮಕ ದಳ, ಪೊಲೀಸ್ ಮತ್ತು ಬಾಂಬ್ ಪತ್ತೆ ಘಟಕಗಳ ತಂಡಗಳು, ಶ್ವಾನ ದಳಗಳೊಂದಿಗೆ ಸಂಪೂರ್ಣ ತಪಾಸಣೆ ನಡೆಸಲು ಸ್ಥಳಗಳಿಗೆ ಕಳುಹಿಸಲಾಗಿದೆ. ಶಾಲೆಗಳ ಅಧಿಕಾರಿಗಳು ತಮ್ಮ ಮಕ್ಕಳನ್ನು ತರಗತಿಗಳಿಗೆ ಕಳುಹಿಸದಂತೆ ಪೋಷಕರಿಗೆ ಸಂದೇಶಗಳನ್ನು ಕಳುಹಿಸಿದ್ದಾರೆ. ತಪಾಸಣೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ನಿಮ್ಮ ಶಾಲೆಯ ಆವರಣದಲ್ಲಿ ಸ್ಫೋಟಕಗಳಿವೆ, ವಿದ್ಯಾರ್ಥಿಗಳು ನಿತ್ಯ ಶಾಲೆಗೆ ಬಂದಾಗ ಅವರ ಬ್ಯಾಗ್ಗಳನ್ನು ನೀವು ಚೆಕ್ ಮಾಡುವುದಿಲ್ಲ ಎಂಬುದು ತಿಳಿದಿದೆ ಎಂಬುದಾಗಿ ಬರೆದಿತ್ತು.
ಮತ್ತಷ್ಟು ಓದಿ: Bomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ
ಅಂದು ಇದೇ ವೇಳೆ ದೆಹಲಿ ಮುಖ್ಯಮಂತ್ರಿ ಅತಿಶಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ದೆಹಲಿಯಲ್ಲಿ ದಿನನಿತ್ಯದ ಸುಲಿಗೆ, ಕೊಲೆ, ಗುಂಡಿನ ದಾಳಿಯ ನಂತರ ಈಗ ಶಾಲೆಗಳ ಮೇಲೆ ಬಾಂಬ್ ಸ್ಫೋಟದ ಬೆದರಿಕೆಗಳು ಬರುತ್ತಿವೆ. ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹಿಂದೆಂದೂ ಕೆಟ್ಟಿರಲಿಲ್ಲ. ಬಿಜೆಪಿ ಆಡಳಿತದ ಕೇಂದ್ರ ಸರ್ಕಾರ ಸುರಕ್ಷತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿ, ದೆಹಲಿಯ ಜನರು ಕಾನೂನು ಮತ್ತು ಸುವ್ಯವಸ್ಥೆಯ ಕೆಟ್ಟ ಸ್ಥಿತಿಯನ್ನು ಈ ರೀತಿ ಹಿಂದೆಂದೂ ನೋಡಿರಲಿಲ್ಲ ಎಂದು ಹೇಳಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ