ಕೇರಳ ಸರ್ಕಾರದ ಸಚಿವಾಲಯಕ್ಕೆ ಬಾಂಬ್​​​ ಬೆದರಿಕೆ

ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್​​​ ಬೆದರಿಕೆ ಬಂದಿದೆ. ಇದು ಕೆಲಹೊತ್ತು ಅಲ್ಲಿ ಆಂತಕವನ್ನು ಸೃಷ್ಟಿಸಿತ್ತು. ಕೇರಳ ಪೊಲೀಸ್ ಪ್ರಧಾನ ಕಚೇರಿಗೆ ದೂರವಾಣಿ ಕರೆ ಬಂದಿದ್ದು. ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ.

ಕೇರಳ ಸರ್ಕಾರದ ಸಚಿವಾಲಯಕ್ಕೆ ಬಾಂಬ್​​​ ಬೆದರಿಕೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 09, 2023 | 2:49 PM

ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್​​​ ಬೆದರಿಕೆ ಬಂದಿದೆ. ಇದು ಕೆಲಹೊತ್ತು ಅಲ್ಲಿ ಆಂತಕವನ್ನು ಸೃಷ್ಟಿಸಿತ್ತು. ಕೇರಳ ಪೊಲೀಸ್ ಪ್ರಧಾನ ಕಚೇರಿಗೆ ದೂರವಾಣಿ ಕರೆ ಬಂದಿದ್ದು. ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ಹೇಳಿದ್ದಾರೆ. ಈ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಾಂಬ್​​​ ಬೆದರಿಕೆ ಬಂದ ಕೂಡಲೇ ಎಲೆಕ್ಟ್ರಾನಿಕ್ ಡಿಟೆಕ್ಟರ್‌ಗಳು ಮತ್ತು ಸ್ನಿಫರ್ ಡಾಗ್‌ಗಳಿಂದ ಸಚಿವಾಲಯದ ಕಟ್ಟಡವನ್ನು ಪರಿಶೀಲನೆ ಮಾಡಲಾಗಿದೆ. ಸಚಿವಾಲಯದ ಹೊರಗೆ ನಿಲ್ಲಿಸಿರುವ ವಾಹನಗಳನ್ನು ಕೂಡ ಪರಿಶೀಲನೆ ಮಾಡಲಾಗಿದೆ.

ಇನ್ನು ಭದ್ರತಾ ಸಿಬ್ಬಂದಿಗಳು ಸಚಿವಾಲಯದ ಸುತ್ತ ಬಿಗಿ ಭದ್ರತೆಯನ್ನು ನೀಡಿದ್ದಾರೆ. ಇನ್ನು ಸಾರ್ವಜನಿಕರಿಗೂ ನಿರ್ಬಂಧವನ್ನು ಹೇರಳಲಾಗಿದೆ. ಇದರ ಜತೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬೆಳಿಗ್ಗೆ 11.10ರ ವೇಳೆ ಪೊಲೀಸ್ ನಿಯಂತ್ರಣ ಕೊಠಡಿ ಬೆದರಿಕೆ ಕರೆ ಬಂದಿದೆ. ಪೊಲೀಸರು ತಿಳಿಸಿರುವಂತೆ ಪ್ರಾಥಮಿಕವಾಗಿ ಇದನ್ನು ನಂಬಲು ಸಾಧ್ಯವಿಲ್ಲ. ಇಂತಹ ಅನೇಕ ಕಾಲ್ ಬರುತ್ತದೆ. ಅದರೂ ಸಚಿವಾಲಯಕ್ಕೆ ಬಾಂಬ್​​ ಬೆದರಿಕೆ ಬಂದಾಗ ಅದನ್ನು ನಿಭಾಯಿಸುವುದು ಅಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದ ಕಳಮಶ್ಶೇರಿ ಬಾಂಬ್ ಸ್ಫೋಟದ ಆರೋಪಿ ಅಸಾಧಾರಣ ಬುದ್ಧಿವಂತ: ಪೊಲೀಸ್

ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಹತ್ಯೆ ಮಾಡುವುದಾಗಿ ಕರೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರ್ನಾಕುಲಂನಲ್ಲಿ 7 ನೇ ತರಗತಿ ವಿದ್ಯಾರ್ಥಿಯಿಂದ ಈ ಕರೆ ಬಂದಿದೆ. ಇದನ್ನು ವಿದ್ಯಾರ್ಥಿಯ ಕುಟುಂಬದವರು ಚೇಷ್ಠೆಗಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಮ್ಯೂಸಿಯಂ ಪೊಲೀಸರು ಕೇರಳ ಪೊಲೀಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:28 pm, Thu, 9 November 23

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು