ಬಾಂಬೆ ಹೈಕೋರ್ಟ್ ನೇಮಕಾತಿ: ಅಡುಗೆಯವರ ಹುದ್ದೆಗೆ ಅರ್ಜಿ ಆಹ್ವಾನ, 52,400 ರೂ. ವರೆಗೆ ವೇತನ!

ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠದಲ್ಲಿ 18 ಅಡುಗೆಯವರ (ಕುಕ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 10ರೊಳಗೆ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಕನಿಷ್ಠ 4ನೇ ತರಗತಿ ಪಾಸಾದವರು ಅರ್ಹರು. 18 ರಿಂದ 38 ವರ್ಷದೊಳಗಿನ ಅಭ್ಯರ್ಥಿಗಳು ಉತ್ತಮ ವೇತನದೊಂದಿಗೆ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶ ಬಳಸಿಕೊಳ್ಳಬಹುದು. ಅಡುಗೆ ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಬಾಂಬೆ ಹೈಕೋರ್ಟ್ ನೇಮಕಾತಿ: ಅಡುಗೆಯವರ ಹುದ್ದೆಗೆ ಅರ್ಜಿ ಆಹ್ವಾನ, 52,400 ರೂ. ವರೆಗೆ ವೇತನ!
ಬಾಂಬೆ ಹೈಕೋರ್ಟ್ ನೇಮಕಾತಿ

Updated on: Sep 08, 2026 | 12:50 PM

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಬಾಂಬೆ ಹೈಕೋರ್ಟ್‌ನಲ್ಲಿ ಕೆಲಸ ಮಾಡುವ ಉತ್ತಮ ಅವಕಾಶ ದೊರೆತಿದೆ. ಹೈಕೋರ್ಟ್‌ನ ಔರಂಗಾಬಾದ್ ಪೀಠದಲ್ಲಿ ಖಾಲಿ ಇರುವ ಒಟ್ಟು 18 ಅಡುಗೆಯವರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸ್ಪೀಡ್ ಪೋಸ್ಟ್ ಬಳಸಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಸಂಜೆ 5:00 ಗಂಟೆ ಕೊನೆಯ ದಿನಾಂಕವಾಗಿರುತ್ತದೆ.

ಅರ್ಹತೆ ಮತ್ತು ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು (10ನೇ ಮತ್ತು 12ನೇ ತರಗತಿ ಪಾಸಾದವರೂ ಅರ್ಹರು). ಇದರ ಜೊತೆಗೆ ಹಿಂದಿ ಭಾಷೆಗಳಲ್ಲಿ ನಿರರ್ಗಳವಾಗಿ ಓದಲು, ಬರೆಯಲು ಹಾಗೂ ಮಾತನಾಡಲು ತಿಳಿದಿರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 38 ವರ್ಷದೊಳಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ 43 ವರ್ಷದವರೆಗೆ ವಯೋಮಿತಿ ಸಡಲಿಕೆ ಇರುತ್ತದೆ.

ಅನುಭವ ಮತ್ತು ಆದ್ಯತೆ:

ಅಭ್ಯರ್ಥಿಗಳಿಗೆ ಸಸ್ಯಾಹಾರಿ ಮತ್ತು ಮಾಂಸಾಹಾರಿ ಅಡುಗೆಗಳನ್ನು ತಯಾರಿಸುವ ಜ್ಞಾನ ಹಾಗೂ ಅನುಭವವಿರಬೇಕು. 3-ಸ್ಟಾರ್ ಅಥವಾ 5-ಸ್ಟಾರ್ ಹೋಟೆಲ್‌ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವವರಿಗೆ ಅಥವಾ ಅಡುಗೆ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಆಯ್ಕೆಯ ಸಮಯದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ವೇತನ ವಿವರಗಳು:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ ಲೆವೆಲ್ S-3 ಆಧಾರದ ಮೇಲೆ ಮಾಸಿಕ 16,600 ರಿಂದ 52,400 ರೂ. ರವರೆಗೆ ವೇತನ ದೊರೆಯಲಿದೆ. ಇದರೊಂದಿಗೆ ನಿಯಮಾವಳಿಗಳ ಪ್ರಕಾರ ಲಭ್ಯವಿರುವ ಇತರ ಸರ್ಕಾರಿ ಭತ್ಯೆಗಳನ್ನು ಸಹ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಆಯ್ಕೆಯನ್ನು ಒಟ್ಟು 50 ಅಂಕಗಳ ಆಧಾರದ ಮೇಲೆ ನಡೆಸಲಾಗುತ್ತದೆ. ಇದರಲ್ಲಿ 30 ಅಂಕಗಳಿಗೆ ಅಡುಗೆ ಪ್ರಾಯೋಗಿಕ ಪರೀಕ್ಷೆ (ಉತ್ತೀರ್ಣರಾಗಲು ಕನಿಷ್ಠ 15 ಅಂಕಗಳು ಕಡ್ಡಾಯ), 10 ಅಂಕಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು 10 ಅಂಕಗಳಿಗೆ ಮೌಖಿಕ ಸಂದರ್ಶನ ಒಳಗೊಂಡಿರುತ್ತದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಅರ್ಜಿ ಶುಲ್ಕ ಮತ್ತು ಸಲ್ಲಿಸುವ ವಿಧಾನ:

ಅರ್ಜಿ ಸಲ್ಲಿಸಲು ಆರಂಭದಲ್ಲಿ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳು ಮಾತ್ರ ನಂತರದ ಹಂತದಲ್ಲಿ 200ರೂ. ಗಳ ಡಿಮ್ಯಾಂಡ್ ಡ್ರಾಫ್ಟ್ (DD) ಸಲ್ಲಿಸಬೇಕಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ಡೌನ್‌ಲೋಡ್ ಮಾಡಿ, ಅಗತ್ಯ ಶೈಕ್ಷಣಿಕ ದಾಖಲೆಗಳ ಸ್ವಯಂ-ದೃಢೀಕರಿಸಿದ ಪ್ರತಿಗಳು ಹಾಗೂ ಪಾಸ್‌ಪೋರ್ಟ್ ಅಳತೆಯ ಛಾಯಾಚಿತ್ರವನ್ನು ಲಗತ್ತಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

ಭರ್ತಿ ಮಾಡಿದ ಅರ್ಜಿಯ ಲಕೋಟೆಯ ಮೇಲೆ “ಕುಕ್ ಹುದ್ದೆಗೆ ಅರ್ಜಿ” ಎಂದು ಸ್ಪಷ್ಟವಾಗಿ ನಮೂದಿಸಿ, ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು. ವ್ಯವಸ್ಥಾಪಕರು (ಆಡಳಿತ), ಬಾಂಬೆ ಹೈಕೋರ್ಟ್, ಬೆಂಚ್ ಔರಂಗಾಬಾದ್, ಜಲ್ನಾ ರಸ್ತೆ, ಛತ್ರಪತಿ ಸಂಭಾಜಿನಗರ – 431009.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us