ವೇಗ ಪಡೆದುಕೊಂಡ ರೂಪಾಂತರ ಕೊರೊನಾ: ಬ್ರಿಟನ್ನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸಿದ ಪ್ರಧಾನಿ ಬೋರಿಸ್ ಜಾನ್ಸನ್
ಫೆಬ್ರವರಿ ಮಧ್ಯದವರೆಗೆ ಜನರು ಮನೆಯಲ್ಲಿಯೇ ಇರಬೇಕಾಗುತ್ತೆ. ಬುಧವಾರದಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತೆ ಎಂದು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಸರ್ಕಾರಿ ಮಾಧ್ಯಮ ದೂರದರ್ಶನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ರೂಪಾಂತರ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೆ ಕಠಿಣ ಲಾಕ್‌ಡೌನ್ ಘೋಷಿಸಿದ್ದಾರೆ. ಫೆಬ್ರವರಿ ಮಧ್ಯದವರೆಗೆ ಜನರು ಮನೆಯಲ್ಲಿಯೇ ಇರಬೇಕಾಗುತ್ತೆ. ಬುಧವಾರದಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತೆ ಎಂದು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಸರ್ಕಾರಿ ಮಾಧ್ಯಮ ದೂರದರ್ಶನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಲಾಕ್‌ಡೌನ್ ವೇಳೆ ಜನರು ಮನೆಯಲ್ಲೇ ಇರಬೇಕು. ಹಾಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರೆ ಮನೆಯಿಂದ ಆಚೆ ಬರಬೇಕು. ಮತ್ತು ಅಗತ್ಯ ಅಂಗಡಿಗಳು ಮಾತ್ರ ತೆರೆದಿರುತ್ತವೆ ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಬ್ರಿಟನ್ ಪ್ರಧಾನಿ ಬೋರಿಸ್ “ಇದು ಎಷ್ಟು ಕಠಿಣವಾಗಿದೆ ಎಂದು ನನಗೆ ತಿಳಿದಿದೆ ಮತ್ತು ನೀವು ಎಷ್ಟು ನಿರಾಶೆಗೊಂಡಿದ್ದೀರಿ ಎಂದು ನನಗೆ ತಿಳಿದಿದೆ. ಲಸಿಕೆಗಳ ಬಳಕೆಯ ನಡುವೆಯೂ ನಾವು ರೂಪಾಂತರ ವೈರಸ್ ಹರಡುವಿಕೆಯನ್ನು ತಡೆಯಲು ಹೆಚ್ಚಿನ ಕೆಲಸ ಮಾಡಬೇಕಿದೆ. ಈಗ ದೇಶದಾದ್ಯಂತ ಲಾಕ್‌ಡೌನ್ ಮಾಡುತ್ತಿರುವುದು ಅನಿವಾರ್ಯವಾಗಿದೆ” ಎಂದು ಹೇಳಿದ್ದಾರೆ. ಕಳೆದ ಏಪ್ರಿಲ್ ತಿಂಗಳಿಗೆ ಹೋಲಿಸಿದ್ರೆ ಸೋಂಕು ಹರಡುವಿಕೆಯ ಪ್ರಮಾಣ ಶೇ 40ರಷ್ಟು ಹೆಚ್ಚಾಗಿದೆ ಎಂದು ಬೋರಿಸ್ ಜಾನ್ಸನ್ ಆತಂಕ ವ್ಯಕ್ತಪಡಿಸಿದ್ದಾರೆ.
Published On - 9:15 am, Tue, 5 January 21