ನವದೆಹಲಿ: ಕಳಪೆ ಗುಣಮಟ್ಟ ಹೊಂದಿದೆ ಎಂಬ ಕಾರಣಕ್ಕೆ ಜಾನ್ಸನ್ ಆ್ಯಂಡ್ ಜಾನ್ಸನ್ (Johnson & Johnson) ಬೇಬಿ ಪೌಡರ್‌ನ ಉತ್ಪಾದನಾ ಲೈಸೆನ್ಸನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿತ್ತು. ಮಹಾರಾಷ್ಟ್ರ ಸರ್ಕಾರದ ಈ ಕ್ರಮವನ್ನು ಬಾಂಬೆ ಹೈಕೋರ್ಟ್ ಅಸಮಂಜಸ ಮತ್ತು ಅನ್ಯಾಯ ಎಂದು ಬಣ್ಣಿಸಿದೆ. ಅಲ್ಲದೆ, ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಉತ್ಪನ್ನಗಳನ್ನು ತಯಾರಿಸಲು, ಮಾರಾಟ ಮಾಡಲು ಮತ್ತು ವಿತರಿಸಲು ಕಂಪನಿಯ ಪರವಾನಗಿಯನ್ನು ರದ್ದುಗೊಳಿಸಿದ್ದ ಮಹಾರಾಷ್ಟ್ರ ಸರ್ಕಾರ (Maharashtra Government) ಹೊರಡಿಸಿದ್ದ 3 ಆದೇಶಗಳನ್ನು ಬಾಂಬೆ ನ್ಯಾಯಾಲಯ (Bombay High Court) ರದ್ದುಗೊಳಿಸಿದೆ.
ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯು ತನ್ನ ಬೇಬಿ ಪೌಡರ್ ಉತ್ಪನ್ನವನ್ನು ತಯಾರಿಸಲು, ಮಾರಾಟ ಮಾಡಲು ಮತ್ತು ವಿತರಿಸಲು ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್‌ಜಿ ದಿಗೆ ಅವರ ನ್ಯಾಯಪೀಠವು ಈ ಕಂಪನಿಯು 2022ರ ಸೆಪ್ಟೆಂಬರ್ 15ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿತು.
ಇದನ್ನೂ ಓದಿ: Johnson & Johnson: ಮಹಾರಾಷ್ಟ್ರದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಲೈಸೆನ್ಸ್ ರದ್ದು
ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯು ಮಹಾರಾಷ್ಟ್ರ ಸರ್ಕಾರದ 2 ಆದೇಶಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು. ಸೆಪ್ಟೆಂಬರ್ 15ರಂದು ಒಂದು ಪರವಾನಗಿಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 20ರಂದು ಜಾನ್ಸನ್ ಬೇಬಿ ಪೌಡರ್ ಉತ್ಪನ್ನದ ಉತ್ಪಾದನೆ ಮತ್ತು ಮಾರಾಟವನ್ನು ತಕ್ಷಣವೇ ನಿಲ್ಲಿಸಲು ಆದೇಶ ನೀಡಲಾಗಿತ್ತು. ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತದ (ಎಫ್‌ಡಿಎ) ಜಂಟಿ ಆಯುಕ್ತರು ಮತ್ತು ಪರವಾನಗಿ ಪ್ರಾಧಿಕಾರವು ಈ ಆದೇಶಗಳನ್ನು ಜಾರಿಗೊಳಿಸಿತ್ತು. ಕೊಲ್ಕತ್ತಾದ ಕೇಂದ್ರೀಯ ಔಷಧ ಪ್ರಯೋಗಾಲಯದ ವರದಿಯನ್ನು ಆಧರಿಸಿ ಸರ್ಕಾರವು ತನ್ನ ಆದೇಶಗಳನ್ನು ನೀಡಿತ್ತು. ಜಾನ್ಸನ್ ಬೇಬಿ ಪೌಡರ್ನಲ್ಲಿ ನಿಗದಿತಕ್ಕಿಂತ ಹೆಚ್ಚಿನ pH ಮಟ್ಟ ಹೆಚ್ಚಿದೆ ಎಂಬುದು ಪರೀಕ್ಷೆ ವೇಳೆ ದೃಢಪಟ್ಟಿತ್ತು.
ಇದನ್ನೂ ಓದಿ: Johnson & Johnson: ಜಾನ್ಸನ್ ಬೇಬಿ ಪೌಡರ್ ಉತ್ಪಾದನೆಗೆ ಕೋರ್ಟ್ ಅನುಮತಿ; ಮಾರಾಟಕ್ಕೆ ನಿಷೇಧ
ಇದೀಗ ಜಾನ್ಸನ್ ಆ್ಯಂಡ್ ಜಾನ್ಸನ್ ತನ್ನ ಬೇಬಿ ಪೌಡರ್ ಅನ್ನು ತಯಾರಿಸಲು, ಮಾರಾಟ ಮಾಡಲು ಮತ್ತು ವಿತರಿಸಲು ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಕಂಪನಿಯ ಪರವಾನಗಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ 3 ಆದೇಶಗಳನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್ ಜಿ ದಿಗೆ ಅವರ ವಿಭಾಗೀಯ ಪೀಠವು ಡಿಸೆಂಬರ್ 2018ರಲ್ಲಿ ವಶಪಡಿಸಿಕೊಂಡ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಬೇಬಿ ಪೌಡರ್‌ನ ಮಾದರಿಯನ್ನು ಪರೀಕ್ಷಿಸಲು ವಿಳಂಬ ಮಾಡಿದ್ದಕ್ಕಾಗಿ ರಾಜ್ಯ ಆಹಾರ ಮತ್ತು ಔಷಧ ಆಡಳಿತವನ್ನು (ಎಫ್‌ಡಿಎ) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
ಸೌಂದರ್ಯವರ್ಧಕ ಉತ್ಪನ್ನಗಳಿಗೆ ಗುಣಮಟ್ಟ ಮತ್ತು ಸುರಕ್ಷತೆಯ ಮಾನದಂಡಗಳನ್ನು ಕಾಪಾಡಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಆದರೆ, ಉತ್ಪನ್ನಗಳಲ್ಲಿ ಸ್ವಲ್ಪ ಸಮಸ್ಯೆ ಉಂಟಾದಾಗ ಇಡೀ ಉತ್ಪಾದನಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದು ಸಮಂಜಸವಾಗಿ ತೋರುತ್ತಿಲ್ಲ ಎಂದು ಕೋರ್ಟ್ ಹೇಳಿದೆ.