AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DNA Test: ಅತ್ಯಾಚಾರ ಪ್ರಕರಣದಲ್ಲಿ ಡಿಎನ್​ಎ ಪರೀಕ್ಷೆ ನಿರ್ಣಾಯಕ ಸಾಕ್ಷ್ಯವಲ್ಲ: ಬಾಂಬೆ ಹೈಕೋರ್ಟ್​

ಅತ್ಯಾಚಾರ ಪ್ರಕರಣದಲ್ಲಿ ಡಿಎನ್​ಎ ಪರೀಕ್ಷೆಯನ್ನು ನಿರ್ಣಾಯಕ ಸಾಕ್ಷ್ಯವೆಂದು ಪರಿಗಣಿಸಲಾಗುವುದಿಲ್ಲ ದೃಢೀಕರಣಕ್ಕಾಗಿ ಮಾತ್ರ ಬಳಸಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

DNA Test: ಅತ್ಯಾಚಾರ ಪ್ರಕರಣದಲ್ಲಿ ಡಿಎನ್​ಎ ಪರೀಕ್ಷೆ ನಿರ್ಣಾಯಕ ಸಾಕ್ಷ್ಯವಲ್ಲ: ಬಾಂಬೆ ಹೈಕೋರ್ಟ್​
Bombay Highcourt
TV9 Web
| Edited By: |

Updated on:Jul 31, 2022 | 10:41 AM

Share

ಅತ್ಯಾಚಾರ ಪ್ರಕರಣದಲ್ಲಿ ಡಿಎನ್​ಎ ಪರೀಕ್ಷೆಯನ್ನು ನಿರ್ಣಾಯಕ ಸಾಕ್ಷ್ಯವೆಂದು ಪರಿಗಣಿಸಲಾಗುವುದಿಲ್ಲ ದೃಢೀಕರಣಕ್ಕಾಗಿ ಮಾತ್ರ ಬಳಸಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಜುಲೈ 26 ರಂದು ನ್ಯಾಯಾಲಯವು ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು ಮತ್ತು ವಿವರವಾದ ಆದೇಶದ ಪ್ರತಿಯು ಶುಕ್ರವಾರ ಲಭ್ಯವಾಯಿತು. ಈ ಪ್ರಕರಣದ ಆರೋಪಿಯನ್ನು ಸೆಪ್ಟೆಂಬರ್ 2020 ರಲ್ಲಿ ಬಂಧಿಸಲಾಗಿತ್ತು.

ಆರೋಪಿಯು ತನ್ನ ಊರಿನಲ್ಲಿಯೇ ವಾಸಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಂಧನಕ್ಕೊಳಲಾಗಿದ್ದ. ಆತನ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾ. ಭಾರತಿ ಡಾಂಗ್ರೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆರೋಪಿಗಳು ಬಾಲಕಿಯ ಮೇಲೆ 10 ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆಯ ಡಿಎನ್‌ಎ ಪರೀಕ್ಷೆ ನೆಗೆಟಿವ್ ಬಂದಿದೆ. ಆರೋಪದ ಪ್ರಕಾರ, ಹುಡುಗಿ ಆರೋಪಿಯ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು ಆಗ ಆಕೆಯ ಮೇಲೆ ಬಲಾತ್ಕಾರವೆಸಗಿದ್ದಾನೆ. ಡಿಎನ್‌ಎ ಪರೀಕ್ಷೆಯು ನೆಗೆಟಿವ್ ಆಗಿದೆ ಆದರೆ ತನ್ನ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ವಿವರಗಳನ್ನು ನೀಡಿರುವ ಸಂತ್ರಸ್ತೆಯ ಹೇಳಿಕೆಯನ್ನು ಸುಳ್ಳು ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಅತ್ಯಾಚಾರ ಪ್ರಕರಣದಲ್ಲಿ ಡಿಎನ್‌ಎ ಪರೀಕ್ಷೆಯನ್ನು ನಿರ್ಣಾಯಕ ಸಾಕ್ಷ್ಯ ಎಂದು ಕರೆಯಲಾಗುವುದಿಲ್ಲ ಮತ್ತು ಅದನ್ನು ದೃಢೀಕರಿಸುವ ಸಾಕ್ಷ್ಯವಾಗಿ ಮಾತ್ರ ಬಳಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

“ಡಿಎನ್ಎ ವಿಶ್ಲೇಷಣೆಯ ಪುರಾವೆಗಳನ್ನು ದೃಢೀಕರಣಕ್ಕಾಗಿ ಬಳಸಬಹುದು ಎಂಬುದರಲ್ಲಿ ಯಾವುದೇ ವಿವಾದವಿಲ್ಲ” ಎಂದು ನ್ಯಾಯಾಲಯ ಹೇಳಿದೆ. ಸಂತ್ರಸ್ತ ಬಾಲಕಿ ಮತ್ತು ಆಕೆಯ ತಾಯಿಯ ಹೇಳಿಕೆಯನ್ನು ಸೆಕ್ಷನ್ 164 ರ ಅಡಿಯಲ್ಲಿ ದಾಖಲಿಸಲಾಗಿದೆ. ಸಂತ್ರಸ್ತೆ ತನ್ನ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ಮಾಹಿತಿ ನೀಡಿದ್ದಾಳೆ, ಅದರ ಪ್ರಕಾರವೇ ದೂರು ದಾಖಲಾಗಿದೆ.

ಆರೋಪಿಗಳು ತನಗೆ ಹಣದ ಆಮಿಷವೊಡ್ಡಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು, ಹಾಗೂ ಘಟನೆ ಬಗ್ಗೆ ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿದ್ದರು.

ಬಾಲಕಿಯು ಗರ್ಭಿಣಿಯಾಗಿದ್ದಾಳೆ, ಆದರೆ ಮಗುವಿನ ತಂದೆ ಆತನೇ ಎಂದು ಸಾಬೀತಾಗಿಲ್ಲ, ಹಾಗೆಂದ ಮಾತ್ರಕ್ಕೆ ಅರ್ಜಿದಾರರು ನೀಡಿರುವ ದೂರು ಸುಳ್ಳು ಎಂದೂ ಪರಿಗಣಿಸಲಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ.

Published On - 10:40 am, Sun, 31 July 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು