ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೂಚನೆ
15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೇ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಇನ್ನೂ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿತ್ತು.
ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಒತ್ತಡ ಆರೋಪಿಸಿ ಪತ್ರ ಬರೆದಿದ್ದ ಪರಮ್ವೀರ್ ಸಿಂಗ್ ಪ್ರಕರಣವನ್ನು ಸಿಬಿಐ ಮೆಟ್ಟಿಲೇರಿದೆ. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಇನ್ನೂ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿತ್ತು.
ಕೆಲ ದಿನಗಳ ಹಿಂದೆ ಮುಕೇಶ್ ಅಂಬಾನಿ ಮನೆ ಮುಂದೆ ಸ್ಪೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣ ರೋಚಕ ತಿರುವು ಪಡೆದಿತ್ತು. ಸಸ್ಪೆಂಡ್ ಆಗಿರುವ ಎಎಸ್ಐ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್, ಬಾರ್ ಮತ್ತು ರೆಸ್ಟೊರೆಂಟ್ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ವೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇಂದು ಪತ್ರ ಬರೆದಿದ್ದರು. ಈ ಗಂಭೀರ ಆರೋಪದಿಂದ ಮಹಾರಾಷ್ಟ್ರ ಶಿವಸೇನೆ-ಎನ್ಸಿಪಿ ಮೈತ್ರಿಕೂಟದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.
ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಮೇಲೆ ಪರಮ್ವೀರ್ ಸಿಂಗ್ ಇನ್ನೂ ಗಂಭೀರ ಆರೋಪ ಮಾಡಿದ್ದರು. ಮುಂಬೈನ ಖಾಸಗಿ ಹೊಟೇಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಸದ ಮೋಹನ್ ದೇಲ್ಕರ್ ಸಾವಿಗೂ ಅನಿಲ್ ದೇಶ್ಮುಖ್ ಹೆಸರು ಥಳುಕು ಹಾಕಿಕೊಂಡಿತ್ತು. ‘ಹಿರಿಯ ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ’ ಎಂದು ಆತ್ಮಹತ್ಯಾ ಪತ್ರ ಬರೆದಿದ್ದ ಸಂಸದ ಮೋಹನ್ ದೇಲ್ಕರ್ ಬರೆದುಕೊಂಡಿದ್ದರಂತೆ. ಆದರೆ ಮೋಹನ್ ದೇಲ್ಕರ್ ಅವರ ಸಾವನ್ನು ಆತ್ಮಹತ್ಯೆ ಎಂದೇ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಅನಿಲ್ ದೇಶ್ಮುಖ್ ಒತ್ತಡ ಹೇರಿದ್ದರು ಎಂದು ಪರಮ್ವೀರ್ ಸಿಂಗ್ ಆರೋಪಿಸಿದ್ದರು.
ಅನಿಲ ದೇಶ್ಮುಖ್ಗೆ ನನ್ನ ಮೇಲೆ ಅತ್ಯಂತ ಸಿಟ್ಟಿತ್ತು. ಮೋಹನ್ ದೇಲ್ಕರ್ ಸಾವನ್ನು SIT ಗೆ ನಿಡುವುದಾಗಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ದೇಶ್ಮುಖ್ ತಿಳಿಸಿದ್ದರು ಎಂದು ಪರಮ್ವೀರ್ ಸಿಂಗ್ ಪತ್ರದಲ್ಲಿ ದೂರಿದ್ದರು.
ಇದನ್ನೂ ಓದಿ: ಸಸ್ಪೆಂಡ್ ಆಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಸಿದ 8 ದುಬಾರಿ, ಐಷಾರಾಮಿ ಕಾರುಗಳು ಯಾವುವು?