AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಯಮತ್ತೂರು: ಬಿಜೆಪಿ ಕಚೇರಿ ಸೇರಿದಂತೆ ಹಲವೆಡೆ ಪೆಟ್ರೋಲ್ ಬಾಂಬ್​ಗಳನ್ನು ಎಸೆಯುವುದಾಗಿ ಪೊಲೀಸರಿಗೆ ಬೆದರಿಕೆ

ತಮಿಳುನಾಡಿನ ಬಿಜೆಪಿ ಕಚೇರಿ ಸೇರಿದಂತೆ ಹಲವೆಡೆ ಪೆಟ್ರೋಲ್ ಬಾಂಬ್ ಎಸೆಯುವುದಾಗಿ ಕೊಯಮತ್ತೂರು ಪೊಲೀಸರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕ್ರೈಮ್ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ ಪೋರ್ಟಲ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಬಿಜೆಪಿ ಕಚೇರಿಗಳು ಸೇರಿದಂತೆ ಅನೇಕ ಸ್ಥಳಗಳಲ್ಲಿ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗುವುದು ಎಂದು ವರದಿಯಾಗಿದೆ.

ಕೊಯಮತ್ತೂರು: ಬಿಜೆಪಿ ಕಚೇರಿ ಸೇರಿದಂತೆ ಹಲವೆಡೆ ಪೆಟ್ರೋಲ್ ಬಾಂಬ್​ಗಳನ್ನು ಎಸೆಯುವುದಾಗಿ ಪೊಲೀಸರಿಗೆ ಬೆದರಿಕೆ
ಪೊಲೀಸ್Image Credit source: India Today
ನಯನಾ ರಾಜೀವ್
|

Updated on: Nov 12, 2023 | 3:38 PM

Share

ಬಿಜೆಪಿ ಕಚೇರಿ ಸೇರಿದಂತೆ ಹಲವೆಡೆ ಪೆಟ್ರೋಲ್ ಬಾಂಬ್ ಎಸೆಯುವುದಾಗಿ ಕೊಯಮತ್ತೂರು ಪೊಲೀಸರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕ್ರೈಮ್ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ ಪೋರ್ಟಲ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಬಿಜೆಪಿ ಕಚೇರಿಗಳು ಸೇರಿದಂತೆ ಅನೇಕ ಸ್ಥಳಗಳಲ್ಲಿ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗುವುದು ಎಂದು ವರದಿಯಾಗಿದೆ.

ಶನಿವಾರ ರಾತ್ರಿ CCTNS ಪೋರ್ಟಲ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಮೇಲ್ ಕಳುಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವನ್ನು ಖಂಡಿಸಲು ಕೊಯಮತ್ತೂರು ನಗರದ ಹಲವೆಡೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗುವುದು ಎಂದು ವ್ಯಕ್ತಿ ಹೇಳಿಕೊಂಡಿದ್ದಾನೆ.

ಈಗಾಗಲೇ ದೀಪಾವಳಿ ಸಂದರ್ಭದಲ್ಲಿ ಭದ್ರತೆಯನ್ನು ಬಿಗಿಗೊಳಿಸಿರುವ ಕೊಯಮತ್ತೂರು ನಗರ ಪೊಲೀಸರು ಇದೀಗ ಬೆದರಿಕೆ ಇಮೇಲ್ ಕುರಿತು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: Bomb Threat To Delhi School: ಶಾಲೆಯ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂಬ ಬೆದರಿಕೆಯ ಇ-ಮೇಲ್: ಮಕ್ಕಳ ಸ್ಥಳಾಂತರ

ಅಕ್ಟೋಬರ್ 23ರಂದು ಕೊಯಮತ್ತೂರಿನ ಉಕ್ಕಡಂನಲ್ಲಿ ನಡೆದ ಕಾರ್ ಸ್ಫೋಟದಲ್ಲಿ ದೇವಸ್ಥಾನದ ಪಕ್ಕದಲ್ಲಿ ಕಾರಿನಲ್ಲಿ ಐಇಡಿ ಅಳವಡಿಸಿದ್ದ ಜಮೇಶಾ ಮುಬೀನ್ ಮೃತಪಟ್ಟಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದ್ದು, ಇದುವರೆಗೆ 14 ಶಂಕಿತರನ್ನು ಬಂಧಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ