ಇಂಡಿಗೋ ವಿಮಾನದಲ್ಲಿ ಬಾಂಬ್​ ಇಟ್ಟಿರುವುದಾಗಿ ಮುಂಬೈ ಏರ್​ಪೋರ್ಟ್​ಗೆ ಬೆದರಿಕೆ ಕರೆ

|

Updated on: Feb 13, 2024 | 2:43 PM

ಮುಂಬೈ ವಿಮಾನ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ. ಚೆನ್ನೈನಿಂದ ಹೊರಟಿರುವ ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದರು. ಚೆನ್ನೈನಿಂದ ಮುಂಬೈಗೆ ಬಂದಿಳಿದ 6E-5188 ವಿಮಾನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇಂಡಿಗೋ ವಿಮಾನದಲ್ಲಿ ಬಾಂಬ್​ ಇಟ್ಟಿರುವುದಾಗಿ ಮುಂಬೈ ಏರ್​ಪೋರ್ಟ್​ಗೆ ಬೆದರಿಕೆ ಕರೆ
ಇಂಡಿಗೋ
Image Credit source: Mint
Follow us on

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ(IndiGo Flight)ದಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬರು ಮುಂಬೈ ಏರ್​ಪೋರ್ಟ್​ಗೆ ಬೆದರಿಕೆ ಕರೆ ಮಾಡಿದ್ದಾರೆ. A321 ನಿಯೋ ವಿಮಾನದ ಪೈಲಟ್‌ಗಳು ತಮ್ಮ ಗಮ್ಯಸ್ಥಾನದಿಂದ 40 ಕಿಲೋಮೀಟರ್‌ಗಿಂತಲೂ ಕಡಿಮೆ ದೂರದಲ್ಲಿದ್ದರು. ಬೆಳಗ್ಗೆ 8.47ರ ಸುಮಾರಿಗೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್​ ಆಗಿತ್ತು, ಬಳಿಕ ಬಾಂಬ್ ಸ್ಕ್ವ್ಯಾಡ್ ತಕ್ಷಣವೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ವಿಮಾನದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ.

ಚೆನ್ನೈನಿಂದ ಮುಂಬೈಗೆ ಹೊರಟಿದ್ದ 6E 5188 ವಿಮಾನದಲ್ಲಿ ಬಾಂಬ್ ಇದೆ ಎಂದು ಏರ್​ಪೋರ್ಟ್​ಗೆ ಕರೆ ಬಂದಿರುವ ವಿಚಾರವನ್ನು ಇಂಡಿಗೋ ಒಪ್ಪಿಕೊಂಡಿದೆ. ಎಲ್ಲಾ ಅಗತ್ಯ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಯಿತು ಮತ್ತು ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ದೂರದ ಪ್ರದೇಶಕ್ಕೆ ಕೊಂಡೊಯ್ಯಲಾಯಿತು. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ, ವಿಮಾನವನ್ನು ಟರ್ಮಿನಲ್ ಪ್ರದೇಶಕ್ಕೆ ಹಿಂತಿರುಗಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಸ್ಪೈಸ್​ಜೆಟ್ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

ಮತ್ತೊಂದು ಘಟನೆ

ಸ್ಪೈಸ್​ಜೆಟ್ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ
ದರ್ಭಾಂಗಾ-ದೆಹಲಿ ಸ್ಪೈಸ್‌ಜೆಟ್‌ ವಿಮಾನದಲ್ಲಿ (SpiceJet flight) ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದ ಕಾರಣ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI Airport) ಬುಧವಾರ ರಾತ್ರಿ ಕಟ್ಟೆಚ್ಚರ ವಹಿಸಲಾಯಿತು.

ವಿಮಾನದಲ್ಲಿದ್ದ 200ಕ್ಕೂ ಆತಂಕಕ್ಕೀಡಾದರು. ಬೆದರಿಕೆ ಸಂದೇಶ ದೊರೆತ ಬೆನ್ನಲ್ಲೇ ವಿಮಾನದಿಂದ ಪ್ರಯಾಣಿಕರನ್ನು ಇಳಿಸಿ ಸಂಪೂರ್ಣ ತಪಾಸಣೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಯಿತು. ನಂತರ ವಿಮಾನ ನಿಲ್ದಾಣದಲ್ಲಿ ಭದ್ರತಾ ಕಟ್ಟೆಚ್ಚರ ಘೋಷಿಸಲಾಯಿತು.

ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಎರಡು ದಿನಗಳ ಮುನ್ನವೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಆದಾಗ್ಯೂ, ಸ್ಪೈಸ್​ಜೆಟ್ ವಿಮಾನದಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ನಂತರ ಶೋಧ ನಡೆಸಿದಾಗ ಅನುಮಾನಾಸ್ಪದ ಏನೂ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಪರಿಗಣಿಸಲಾಯಿತು. ಬಿಹಾರದ ದರ್ಭಾಂಗಾದಿಂದ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಬುಕಿಂಗ್ ಕಚೇರಿಗೆ ಕರೆ ಬಂದಿತ್ತು ಎಂದು ಸ್ಪೈಸ್​ಜೆಟ್ ಏರ್‌ಲೈನ್ಸ್ ತಿಳಿಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ