Bomb Threat: ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ
ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯ ವಿಮಾನ ನಿಲ್ದಾಣ, ಶಾಲೆಗಳು ಹಾಗೂ ಆಸ್ಪತ್ರೆಗಳಿಗೆ ಬೆದರಿಕೆ ಕರೆ ನಿರಂತರವಾಗಿ ಬರುತ್ತಿವೆ.
ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ(Bomb Threat)ಯ ಇ-ಮೇಲ್ಗಳು ಬಂದಿದೆ. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಬಂದಿದೆ. ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
ಏತನ್ಮಧ್ಯೆ, ಬೆದರಿಕೆ ಮೇಲ್‌ನ ಮೂಲವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ರಾಷ್ಟ್ರ ರಾಜಧಾನಿಯ ನಾಲ್ಕು ಆಸ್ಪತ್ರೆಗಳಿಗೆ ಪೊಲೀಸ್ ತಂಡಗಳನ್ನು ರವಾನಿಸಲಾಗಿದೆ.
ಭಾನುವಾರ ದೆಹಲಿಯ 10 ಆಸ್ಪತ್ರೆಗಳು ಮತ್ತು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಪೊಲೀಸರು ಬೆದರಿಕೆಯನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಮೇ 1 ರಂದು, ದೆಹಲಿ-ಎನ್‌ಸಿಆರ್‌ನ 150 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು.
ಮತ್ತಷ್ಟು ಓದಿ: Bomb Threat: ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ
ರಷ್ಯಾದ ಇ-ಮೇಲ್ ಸೇವೆಯನ್ನು ಬಳಸಿಕೊಂಡು ಶಾಲೆಗಳಿಗೆ ಬೆದರಿಕೆಗಳನ್ನು ಕಳುಹಿಸಲಾಗಿದೆ. ದೆಹಲಿ ಪಬ್ಲಿಕ್ ಸ್ಕೂಲ್‌ನ (ಡಿಪಿಎಸ್) ದ್ವಾರಕಾ ಮತ್ತು ವಸಂತ್ ಕುಂಜ್ ಘಟಕಗಳು, ಪೂರ್ವ ಮಯೂರ್ ವಿಹಾರ್‌ನಲ್ಲಿರುವ ಮದರ್ ಮೇರಿಸ್ ಶಾಲೆ, ಸಂಸ್ಕೃತಿ ಶಾಲೆ, ಪುಷ್ಪ್ ವಿಹಾರ್‌ನ ಅಮಿಟಿ ಶಾಲೆ ಮತ್ತು ನೈಋತ್ಯ ದೆಹಲಿಯ ಡಿಎವಿ ಶಾಲೆ ಸೇರಿದಂತೆ 100 ಶಾಲೆಗಳಿಗೆ ಬೆದರಿಕೆ ಬಂದಿತ್ತು. ನೋಯ್ಡಾದಲ್ಲಿ, ಡಿಪಿಎಸ್ ಮತ್ತು ಅಪೆಜಾಯ್ ಸ್ಕೂಲ್‌ಗೂ ಇದೇ ರೀತಿಯ ಬೆದರಿಕೆಗಳು ಬಂದಿದ್ದವು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ