
ಬಿಜೆಪಿ ಕಚೇರಿ ಸೇರಿದಂತೆ ಹಲವೆಡೆ ಪೆಟ್ರೋಲ್ ಬಾಂಬ್ ಎಸೆಯುವುದಾಗಿ ಕೊಯಮತ್ತೂರು ಪೊಲೀಸರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕ್ರೈಮ್ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ ಪೋರ್ಟಲ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಬಿಜೆಪಿ ಕಚೇರಿಗಳು ಸೇರಿದಂತೆ ಅನೇಕ ಸ್ಥಳಗಳಲ್ಲಿ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗುವುದು ಎಂದು ವರದಿಯಾಗಿದೆ.
ಶನಿವಾರ ರಾತ್ರಿ CCTNS ಪೋರ್ಟಲ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಮೇಲ್ ಕಳುಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವನ್ನು ಖಂಡಿಸಲು ಕೊಯಮತ್ತೂರು ನಗರದ ಹಲವೆಡೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗುವುದು ಎಂದು ವ್ಯಕ್ತಿ ಹೇಳಿಕೊಂಡಿದ್ದಾನೆ.
ಈಗಾಗಲೇ ದೀಪಾವಳಿ ಸಂದರ್ಭದಲ್ಲಿ ಭದ್ರತೆಯನ್ನು ಬಿಗಿಗೊಳಿಸಿರುವ ಕೊಯಮತ್ತೂರು ನಗರ ಪೊಲೀಸರು ಇದೀಗ ಬೆದರಿಕೆ ಇಮೇಲ್ ಕುರಿತು ತನಿಖೆ ಆರಂಭಿಸಿದ್ದಾರೆ.
ಮತ್ತಷ್ಟು ಓದಿ: Bomb Threat To Delhi School: ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿದ್ದೇವೆ ಎಂಬ ಬೆದರಿಕೆಯ ಇ-ಮೇಲ್: ಮಕ್ಕಳ ಸ್ಥಳಾಂತರ
ಅಕ್ಟೋಬರ್ 23ರಂದು ಕೊಯಮತ್ತೂರಿನ ಉಕ್ಕಡಂನಲ್ಲಿ ನಡೆದ ಕಾರ್ ಸ್ಫೋಟದಲ್ಲಿ ದೇವಸ್ಥಾನದ ಪಕ್ಕದಲ್ಲಿ ಕಾರಿನಲ್ಲಿ ಐಇಡಿ ಅಳವಡಿಸಿದ್ದ ಜಮೇಶಾ ಮುಬೀನ್ ಮೃತಪಟ್ಟಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆ ನಡೆಸುತ್ತಿದ್ದು, ಇದುವರೆಗೆ 14 ಶಂಕಿತರನ್ನು ಬಂಧಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ